ದೊಡ್ಡ ಬೆಲೆ ಕುಸಿತ! 8,000 ರಿಯಾಯಿತಿ.. ಸಸ್ತಾ ಬೆಲೆಗೆ Samsung 5G ಫೋನ್ ಸೇಲ್
ಹಬ್ಬಗಳ ಸೀಸನ್ ಮುಗಿದರೂ ಆಫರ್‌ಗಳ ಭರಾಟೆ ಕಡಿಮೆ ಆಗಿಲ್ಲ. ಹಲವು ಕಂಪನಿಗಳು ತನ್ನ ಗ್ರಾಹಕರಿಗೆ ಒಂದಿಲ್ಲೊಂದು ಆಫರ್‌ಗಳನ್ನು ನೀಡುತ್ತಿವೆ. ಈ ಸಾಲಿನಲ್ಲಿ ಟೆಕ್ ದೈತ್ಯ ಸ್ಯಾಮ್‌ಸಂಗ್ ಕೂಡ ಹಿಂದೆ ಬಿದ್ದಿಲ್ಲ. ಹೌದು, ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಫೋನ್ ಖರೀದಿ ಮೇಲೆ ಬರೋಬ್ಬರಿ 8,000 ರೂ.ಗಳ ದೊಡ್ಡ ರಿಯಾಯಿತಿ ಘೋಷಿಸಿದೆ. ನೀವು ಕೇವಲ 12,999 ರೂ.ಗೆ ಈ ಮೊಬೈಲ್ ಕೊಳ್ಳಬಹುದು. ಬನ್ನಿ, ಕಂಪನಿ ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ಎನ್ನುವುದನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಪೋನನ್ನು ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಸ್ಮಾರ್ಟ್‌ಫೋನ್ ಪ್ರಿಯರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆನ್‌ಲೈನ್ ಶಾಪಿಂಗ್ ಸೈಟ್‌ಗಳಲ್ಲಿ ಉತ್ತಮ ರೇಟಿಂಗ್ ಸಹ ಪಡೆದಿದೆ. ಪ್ರಸ್ತುತ, ಕಂಪನಿಯು 8,000 ರೂ.ಗಳ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ. ಜೊತೆಗೆ, ಬ್ಯಾಂಕ್ ಆಫರ್ ಮತ್ತು ಎಕ್ಸ್‌ಚೇಂಜ್ ಆಫರ್‌ಗಳನ್ನು ನೀಡುತ್ತಿದೆ. ಈ ಫೋನಿನ ಹೊಸ ಬೆಲೆ, ಲಭ್ಯತೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಬೆಲೆ ಮತ್ತು ಆಫರ್‌ಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡುತ್ತಿದೆ. ಈಗ ಫ್ಲಿಪ್‌ಕಾರ್ಟ್‌ನಲ್ಲಿ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 12,999 ರೂ.ಗಳಿಗೆ ಪಟ್ಟಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ಕಳೆದ ವರ್ಷ 20,999 ರೂ.ಗಳಿಗೆ ಬಿಡುಗಡೆ ಮಾಡಲಾಯಿತು. ಅಂದರೆ, ಪ್ರಸ್ತುತ, ಅದರ ಬೆಲೆ 8,000 ರೂ.ಗಳಷ್ಟು ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದಲ್ಲದೆ, ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್‌ನಲ್ಲಿ ಶೇ.5 ರಷ್ಟು ರಿಯಾಯಿತಿ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಈ ಮೊಬೈಲ್ ಕಪ್ಪು, ಕೆಂಪು ಮತ್ತು ಹಸಿರು ಬಣ್ಣಗಳ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ 6.6 ಇಂಚಿನ ದೊಡ್ಡ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಐಪಿಎಸ್ ಎಲ್‌ಸಿಡಿ ಪ್ಯಾನೆಲ್ ಆಗಿದೆ. ಇದು 90Hz ರಿಫ್ರೆಶ್ ದರ ಮತ್ತು 1080 × 2408 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನನ್ನು ಎಕ್ಸಿನೋಸ್ 1330 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಸ್ಯಾಮ್‌ಸಂಗ್ ಫೋನ್ ಆಂಡ್ರಾಯ್ಡ್ 13 ಆಧಾರಿತ OneUI 5.0 ನಲ್ಲಿ ಕೆಲಸ ಮಾಡುತ್ತದೆ. ಇದರೊಂದಿಗೆ ಎರಡು ಓಎಸ್ ನವೀಕರಣಗಳು ಲಭ್ಯವಿದೆ. ಈ ಮೊಬೈಲ್ 8GB RAM ಮತ್ತು 128GB ಸ್ಟೋರೇಜ್ ಹೊಂದಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.
ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಫೋನ್ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, 4G, ಡ್ಯುಯಲ್ ಬ್ಯಾಂಡ್, ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








