Home
Deal of the day

Samsung ಮೊಬೈಲ್‌ ಖರೀದಿಸುವ ಗ್ರಾಹಕರೇ ಇಲ್ಲಿ ಗಮನಿಸಿ!..ಬೆಸ್ಟ್‌ ಆಫರ್‌ ಇದೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನದಲ್ಲಿ ಇರುವ ಸ್ಯಾಮ್‌ಸಂಗ್‌ (Samsung) ಸಂಸ್ಥೆಯು ತನ್ನ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅವುಗಳ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G (Samsung Galaxy A15 5G) ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೊ G99 SoC ಪ್ರೊಸೆಸರ್‌ ಪವರ್‌ ಪಡೆದುಕೊಂಡಿದೆ.

ಹೌದು, ಸದ್ಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಲೈವ್‌ ಇರುವ 'ಸ್ಮಾರ್ಟ್‌ಫೋನ್‌ ಫೆಸ್ಟಿವಲ್‌ ಸೇಲ್‌'ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G (Samsung Galaxy A15 5G) ಮೊಬೈಲ್‌ ಶೇ. 23% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 16,490ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ.

Samsung ಮೊಬೈಲ್‌ ಖರೀದಿಸುವ ಗ್ರಾಹಕರೇ ಇಲ್ಲಿ ಗಮನಿಸಿ!..ಬೆಸ್ಟ್‌ ಆಫರ್‌ ಇದೆ!

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಫೋನ್‌ ತ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಅಲ್ಲದೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಗ್ರಾಹಕರು ಇದನ್ನು ಬ್ಲೂ, ಲೈಟ್‌ ಬ್ಲೂ ಹಾಗೂ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಮೊಬೈಲ್‌ ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ 6.5 ಇಂಚಿನ S AMOLED ಇನ್ಫಿನಿಟಿ U ನಾಚ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 800 ನಿಟ್ಸ್‌ ಬ್ರೈಟ್‌ನೆಸ್ ಅನ್ನು ನೀಡುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ 4G ಮಾದರಿಯು ಮೀಡಿಯಾ ಟೆಕ್‌ ಹಿಲಿಯೊ G99 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14 ಓಎಸ್‌ ಸಫೋರ್ಟ್‌ ಜೊತೆಗೆ ರನ್‌ ಆಗಲಿದೆ. ಹಾಗೆಯೇ ಇದು 8GB RAM ಮತ್ತು 128 GB ಹಾಗೂ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಲಭ್ಯ ಇದೆ. ಇದರ 5G ಆವೃತ್ತಿಯು 8GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯದಲ್ಲಿ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ ತ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದರ ಜೊತೆಗೆ 13 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ. ಈ ಡಿವೈಸ್‌ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Samsung Galaxy A15 5G now available at amazing price drop in flipkart india. check out mobile, offer price, discount and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+