Samsung: ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಬೆಲೆ ಕಡಿತ! ಹೊಸ ಬೆಲೆ ಎಷ್ಟು?
ಸ್ಯಾಮ್‌ಸಂಗ್ (Samsung) ಕೆಲವು ದಿನಗಳ ಹಿಂದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ (Samsung Galaxy A15 smartphone) ಅನ್ನು ಅನಾವರಣ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಭಿನ್ನ ಫೀಚರ್ಸ್ ಆಯ್ಕೆ ಮೂಲಕ ಗ್ರಾಹಕರನ್ನು ಸೆಳೆದಿತ್ತು. ಆದರೆ ಇದೀಗ ಈ ಫೋನ್‌ಗೆ ಅಧಿಕೃತವಾಗಿ ಬೆಲೆ ಇಳಿಕೆ ಮಾಡಲಾಗಿದೆ.
ಹೌದು, ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತದಲ್ಲಿ ಲಾಂಚ್ ಆದ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ಮಿಡ್ ರೇಂಜ್ ವಿಭಾಗದಲ್ಲಿ ಲಾಂಚ್ ಮಾಡಲಾಗಿದ್ದು, ಎರಡು ವೇರಿಯಂಟ್ ಆಯ್ಕೆಯಲ್ಲಿ ಲಭ್ಯ ಇದೆ. ಹಾಗಿದ್ರೆ, ಈ ಫೋನ್‌ನ ಹೊಸ ಬೆಲೆ ಎಷ್ಟು?, ಇದರ ಫೀಚರ್ಸ್ ಏನು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಬೆಲೆ ಕಡಿತ: ಸ್ಯಾಮ್‌ಸಂಗ್ ಅನ್ನು ಮೊದಲೇ ತಿಳಿಸಿದಂತೆ ಎರಡು ವೇರಿಯಂಟ್ ಆಯ್ಕೆಯಲ್ಲಿ ಲಾಂಚ್ ಮಾಡಲಾಗಿತ್ತು. ಒಂದು 8GB + 128GB ಮತ್ತೊಂದು 8GB + 256GB ಸ್ಟೋರೇಜ್ ಆಯ್ಕೆಯ ಫೋನ್. ಇವುಗಳು ಕ್ರಮವಾಗಿ 19,499ರೂ.ಗಳು ಮತ್ತು 22,499 ರೂ.ಗಳ ಬೆಲೆ ಹೊಂದಿತ್ತು. ಆದರೆ ಈಗ ಈ ಬೆಲೆಯಲ್ಲಿ ಕಡಿತವಾಗಿದೆ.
ಈಗ 128GB ಸ್ಟೋರೇಜ್ ವೇರಿಯಂಟ್ ಮೇಲೆ 1,500 ರೂ.ಗಳ ಬೆಲೆ ಇಳಿಕೆ ಮಾಡಲಾಗಿದ್ದು, ಈ ಮೂಲಕ 17,999 ರೂ.ಗಳಿಗೆ ಲಭ್ಯ ಇದೆ. ಹಾಗೆಯೇ 3,000 ರೂ.ಗಳ ಬೆಲೆ ಇಳಿಕೆಯ ನಂತರ 256GB ಸ್ಟೋರೇಜ್ ವೇರಿಯಂಟ್ ಅನ್ನು 19,499 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇಷ್ಟೇ ಅಲ್ಲದೆ ಇನ್ನೂ ಬ್ಯಾಂಕ್ ಆಫರ್ ಸಹ ಇದ್ದು ಕಡಿಮೆ ದರದಲ್ಲಿ ಈ ಫೋನ್ ಅನ್ನು ಖರೀದಿ ಮಾಡಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಫೀಚರ್ಸ್: ಈ ಸ್ಮಾರ್ಟ್‌ಫೋನ್ ಗ್ಲಾಸ್ಟಿಕ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದರುವ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್‌ನೊಂದಿಗೆ 6.5ಇಂಚಿನ FHD+ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್ ಮತ್ತು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದಿದ್ದು, ಬಳಕೆದಾರರಿಗೆ ವಿಶೇಷವಾದ ಅನುಭವ ನೀಡಲಿದೆ.

ಇನ್ನು ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಪ್ರಬಲ ಕಾರ್ಯಕ್ಷಮತೆಯ ಅನುಭವವನ್ನು ನೀಡುತ್ತದೆ. ಹಾಗೆಯೇ 5G ಸಕ್ರಿಯಗೊಳಿಸಿದ ಸ್ಮಾರ್ಟ್‌ಫೋನ್ ವಿಸ್ತರಿತ ಸ್ಟೋರೇಜ್ ಬೆಂಬಲ ಪಡೆದಿದ್ದು, ಇದಕ್ಕಾಗಿ ಮೈಕ್ರೊ ಎಸ್‌ಎಸ್ ಕಾರ್ಡ್ ಆಯ್ಕೆ ನೀಡಲಾಗಿದೆ. ಅಲ್ಲದೆ ಈ ಫೋನ್ ಆಂಡ್ರಾಯ್ಡ್ 14 ಓಎಸ್ ಅನ್ನು ಈ ಸ್ಮಾರ್ಟ್‌ಫೋನ್ ರನ್ ಮಾಡಲಿದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ VDIS ತಂತ್ರಜ್ಞಾನದೊಂದಿಗೆ 50 ಮೆಗಾಪಿಕ್ಸೆಲ್‌ನ ಮುಖ್ಯ ಕ್ಯಾಮೆರಾದೊಂದಿಗೆ ಟ್ರಿಪಲ್ ಕ್ಯಾಮೆರಾ ಕಾನ್ಫಿಗರೇಶನ್ ಪಡೆದಿದೆ. ಜೊತೆಗೆ ಪ್ರಾಥಮಿಕ ಕ್ಯಾಮರಾಗೆ ಪೂರಕವಾಗಿ 5 ಮೆಗಾಪಿಕ್ಸೆಲ್‌ನ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್‌ನ ಮ್ಯಾಕ್ರೋ ಶೂಟರ್ ಆಯ್ಕೆ ನೀಡಲಾಗಿದ್ದು, ಸೆಲ್ಫಿಗಾಗಿ 13 ಮೆಗಾಪಿಕ್ಸೆಲ್‌ನ ಕ್ಯಾಮರಾವನ್ನು ಈ ಫೋನ್‌ನಲ್ಲಿ ಕಾಣಬಹುದು. ಉಳಿದಂತೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದ್ದು, 25W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ.

ಉಳಿದಂತೆ ಈ ಫೋನ್ ಭದ್ರತೆಗಾಗಿ ಸೈಟ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್ ಬ್ಲೂಟೂತ್ ಆವೃತ್ತಿ 5.3, A2DP, LE, ಸ್ಥಾನೀಕರಣ ಜಿಪಿಎಸ್ , ಗೆಲಿಲಿಯೊ, ಗ್ಲೋನಾಸ್, ಬಿಡಿಎಸ್ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಹಾಗೂ ಸೆನ್ಸರ್ ಆಯ್ಕೆ ಪಡೆದುಕೊಂಡಿದೆ.


Click it and Unblock the Notifications








