Samsung: ದೀಪಾವಳಿ ಧಮಾಕಾ! 9,000 ಬೆಲೆ ಇಳಿಕೆ.. 15% ಡಿಸ್ಕೌಂಟ್.. ಯಾವ ಫೋನ್?
ನಿಮಗೆ ಸ್ಯಾಮ್‌ಸಂಗ್ ಮೊಬೈಲ್ ಖರೀದಿಸುವ ಬಯಕೆ ಇದ್ಯಾ? 9,000 ರೂ.ಗಿಂತ ಹೆಚ್ಚು ಡಿಸ್ಕೌಂಟ್ ಸಿಗುತ್ತೆ ಅಂದ್ರೆ ಬಿಡ್ತೀರಾ? ಹೌದು, ಸ್ಯಾಮ್‌ಸಂಗ್ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಒಳ್ಳೆಯ ಸುದ್ದಿ ಇದೆ. ಪ್ರಸ್ತುತ, ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G (Samsung Galaxy A25 5G) ಫೋನ್ ಭಾರೀ ರಿಯಾಯಿತಿಯೊಂದಿಗೆ ಲಭ್ಯವಿದೆ. ಜೊತೆಗೆ, ಶೇ.10 ರಷ್ಟು ಬ್ಯಾಂಕ್ ಆಫರ್ ಮತ್ತು ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ಕಳೆದ ವರ್ಷ ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಫೋನನ್ನು ಬಿಡುಗಡೆ ಮಾಡಿತ್ತು. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಇದು 6.5 ಇಂಚಿನ ದೊಡ್ಡ ಡಿಸ್ಪ್ಲೇಯನ್ನು ಹೊಂದಿದೆ. ಫೋನಿನಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಜೊತೆಗೆ ಎಕ್ಸಿನೋಸ್ 1280 ಆಕ್ಟಾಕೋರ್ ಪ್ರೊಸೆಸರ್, 8GB RAM, 25W ವೇಗದ ಚಾರ್ಜಿಂಗ್‌ನೊಂದಿದೆ 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಮೇಲೆ 9,124 ರೂ.ಗಳ ರಿಯಾಯಿತಿ ನೀಡುತ್ತಿದೆ. ನೀವು, ರಿಯಾಯಿತಿಯೊಂದಿಗೆ ಕೇವಲ 17,875 ರೂ.ಗೆ ಕೊಳ್ಳಬಹುದು. ಇದನ್ನು 26,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಫೋನಿನ 8GB RAM + 256 GB ಸ್ಟೋರೇಜ್ ಮೇಲೆ 6,000 ರೂ.ಗಳ ಡಿಸ್ಕೌಂಟ್ ಲಭ್ಯವಿದೆ. ಇದನ್ನು 23,990 ರೂ.ಗೆ ಖರೀದಿಸಬಹುದು. ಇದು 29,999 ರೂ.ಗೆ ಬಿಡುಗಡೆಯಾಗಿತ್ತು.
ಕಂಪನಿಯು ಬ್ಯಾಂಕ್ ಆಫರ್ ಸಹ ನೀಡುತ್ತಿದೆ. ನೀವು, ಎಸ್‌ಬಿಐ ಕ್ರೆಡಿಟ್ ಕಾರ್ಡ್‌ನಲ್ಲಿ ಶೇ.10 ರಷ್ಟು ಅಂದರೆ 1,000 ರೂ. ವರೆಗೆ ರಿಯಾಯಿತಿ ಪಡೆಯಬಹುದು. ಜೊತೆಗೆ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲೆ ಶೇ.5 ರಷ್ಟು ಹೆಚ್ಚುವರಿ ಕ್ಯಾಶ್‌ಬ್ಯಾಕ್ ಸಿಗುತ್ತದೆ. ನೀವು, ಈ ಮೊಬೈಲ್ ಅನ್ನು ಬ್ಲೂ ಬ್ಲಾಕ್, ಬ್ಲೂ ಮತ್ತು ಯೆಲ್ಲೋ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳನ್ನು ಪಡೆಯಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಮೊಬೈಲ್ 6.5 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 1080 x 2340 ಪಿಕ್ಸೆಲ್ ರೆಸಲ್ಯೂಶನ್ ಮತ್ತು 1000 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಈ ಫೋನ್ Exynos 1280 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 5 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್, ಒಐಎಸ್ ಬೆಂಬಲ ಪಡೆದಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜರ್
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಅನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಈ ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 5G, 4G, ವೈ-ಫೈ, ಬ್ಲೂಟೂತ್, 12 5G ಬ್ಯಾಂಡ್‌ಗಳ ಸಪೋರ್ಟ್ ಸೇರದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








