Home
Deal of the day

ದೊಡ್ಡ ಕುಸಿತ! 6000 ಡಿಸ್ಕೌಂಟ್‌.. ಸಖತ್ ಫೀಚರ್ಸ್‌.. ಕಮ್ಮಿ ಬೆಲೆಗೆ Samsung 5G ಫೋನ್

ಸ್ಯಾಮ್‌ಸಂಗ್ ತನ್ನ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದೆ. ಕಂಪನಿಯು ತನ್ನ 5G ಫೋನಿನ ಬೆಲೆಯನ್ನು 6 ಸಾವಿರ ರೂ.ಗಳಷ್ಟು ಇಳಿಕೆ ಮಾಡಿದೆ. ಇದರಿಂದ ಗ್ರಾಹಕರು ಸಂತಸಗೊಂಡಿದ್ದಾರೆ. ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G (Samsung Galaxy A35 5G) ಮೊಬೈಲ್ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ನೀವು ಈ ಸ್ಮಾರ್ಟ್‌ಫೋನ್‌ ಖರೀದಿಸಿದರೆ, ದೊಡ್ಡ ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 6.6 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು Exynos 1380 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಜೊತೆಗೆ 8GB RAM ಮತ್ತು 128GB ಸ್ಟೋರೇಜ್‌, 5000mAh ಬ್ಯಾಟರಿ ಮತ್ತು 25W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೀವು ಆಸ್ಸಮ್ ಐಸ್‌ ಬ್ಲೂ, ಆಸ್ಸಮ್ ಲೈಲಾಕ್ ಹಾಗೂ ಆಸ್ಸಮ್ ನಾವಿ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು. ಈ ಫೋನಿನ ಆಫರ್‌ ತಿಳಿಯಲು ಮುಂದೆ ಓದಿ.

ದೊಡ್ಡ ಕುಸಿತ! 6000 ಡಿಸ್ಕೌಂಟ್‌, ಸಖತ್ ಫೀಚರ್ಸ್‌; ಕಮ್ಮಿ ಬೆಲೆಗೆ Samsung ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಎಚ್‌ಡಿ ಪ್ಲಸ್‌ ಅಮೊಲೆಡ್‌ ಡಿಸ್ಪ್ಲೇ ಹೊಂದಿದೆ. ಇದು 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್‌, 120Hz ರಿಫ್ರೆಶ್‌ ದರ ಮತ್ತು 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.

ಪ್ರೊಸೆಸರ್ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಮೊಬೈಲ್ Exynos 1380 ಪ್ರೊಸೆಸರ್‌ ಆಕ್ಟಾಕೋರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G68 ಜಿಪಿಯು ಸಹ ಹೊಂದಿದೆ. ಈ ಫೋನ್ ಆಂಡ್ರಾಯ್ಡ್‌ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್‌ನಲ್ಲಿ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಫೋನಿನಲ್ಲಿ OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸಲ್‌ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸಲ್‌ ತೃತೀಯ ಕ್ಯಾಮೆರಾ ಹೊಂದಿವೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸಲ್‌ ಫ್ರಂಟ್ ಕ್ಯಾಮೆರಾ ಇದೆ.

ದೊಡ್ಡ ಕುಸಿತ! 6000 ಡಿಸ್ಕೌಂಟ್‌, ಸಖತ್ ಫೀಚರ್ಸ್‌; ಕಮ್ಮಿ ಬೆಲೆಗೆ Samsung ಫೋನ್

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಮೊಬೈಲ್ ಇನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸಹ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP67 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ ಸಿಮ್ 5G, 4G,ವೈ-ಫೈ 6, ಬ್ಲೂಟೂತ್ v5.3 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಬೆಲೆ ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯನ್ನು 30,999 ರೂ.ಗೆ ಪರಿಚಯಿಸಲಾಗಿದೆ. ಪ್ರಸ್ತುತ, ಕಂಪನಿಯು 5,825 ರೂ. ರಿಯಾಯಿತಿ ನೀಡುತ್ತಿದೆ. ನೀವು 25,174 ರೂ.ಗೆ ಈ ಫೋನ್ ಖರೀದಿಸಬಹುದು. ಫೋನಿನ 8GB RAM + 256GB ಸ್ಟೋರೇಜ್‌ ವೇರಿಯಂಟ್ ಬೆಲೆ 33,999 ರೂ. ಆಗಿದೆ. ಇದರ ಮೇಲೆಯೂ 5,825 ರೂ. ಡಿಸ್ಕೌಂಟ್‌ ಲಭ್ಯವಿದೆ. ನೀವು 28,174 ರೂ.ಗೆ ಕೊಳ್ಳಬಹುದು.

Best Mobiles in India

English summary
Samsung Galaxy A35 5G Price Drop in India: Check new Price, availability, specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+