Home
Deal of the day

8,999 ಸಾಕು! Samsung Galaxy A14 5G ಬೆಲೆ ಇಳಿಕೆ; 8,000 ಡಿಸ್ಕೌಂಟ್ ಕೂಡ ಸಿಗುತ್ತೆ!

ದಸರಾ ಹಾಗೂ ದೀಪಾವಳಿ ಮುಗಿದರೂ ಆಫರ್‌ಗಳ ಭರಾಟೆ ಕಡಿಮೆ ಆಗಿಲ್ಲ. ಹಲವು ಕಂಪನಿಗಳು ತನ್ನ ಗ್ರಾಹಕರಿಗೆ ಒಂದಿಲ್ಲೊಂದು ಆಫರ್‌ಗಳನ್ನು ನೀಡುತ್ತಿವೆ. ಈ ಸಾಲಿನಲ್ಲಿ ಟೆಕ್ ದೈತ್ಯ ಸ್ಯಾಮ್‌ಸಂಗ್ ಕೂಡ ಹಿಂದೆ ಬಿದ್ದಿಲ್ಲ. ಹೌದು, ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಫೋನ್ ಖರೀದಿ ಮೇಲೆ ಬರೋಬ್ಬರಿ 8,000 ರೂ.ಗಳ ರಿಯಾಯಿತಿ ಘೋಷಿಸಿದೆ. ನೀವು ಕೇವಲ 9,999 ರೂ.ಗೆ ಈ ಮೊಬೈಲ್ ಕೊಳ್ಳಬಹುದು. ಬನ್ನಿ, ಕಂಪನಿ ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ಎನ್ನುವುದನ್ನು ತಿಳಿಯೋಣ.

ಕಂಪನಿಯು ಕಳೆದ ವರ್ಷ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಪೋನನ್ನು ಬಿಡುಗಡೆ ಮಾಡಿತ್ತು. ಸ್ಮಾರ್ಟ್‌ಫೋನ್ ಪ್ರಿಯರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆನ್‌ಲೈನ್ ಶಾಪಿಂಗ್ ಸೈಟ್‌ಗಳಲ್ಲಿ ಉತ್ತಮ ರೇಟಿಂಗ್‌ ಸಹ ಪಡೆದಿದೆ. ಪ್ರಸ್ತುತ, ಕಂಪನಿಯು 8,000 ರೂ.ಗಳ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ. ಜೊತೆಗೆ, ಬ್ಯಾಂಕ್ ಆಫರ್‌ ಮತ್ತು ಎಕ್ಸ್‌ಚೇಂಜ್‌ ಆಫರ್‌ಗಳನ್ನು ನೀಡುತ್ತಿದೆ. ಈ ಫೋನಿನ ಹೊಸ ಬೆಲೆ, ಲಭ್ಯತೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.

8,999 ಸಾಕು! Samsung Galaxy A14 5G ಬೆಲೆ ಇಳಿಕೆ; 8,000 ಡಿಸ್ಕೌಂಟ್ ಸಹ ಲಭ್ಯ!

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಬೆಲೆ ಮತ್ತು ಆಫರ್‌ಗಳು

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡುತ್ತಿದೆ. ಫೋನಿನ ​​6GB RAM + 128GB ಸ್ಟೊರೇಜ್ ರೂಪಾಂತರದ ಮೇಲೆ ಬರೋಬ್ಬರಿ 8,000 ರೂ.ಗಳ ರಿಯಾಯಿತಿ ನಿಡುತ್ತದೆ. ನೀವು, ಕೇವಲ 10,999 ರೂ.ಗೆ ಕೊಳ್ಳಬಹುದು. ಕಂಪನಿಯು ಇದನ್ನು 18,999 ರೂ.ಗೆ ಬಿಡುಗಡೆ ಮಾಡಿತ್ತು.

ಫೋನಿನ 4GB RAM + 128GB ಸ್ಟೋರೇಜ್ ರೂಪಾಂತರವು ಕೇವಲ 9,999 ರೂ.ಗೆ ಲಭ್ಯವಿದೆ. ನೀವು 7,500 ರೂ.ಗಳ ಡಿಸ್ಕೌಂಟ್‌ನೊಂದಿಗೆ ಕೇವಲ 8,999 ರೂ.ಗಳಿಗೆ ಖರೀದಿಸಬಹುದು. ಕಂಪನಿಯು ಇದನ್ನು 16,499 ರೂ.ಗೆ ಬಿಡುಗಡೆ ಮಾಡಿತ್ತು. ನೀವು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಜೊತೆಗೆ, 6,100 ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಲಭ್ಯವಿದೆ.

ನೀವು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್‌ ಅನ್ನು ಕಪ್ಪು, ಕೆಂಪು ಮತ್ತು ಹಸಿರು ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದು. ಈ ಫೋನ್ ಕಂಪನಿಯ ವೆಬ್‌ಸೈಟ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿಯೂ ಖರೀದಿಗೆ ಲಭ್ಯವಿರುತ್ತದೆ. ಆನ್‌ಲೈನ್ ಶಾಪಿಂಗ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳನ್ನು ಪಡೆಯಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ 6.6 ಇಂಚಿನ ದೊಡ್ಡ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಐಪಿಎಸ್ ಎಲ್‌ಸಿಡಿ ಪ್ಯಾನೆಲ್ ಆಗಿದೆ. ಇದು 90Hz ರಿಫ್ರೆಶ್ ದರ ಮತ್ತು 1080 × 2408 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಅನ್ನು ಎಕ್ಸಿನೋಸ್ 1330 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಮೊಬೈಲ್ 8GB RAM ಮತ್ತು 128GB ಸ್ಟೋರೇಜ್‌ ಹೊಂದಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್‌ ವಿಸ್ತರಿಸಬಹುದು. ಈ ಸ್ಯಾಮ್‌ಸಂಗ್ ಫೋನ್ ಆಂಡ್ರಾಯ್ಡ್ 13 ಆಧಾರಿತ OneUI 5.0 ನಲ್ಲಿ ಕೆಲಸ ಮಾಡುತ್ತದೆ. ಇದರೊಂದಿಗೆ ಎರಡು ಓಎಸ್‌ ನವೀಕರಣಗಳು ಲಭ್ಯವಿದೆ.

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಫೋನ್ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್‌ನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಈ ಫೋನ್ 5G, 4G, ಡ್ಯುಯಲ್ ಬ್ಯಾಂಡ್, ವೈ-ಫೈ, ಬ್ಲೂಟೂತ್, ಜಿಪಿಎಸ್‌ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Samsung Galaxy A14 5G available with Rs 8,000 Discount on flipkart sale: know offers, availability, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+