ಭಾರೀ ಬೆಲೆ ಕುಸಿತ! 50MP ಕ್ಯಾಮೆರಾ.. 5000mAh ಬ್ಯಾಟರಿ.. 2000 ರಿಯಾಯಿತಿ; ಯಾವ ಫೋನ್?
ಸ್ಯಾಮ್‌ಸಂಗ್ ಪ್ರಿಯರ ಸಂತೋಷಕ್ಕೆ ಪಾರವೇ ಇಲ್ಲ. ಶೀಘ್ರದಲ್ಲೇ ಮೂರು ಸೊಗಸಾದ ಫೋನ್‌ಗಳು ಬಿಡುಗಡೆಯಾಗಲಿವೆ. ಈ ಮಧ್ಯೆಯೇ, ಕಂಪನಿಯು ಮತ್ತೊಂದು ಸಿಹಿಸುದ್ದಿ ನೀಡಿದೆ. ಹೌದು, ಕಂಪನಿಯು ಇದೇ ಮಾರ್ಚ್ 2 ರಂದು ಭಾರತದಲ್ಲಿ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿದೆ. ಅವುಗಳೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A 56 5G, ಗ್ಯಾಲಕ್ಸಿ A36 5G ಮತ್ತು ಗ್ಯಾಲಕ್ಸಿ A26 5G ಫೋನ್‌ಗಳು. ಈ ಮೊಬೈಲ್‌ಗಳು ಮಾರುಕಟ್ಟೆಗೆ ಬರುವ ಮೊದಲೇ, ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G (Samsung Galaxy A16 5G) ಬೆಲೆಯನ್ನು ಇಳಿಕೆ ಮಾಡಿದೆ. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಕಡಿಮೆ ದರವೆಂಬ ಕಾರಣಕ್ಕೆ ಈ ಫೋನಿನ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಕಂಪನಿಯು ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 256GB ಸ್ಟೋರೇಜ್, 13 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಹೊಸ ಬೆಲೆ
6GB RAM + 128GB ಸ್ಟೋರೇಜ್ ಬೆಲೆ = 17,499 ರೂ.
ಹೊಸ ಬೆಲೆ = 15,499 ರೂ.
8GB + 128GB ಸ್ಟೋರೇಜ್ ಬೆಲೆ = 18,999 ರೂ.
ಹೊಸ ಬೆಲೆ = 16,999 ರೂ.
8GB + 256GB ಸ್ಟೋರೇಜ್ ಬೆಲೆ = 21,999 ರೂ.
ಹೊಸ ಬೆಲೆ = 19,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನಿನ ಮೂಲ ರೂಪಾಂತರವು 6GB RAM + 128GB ಸ್ಟೋರೇಜ್ ಹೊಂದಿದೆ. ಕಂಪನಿಯು ಇದನ್ನು 17,499 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ನೀವು ಕೇವಲ 15,499 ರೂ.ಗೆ ಖರೀದಿಸಬಹುದು. 128GB ಸ್ಟೋರೇಜ್ ಆಯ್ಕೆಯು 16,999 ರೂ.ಗೆ ಮಾರಾಟವಾಗುತ್ತಿದೆ. ಹಾಗೆಯೇ 256GB ಸ್ಟೋರೇಜ್ ವೇರಿಯಂಟ್ 19,999 ರೂ.ಗೆ ಲಭ್ಯವಿದೆ. ಸ್ಯಾಮ್‌ಸಂಗ್ ಎಲ್ಲಾ ರೂಪಾಂತರಗಳ ಖರೀದಿ ಮೇಲೆ 2,000 ರೂ. ರಿಯಾಯಿತಿ ಘೋಷಿಸಿದೆ. ನೀವು ಸ್ಯಾಮ್‌ಸಂಗ್ ಅಧಿಕೃತ ವೆಬ್‌ಸೈಟ್ ಮತ್ತು ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್ ಮೂಲಕ ಈ ಫೋನನ್ನು ಕೋಳ್ಳಬಹುದು. ಈ ಮೊಬೈಲ್ ನೀಲಿ ಕಪ್ಪು, ಗೋಲ್ಡ್ ಮತ್ತು ತಿಳಿ ಹಸಿರು ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 90Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 6300 ಪ್ರೊಸೆಸರ್ ಅನ್ನು ಹೊಂದಿದೆ. ವಿಶೇಷವೆಂದರೆ, ಇದೇ ಮೊಬೈಲ್ ಜಾಗತಿಕ ಮಾರುಕಟ್ಟೆಯಲ್ಲಿ Exynos 1330 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ 8GB RAM ಹೊಂದಿದೆ. ಇದರೊಂದಿಗೆ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ಇದು ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್ ಸೌಲಭ್ಯವನ್ನು ಸಹ ಹೊಂದಿದೆ. ನೀವು 1.5TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಮೂರು ಅದ್ಭುತ ಕ್ಯಾಮೆರಾಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಲಭ್ಯವಿದೆ.
ಬೊಂಬಾಟ್ ಬ್ಯಾಟರಿ ಬ್ಯಾಕಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಸ್ಯಾಮ್‌ಸಂಗ್ 5G ಫೋನ್, ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಇದು ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 4G ಮತ್ತು 5G, ವೈ-ಫೈ 5, ವೈ-ಫೈ ಡೈರೆಕ್ಟ್, ಬ್ಲೂಟೂತ್ 5.3, ಎನ್‌ಎಫ್‌ಸಿ, ಜಿಪಿಎಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








