Home
Deal of the day

ನಿಮ್ಮ ಹೆಂಡತಿಗೆ ಈ ಫೋನ್ ಗಿಫ್ಟ್ ಕೊಡಬಹುದು! 6000mAh ಬ್ಯಾಟರಿ.. 50MP ಕ್ಯಾಮೆರಾ.. ಭರ್ಜರಿ ಡಿಸ್ಕೌಂಟ್!

ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರಸಿದ್ಧ ಟೆಕ್ ಕಂಪನಿಗಳು ಹಲವು ಆಫರ್‌ ಘೊಷಿಸಿವೆ. ಈ ಮೂಲಕ ತನ್ನ ಗ್ರಾಹಕರನ್ನು ಆಕರ್ಷಿಸುತ್ತಿವೆ. ಅದರಂತೆ ಮೊಟೊರೊಲಾ ಸಹ ಮೊಬೈಲ್ ಪ್ರಿಯರಿಗೆ ಉಡುಗೊರೆ ನೀಡಿದೆ. ಹೌದು, ಕಂಪನಿಯು ಮೊಟೊ G64 5G (Moto G64 5G) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಈ ಫೋನ್‌ ಖರೀದಿ ಮೇಲೆ 1,000 ರಿಯಾಯಿತಿ ಲಭ್ಯವಿದೆ. ಈ ಆಫರ್‌ ಜನವರಿ 21 ರವರೆಗೆ ಮಾತ್ರ ಇರುತ್ತದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಮೊಟೊ G64 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು 50MP ಕ್ಯಾಮೆರಾ ಮತ್ತು 16MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6000mAh ದೊಡ್ಡ ಬ್ಯಾಟರಿ ಮತ್ತು 33W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಈ ಮೊಟೊ G64 5G ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ನೀವು ಮಿಂಟ್ ಗ್ರೀನ್, ಪರ್ಲ್ ಬ್ಲೂ ಮತ್ತು ಐಸ್ ಲಿಲಾಕ್‌ ಬಣ್ಣಗಳಲ್ಲಿ ಖರೀದಿಸಬಹುದು.

Moto G64 ಬೆಲೆ ಇಳಿಕೆ! 6000mAh ಬ್ಯಾಟರಿ, 50MP ಕ್ಯಾಮೆರಾ.. ಬೆಲೆ ಎಷ್ಟು?

ಮೊಟೊ G64 5G ಬೆಲೆ ಮತ್ತು ಆಫರ್‌ಗಳು

ಮೊಟೊ G64 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 14,999 ರೂ. ಇದೆ. ಪ್ರಸ್ತುತ, ಕಂಪನಿಯು 1,000 ರೂ. ರಿಯಾಯಿತಿ ನೀಡುತ್ತಿದೆ. ನೀವು, ಕೇವಲ 13,999 ರೂ.ಗೆ ಈ ಮೊಬೈಲ್ ಖರೀದಿಸಬಹುದು. ಹಾಗೆಯೇ 12GB RAM + 256GB ಸ್ಟೋರೇಜ್ ಆಯ್ಕೆಯನ್ನು 15,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದರ ಬಿಡುಗಡೆ ಬೆಲೆ 16,999 ರೂ. ಆಗಿದೆ. ಈ ಆಫರ್‌ ಆಫ್‌ಲೈನ್ ಮತ್ತು ಕಂಪನಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಮೊಟೊ G64 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಮೊಟೊ G64 5G ಸ್ಮಾರ್ಟ್‌ಫೊನ್ 6.5 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಐಪಿಎಸ್‌ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2400 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರ ಹೊಂದಿದೆ.

ಪ್ರೊಸೆಸರ್ ಯಾವುದು?

ಮೊಟೊ G64 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 7025 ಪ್ರೊಸೆಸರ್‌ ಹೊಂದಿದೆ. ಈ ಫೋನ್ ಆಂಡ್ರಾಯ್ಡ್‌ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಟೊ ಸ್ಮಾರ್ಟ್‌ಫೋನ್ 8GB RAM + 128GB ಮತ್ತು 12GB RAM + 256GB ಸ್ಟೋರೇಜ್‌ ಆಯ್ಕೆ ಹೊಂದಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್‌ ಹೆಚ್ಚಿಸಬಹುದು.

ಕ್ಯಾಮೆರಾ ಸೆಟಪ್

ಮೊಟೊ G64 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

6000mAh ಬಿಗ್ ಬ್ಯಾಟರಿ

ಮೊಟೊ G64 5G ಫೋನ್ 6000mAh ಸಾಮರ್ಥ್ಯ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಫೋನ್ 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಮೊಟೊ G64 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸಹ ಹೊಂದಿದೆ. ಕನೆಕಕ್ಟಿವಿಟಿ ಆಯ್ಕೆಗಳಲ್ಲಿ ಇದು ಎನ್‌ಎಫ್‌ಸಿ ಮತ್ತು ಬ್ಲೂಟೂತ್ 5.3 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Rs 1000 discount offer on Moto G64 5G smartphone in india: Know offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+