10,000ಕ್ಕಿಂತ ಕಡಿಮೆ! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ Moto ಫೋನಿನ ಬೆಲೆ ಭರ್ಜರಿ ಇಳಿಕೆ
ಸಂಕ್ರಾಂತಿಗೆ ಹೊಸ ಫೋನ್ ಖರೀದಿಸಲು ಬಯಸುವವರಿಗೆ ಇಲ್ಲಿದೆ ಬಂಪರ್ ಆಫರ್. ನೀವು 10,000 ರೂ.ಗಿಂತ ಕಡಿಮೆ ಬೆಲೆಯ 5G ಫೋನ್ ಹುಡುಕುತ್ತಿದ್ದರೆ, ಮೊಟೊರೊಲಾ ತನ್ನ ಕೈಗೆಟುಕುವ ಸ್ಮಾರ್ಟ್‌ಫೋನ್ ಬೆಲೆಯನ್ನು ಕಡಿಮೆ ಮಾಡಿದೆ. ಹೌದು, ಮೊಟೊ G45 5G (Moto G45 5G) ಮೊಬೈಲ್ ಅಗ್ಗದ ದರದಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಈ ಮೊಬೈಲ್‌ನಲ್ಲಿ ಭಾರೀ ರಿಯಾಯಿತಿ ನೀಡುತ್ತಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಮೊಟೊ G45 5G ಮೊಬೈಲ್ 50MP ಮುಖ್ಯ ಕ್ಯಾಮೆರಾ ಮತ್ತು 16MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 6s ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಜೊತೆಗೆ 8GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ಸ್ಪೀಡ್ ಚಾರ್ಜಿಂಗ್ ಒಳಗೊಂಡಿದೆ. ಇದು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ನೀವು, ಈ ಫೋನ್ ಕೊಂಡರೆ ಹೆಚ್ಚು ಹಣ ಉಳಿತಾಯ ಮಾಡಬಹುದು.

ಮೊಟೊ G45 5G ಫೋನಿನ ವೈಶಿಷ್ಟ್ಯಗಳು
ಡಿಸ್ಲ್ಪೇ ವಿವರ
ಮೊಟೊ G45 5G ಮೊಬೈಲ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಲ್ಪೇಯನ್ನು ಹೊಂದಿದೆ. ಇದು 1600 x 720 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಲ್ಪೇಯು 120Hz ರಿಫ್ರೆಶ್ ದರ, 500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊ G45 5G ಫೋನ್ ಸ್ನಾಪ್‌ಡ್ರಾಗನ್ 6s ಜೆನ್ 3 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 4GB, 8GB RAM ಮತ್ತು 128GB ಸ್ಟೋರೇಜ್ ಹೊಂದಿದೆ. ನೀವು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಕ್ಯಾಮೆರಾ ಸೆಟಪ್
ಮೊಟೊ G45 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊ G45 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು
ಮೊಟೊ G45 5G ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದ ಹೊಂದಿದೆ. ಜೊತೆಗೆ ಡ್ಯುಯಲ್ ಸಿಮ್ 5G, ಬ್ಲೂಟೂತ್ 5.2, ವೈ-ಫೈ ಸೇರಿದಂತೆ ಹಲವು ಸೌಲಭ್ಯಗಳು ಲಭ್ಯವಿದೆ.
ಮೊಟೊ G45 5G ಬೆಲೆ ಮತ್ತು ಆಫರ್
ಮೊಟೊ G45 5G ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಎರಡು ರೂಪಾಂತರಗಳ ಬೆಲೆಯನ್ನು 1,000 ರೂ. ಇಳಿಕೆ ಮಾಡಿದೆ. ನೀವು ಫೋನಿನ 4GB RAM + 128GB
ಸ್ಟೋರೇಜ್ ರೂಪಾಂತರವನ್ನು 9,999 ರೂ.ಗೆ ಖರೀದಿಸಬಹುದು. ಇದನ್ನು 10,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. 8GB RAM + 128GB ಸ್ಟೋರೇಜ್ ಬೆಲೆಯು 12,999 ರೂ. ಆಗಿದೆ. ಪ್ರಸ್ತುತ ರಿಯಾಯಿತಿಯೊಂದಿಗೆ 11,999 ರೂ.ಗ ಲಭ್ಯವಿದೆ.
ಮೊಟೊ G45 5G ಫೋನಿನ ಈ ಆಫರ್ ನಿನ್ನೆಯಿಂದ (ಜನವರಿ 13) ಜಾರಿಗೆ ಬಂದಿದೆ. ಈ ಅಗ್ಗದ 5G ಫೋನ್ ಆನ್‌ಲೈನ್ ಶಾಪಿಂಗ್ ಸೈಟ್‌ಗಳು, ಕಂಪನಿಯ ವೆಬ್‌ಸೈಟ್, ಆಫ್‌ಲೈನ್ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟವಾಗಲಿದೆ. ಈ ಆಫರ್ ಜನವರಿ 21 ರವರೆಗೆ ಮಾತ್ರ ಲಭ್ಯವಿರುತ್ತದೆ. ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ನೀವು ವಿವಾ ಮೆಜೆಂಟಾ, ಬ್ರಿಲಿಯಂಟ್ ಬ್ಲೂ ಮತ್ತು ಬ್ರಿಲಿಯಂಟ್ ಗ್ರೀನ್ ಬಣ್ಣಗಳಲ್ಲಿ ಕೊಳ್ಳಬಹುದು.


Click it and Unblock the Notifications








