Home
Deal of the day

ಇಲ್ನೋಡಿ ಫ್ರೆಂಡ್ಸ್..! 8000 ರಿಯಾಯಿತಿ.. ಕಡಿಮೆ ಬೆಲೆಗೆ 'ದೈತ್ಯ' ಫೋನ್ ಲಭ್ಯ..! ಹೇಗೆ, ಎಲ್ಲಿ ಖರೀದಿಸಬೇಕು?

ಟೈಕ್ ದೈತ್ಯ ಸ್ಯಾಮ್‌ಸಂಗ್‌ನಿಂದ ಎರಡು ಸಿಹಿಸುದ್ದಿ ಘೋಷಣೆ. ಕಂಪನಿಯು ಮೇ 13 ರಂದು ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಎಡ್ಜ್ (Samsung Galaxy S25 Edge) ಅನ್ನು ಬಿಡುಗಡೆ ಮಾಡಲಿದೆ. ಇದಕ್ಕೂ ಮೊದಲೇ, ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25 5G) ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಕಂಪನಿಯ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಕಳೆದ ವರ್ಷ ಬಿಡುಗಡೆಯಾದ ಈ ಮೊಬೈಲ್ ಅನ್ನು ಪ್ರಸ್ತುತ, ಭಾರೀ ರಿಯಾಯಿತಿಯೊಂದಿಗೆ ಖರೀದಿಸಬಹುದು. ಈ 5G ಫೋನನ್ನು ಹೇಗೆ ಮತ್ತು ಎಲ್ಲಿ ಖರೀದಿಸಬಹುದು? ಎಂಬ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಸ್ಯಾಮ್‌ಸಂಗ್‌ನ Exynos 2500 ಪ್ರೊಸೆಸರ್‌ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.2 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದರೊಂದಿಗೆ 12GB RAM + 512GB ಸ್ಟೋರೇಜ್‌, 4000mAh ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಬ್ಯಾಂಕ್ ಕಾರ್ಡ್ ಆಫರ್‌ಗಳೊಂದಿಗೆ, ಪ್ರಸ್ತುತ ಈ 5G ಫೋನನ್ನು 8,000 ರೂ.ಗಳ ರಿಯಾಯಿತಿಯಲ್ಲಿ ಖರೀದಿಸಬಹುದು. ಜೊತೆಗೆ ಕ್ಯಾಶ್‌ಬ್ಯಾಕ್ ಮತ್ತು ಎಕ್ಸ್‌ಚೇಂಜ್ ಬೋನಸ್‌ ಸಹ ಸಿಗುತ್ತದೆ.

Samsung: 8000 ರಿಯಾಯಿತಿ.. ಕಡಿಮೆ ಬೆಲೆಗೆ ಸೇಲ್.. ಖರೀದಿ ಹೇಗೆ, ಎಲ್ಲಿ?

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ 6.2 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2400 x 1080 ಪಿಕ್ಸೆಲ್ ರೆಸಲ್ಯೂಶನ್, 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ತಂತ್ರಜ್ಞಾನ ಹೊಂದಿದೆ. ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಪಡೆದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 15 ಆಧಾರಿತ ಒನ್‌ ಯುಐ 7 ಓಎಸ್‌ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 740 ಜಿಪಿಯು ಮತ್ತು ಸ್ಪೀಡ್ ಗೇಮಿಂಗ್‌ಗಾಗಿ ಜೆನ್ 2 ಎಐ ಎಂಜಿನ್ ಸಹ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಮತ್ತು 3X ಆಪ್ಟಿಕಲ್ ಜೂಮ್‌ನೊಂದಿಗೆ 10 ಮೆಗಾಪಿಕ್ಸೆಲ್ ಮೂರನೇ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಸ್ಯಾಮ್‌ಸಂಗ್ ಮೊಬೈಲ್ 4000mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ ಫಾಸ್ಟ್ ವೈರ್‌ಲೆಸ್ ಚಾರ್ಜಿಂಗ್ ಮತ್ತು ವೈರ್‌ಲೆಸ್ ಪವರ್‌ಶೇರ್ ವೈಶಿಷ್ಟ್ಯವನ್ನು ಸಹ ಹೊಂದಿದೆ.

Samsung: 8000 ರಿಯಾಯಿತಿ.. ಕಡಿಮೆ ಬೆಲೆಗೆ ಸೇಲ್.. ಖರೀದಿ ಹೇಗೆ, ಎಲ್ಲಿ?

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಬೆಲೆ ಮತ್ತು ರಿಯಾಯಿತಿ

12GB RAM + 128GB ಸ್ಟೋರೇಜ್ = 74,999 ರೂ.
ಹೊಸ ಬೆಲೆ = 66,999 ರೂ.

12GB RAM + 256GB ಸ್ಟೋರೇಜ್ = 80,999 ರೂ.
ಹೊಸ ಬೆಲೆ = 72,999 ರೂ.

12GB RAM + 512GB ಸ್ಟೋರೇಜ್ = 92,999 ರೂ.
ಹೊಸ ಬೆಲೆ = 84,999 ರೂ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ 12GB RAM ಹೊಂದಿದೆ. ಈ ಫೋನನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಮಾರುಕಟ್ಟೆಯಲ್ಲಿ ಏಪ್ರಿಲ್ 30 ರವರೆಗೆ ರಿಯಾಯಿತಿಯೊಂದಿಗೆ ಖರೀದಿಸಬಹುದು. ಕಂಪನಿಯು ಈ 5G ಫೋನನ್ನು 8,000 ರೂ.ಗಳವರೆಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಸ್ಯಾಮ್‌ಸಂಗ್ ಇಂಡಿಯಾ (Samsung India) ವೆಬ್‌ಸೈಟ್‌ನಲ್ಲಿ 66,999 ರೂ.ಗಳ ಆರಂಭಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ, ಖರೀದಿಸಿದರೆ 7,000 ರೂ. ಕ್ಯಾಶ್‌ಬ್ಯಾಕ್ ಸಿಗುತ್ತದೆ. ಜೊತೆಗೆ 1,000 ರೂ. ಹೆಚ್ಚುವರಿ ರಿಯಾಯಿತಿ ಲಭ್ಯವಿದೆ. ಎಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್ ಬಳಸಿ ಇಎಂಐ ಮಾಡಿದರೆ, 5,000 ರೂ.ಗಳ ಕ್ಯಾಶ್‌ಬ್ಯಾಕ್ ಸಿಗುತ್ತದೆ. ರಿಯಾಯಿತಿ ಮತ್ತು ಕ್ಯಾಶ್‌ಬ್ಯಾಕ್ ಹೊರತಾಗಿ, ಇತರೆ ಆಫರ್ ಸಹ ಪಡೆಯಬಹುದು. ಅಂದರೆ 8,000 ರೂ.ಗಳ ಎಕ್ಸ್‌ಚೇಂಜ್ ಬೋನಸ್ ಸಹ ಲಭ್ಯವಿದೆ. ಸ್ಯಾಮ್‌ಸಂಗ್ ಶಾಪ್ ಅಪ್ಲಿಕೇಶನ್‌ನಿಂದ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಫೋನ್ ಖರೀದಿಸುವ ಗ್ರಾಹಕರಿಗೆ 4,000 ರೂ.ಗಳ ಆಫರ್ ನೀಡಲಾಗುದೆ. ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಈ ಎಲ್ಲಾ ಕೊಡುಗೆಗಳ ಲಾಭ ಪಡೆಯಬಹುದು.

Best Mobiles in India

English summary
Rs 8,000 on discount Samsung Galaxy S25 With 12GB RAM in India: know price, offers, availability, specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+