Home
Deal of the day

Samsung: 50MP ಕ್ಯಾಮೆರಾ.. 256GB ಸ್ಟೋರೇಜ್.. 16% ಡಿಸ್ಕೌಂಟ್; ಯಾವ ಫೋನ್?

ಹೊಸ ಸ್ಯಾಮ್‌ಸಂಗ್‌ ಮೊಬೈಲ್ ಕೊಳ್ಳುವವರಿಗೆ ಇಲ್ಲಿದೆ ಖುಷಿ ಸುದ್ದಿ. ಕಳೆದ ತಿಂಗಳು ಬಿಡುಗಡೆಯಾಗಿದ್ದ ಹೊಸ 5G ಫೋನಿನ ಬೆಲೆ ದಿಢೀರ್ ಇಳಿಕೆಯಾಗಿದೆ. ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G (Samsung Galaxy A16 5G) ಸ್ಮಾರ್ಟ್ಫೋನ್ ಭರ್ಜರಿ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಜೊತೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ಬನ್ನಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A16 ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳು ಮತ್ತು 4 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 25W ಸ್ಪೀಡ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Samsung: 50MP ಕ್ಯಾಮೆರಾ.. 256GB ಸ್ಟೋರೇಜ್.. 16% ಡಿಸ್ಕೌಂಟ್; ಯಾವ ಫೋನ್?

ಸ್ಯಾಮ್‌ಸಂಗ್ ಗ್ಯಾಲಕ್ಸಿ A16 ಬೆಲೆ ಮತ್ತು ಆಫರ್‌ಗಳು

8GB + 128GB ಸ್ಟೋರೇಜ್ ಬೆಲೆ = 18,999 ರೂ.
8GB + 256GB ಸ್ಟೋರೇಜ್ ಬೆಲೆ = 21,999 ರೂ.

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A16 ಫೋನನ್ನು 18,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಈ ಫೋನಿನ ದರದಲ್ಲಿ ಕಡಿತವಾಗಿದೆ. ರಿಯಾಯಿತಿಯೊಂದಿಗೆ ನೀವು, ಈ ಮೊಬೈಲ್‌ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ 16,749 ರೂ.ಗೆ ಖರೀದಿಸಬಹುದು. ಆಯ್ದ ಬ್ಯಾಂಕ್ ಕಾರ್ಡ್‌ಗಳ ಪಾವತಿ ಮೇಲೆ ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಸಿಗುತ್ತದೆ. ಬಳಿಕ, ಈ ಫೋನ್ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತದೆ. ಇದು ನೀಲಿ ಕಪ್ಪು, ಗೋಲ್ಡ್ (ಚಿನ್ನ) ಮತ್ತು ತಿಳಿ ಹಸಿರು ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A16 5G ಮೊಬೈಲ್ 6.7 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಮತ್ತು 90Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A16 5G ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಈ ಫೋನನ್ನು Exynos 1330 ಪ್ರೊಸೆಸರ್‌ನೊಂದಿಗೆ ಪರಿಚಯಿಸಲಾಗಿದೆ.

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A16 5G ಸ್ಮಾರ್ಟ್‌ಫೋನ್ 8GB RAM ಜೊತೆಗೆ 128GB ಮತ್ತು 256GB ಸ್ಟೋರೇಜ್ ಹೊಂದಿದೆ. ಇದು ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್‌ನ ಸೌಲಭ್ಯವನ್ನು ಸಹ ಹೊಂದಿದೆ. ಇದರ ಮೂಲಕ 1.5TB ಸ್ಟೋರೇಜ್‌ ಹೆಚ್ಚಿಸಬಹುದು.

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A16 5G ಫೋನ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ, 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾವನ್ನು ಹೊಂದಿದೆ. ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 13 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಹೊಂದಿದೆ.

ಪವರ್‌ ಫುಲ್‌ ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A16 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A16 5G ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP54 ರೇಟಿಂಗ್ ಮತ್ತು ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 4G ಮತ್ತು 5G, ವೈ-ಫೈ 5, ವೈ-ಫೈ ಡೈರೆಕ್ಟ್, ಬ್ಲೂಟೂತ್ 5.3, ಎನ್‌ಎಫ್‌ಸಿ, ಜಿಪಿಎಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Samsung Galaxy A16 5G with 8gb ram price slashed on flipkart: check new price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+