ಕೇವಲ ಒಂದೇ ತಿಂಗಳಲ್ಲಿ..! Samsung Galaxy A36 5G ಬೆಲೆ ಇಳಿಕೆ.. ಹೊಸ ಬೆಲೆ, ರಿಯಾಯಿತಿ ಎಷ್ಟು?
ಸ್ಯಾಮ್‌ಸಂಗ್ ಮೊಬೈಲ್ ಪ್ರಿಯರು ಖುಷಿ ಪಡುವ ಸುದ್ದಿ ಇದು. ಬಿಡುಗಡೆಯಾದ ಕೇವಲ ಒಂದು ತಿಂಗಳೊಳಗೆ ಹೊಸ ಫೋನಿನ ಬೆಲೆ ಭಾರೀ ಇಳಿಕೆ. ಇದು ಬಹಳ ಅಪರೂಪ. ಆದರೆ, ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ಅಭಿಮಾನಿಗಳಿಗೆ ಈ ಉಡುಗೊರೆ ನೀಡಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G (Samsung Galaxy A36 5G) ಮೊಬೈಲ್ ಖರೀದಿ ಮೇಲೆ ಬಂಪರ್ ಆಫರ್ ಘೋಷಿಸಿದೆ. ಈ ಫೋನಿನ ಎಲ್ಲಾ ಸ್ಟೋರೇಜ್ ರೂಪಾಂತರಗಳ ಬೆಲೆ ಕಡಿಮೆಯಾಗಿದೆ. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನನ್ನು ಕಳೆದ ತಿಂಗಳು (ಮಾರ್ಚ್) ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಇದೀಗ ಏಪ್ರಿಲ್ ಆರಂಭದಲ್ಲೇ ಇದರ ಬೆಲೆಯನ್ನು 2,000 ರೂ. ಇಳಿಕೆ ಮಾಡಲಾಗಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಇದರೊಂದಿಗೆ 5000mAh ಬ್ಯಾಟರಿ, 256GB ಸ್ಟೋರೇಜ್, 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಮಾರಾಟವಾಗುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಹೊಸ ಬೆಲೆ ಮತ್ತು ಆಫರ್
8GB RAM + 128GB ಸ್ಟೋರೇಜ್ ಬೆಲೆ = 32,999 ರೂ.
ಹೊಸ ಬೆಲೆ = 30,999 ರೂ.
8GB RAM + 256GB ಸ್ಟೋರೇಜ್ ಬೆಲೆ = 35,999 ರೂ.
ಹೊಸ ಬೆಲೆ = 33,999 ರೂ.
12GB RAM + 256GB ಸ್ಟೋರೇಜ್ ಬೆಲೆ = 38,999 ರೂ.
ಹೊಸ ಬೆಲೆ = 36,999 ರೂ.
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನನ್ನು 32,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಯಾಮ್‌ಸಂಗ್ ಮೊಬೈಲ್ ಅವೆಸ್ಯೂಮ್ ಲ್ಯಾವೆಂಡರ್, ಅವೆಸ್ಯೂಮ್ ಬ್ಲಾಕ್, ಅವೆಸ್ಯೂಮ್ ವೈಟ್ ಮತ್ತು ಅವೆಸ್ಯೂಮ್ ಲೈಮ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ನೀವು ಆಫ್‌ಲೈನ್ ಪ್ಲಾಟ್‌ಫಾರ್ಮ್‌ಗಳು, ಮೊಬೈಲ್ ಅಂಗಡಿಗಳು ಹಾಗೂ ಆನ್‌ಲೈನ್ ಶಾಪಿಂಗ್ ಸೈಟ್‌ಗಳು ಮತ್ತು ಕಂಪನಿ ವೆಬ್‌ಸೈಟ್ ಮೂಲಕ ಕಡಿಮೆ ದರದಲ್ಲಿ ಖರೀದಿಸಬಹುದು.
ಪ್ರಸ್ತುತ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನಿನ ಬೆಲೆಯನ್ನು 2,000 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಈ ಬೆಲೆ ಇಳಿಕೆ ಫೋನಿನ ಎಲ್ಲಾ ರೂಪಾಂತರಗಳಿಗೂ ಅನ್ವಯವಾಗುತ್ತದೆ. ಬೆಲೆ ಕಡಿತದ ಬಳಿಕ ನೀವು ಈ ಫೋನನ್ನು ಕ್ರಮವಾಗಿ 30,999 ರೂ., 33,999 ರೂ. ಮತ್ತು 36,999 ರೂ.ಗಳಿಗೆ ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಸಹ ಹೊಂದಿದೆ. ಈ ಸ್ಯಾಮ್‌ಸಂಗ್ 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಅಡ್ರಿನೊ 710 ಜಿಪಿಯು ಸಹ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನನ್ನು ಪೂರ್ಣ ಚಾರ್ಜ್ ಬಳಿಕ 29 ಗಂಟೆಗಳವರೆಗೆ ಬಳಸಬಹುದು. ಈ ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ಮೂರು RAM ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಇದು 6GB RAM, 12GB RAM ಮತ್ತು 8GB RAM ಹೊಂದಿದೆ. ಹಾಗೆಯೇ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್‌ನೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5GHz ವೈ-ಫೈ, ಬ್ಲೂಟೂತ್ 5.3, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಆಡಿಯೋ ಮತ್ತು ಸ್ಟೀರಿಯೊ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








