Home
Deal of the day

ಕೇವಲ 6,499 ಸಾಕು! 50MP ಕ್ಯಾಮೆರಾ, ಬಿಗ್ ಬ್ಯಾಟರಿ.. ಅದೂ Samsung ಫೋನ್!

ಸ್ಯಾಮ್‌ಸಂಗ್ ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕಳೆದ ತಿಂಗಳು ಬಿಡುಗಡೆಯಾಗಿದ್ದ ಮೊಬೈಲ್‌ ಅನ್ನು ಕಡಿಮೆ ಬೆಲೆಗೆ ಖರೀದಿಸುವ ಬಂಪರ್ ಅವಕಾಶ ಕಲ್ಪಿಸಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಅನ್ನು ಕೇವಲ 6,499 ರೂ. ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು, ಪ್ರಸ್ತುತ ಈ ಮೊಬೈಲ್‌ ಅನ್ನು ಫ್ಲಿಪ್‌ಕಾರ್ಟ್ ಬಿಗ್ ಶಾಪಿಂಗ್ ಸೇಲ್ 2024 ನಲ್ಲಿ (Flipkart Big Shopping Sale 2024) ಮತ್ತಷ್ಟು ಅಗ್ಗದ ಬೆಲೆಗೆ ಖರೀದಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಂಪನಿಯು ಸೆಪ್ಟೆಂಬರ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿತ್ತು. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 25W ವೇಗದ ಚಾರ್ಜಿಂಗ್‌ನೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರೊಂದಿಗೆ, ಮೊಬೈಲ್‌ನಲ್ಲಿ 6.7 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಲಭ್ಯವಿದೆ. ಕಂಪನಿಯು ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್‌ನೊಂದಿಗೆ ಪರಿಚಯಿಸಿದೆ. ಈ ಫೋನಿನ ವಿನ್ಯಾಸ ಕೂಡ ಆಕರ್ಷಕವಾಗಿದೆ. ಕಂಪನಿಯು ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ಎನ್ನುವುದನ್ನು ತಿಳಿಯೋಣ ಬನ್ನಿ.

ಕೇವಲ 6,499 ಸಾಕು! 50MP ಕ್ಯಾಮೆರಾ, ಬಿಗ್ ಬ್ಯಾಟರಿ.. ಅದೂ Samsung ಫೋನ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಬೆಲೆ ಮತ್ತು ಆಫರ್‌ಗಳು

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನ 4GB RAM + 64GB ಇಂಟರ್ನಲ್ ಸ್ಟೋರೇಜ್ ರೂಪಾಂತರವನ್ನು ಫ್ಲಿಪ್‌ಕಾರ್ಟ್‌ನಲ್ಲಿ 6,499 ರೂ.ಗೆ ಮಾರಾಟ ಮಾಡುತ್ತಿದೆ. ಇದನ್ನು 7,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಅಕ್ಟೋಬರ್ 13 ರವರೆಗೆ ಫ್ಲಿಪ್‌ಕಾರ್ಟ್ ಬಿಗ್ ಶಾಪಿಂಗ್ ಸೇಲ್ 2024 ನಡೆಯಲಿದೆ. ಈ ಮಾರಾಟದ ಭಾಗವಾಗಿ, ಆರ್‌ಬಿಎಲ್ (RBL), ಯೆಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಆಕ್ಸೆಸ್ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ ಶೇ.10 ರಷ್ಟು ರಿಯಾಯಿತಿ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನ ಫೀಚರ್ಸ್‌

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ 6.7 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್, ಎಚ್‌ಡಿ ಪ್ಲಸ್ ಎಲ್‌ಸಿಡಿ ಸ್ಕ್ರೀನ್, 60Hz ರಿಫ್ರೆಶ್ ದರದೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಈ ಫೋನನ್ನು ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು RAM ಪ್ಲಸ್ ವೈಶಿಷ್ಟ್ಯದೊಂದಿಗೆ 8GB RAM ಹೊಂದಿದೆ. ಜೊತೆಗೆ, 64GB ಇಂಟರ್ನಲ್ ಸ್ಟೋರೇಜ್‌ ಆಯ್ಕೆ ಹೊಂದಿದೆ. ಇದಲ್ಲದೆ, ಸ್ಟೋರೇಜ್ ಅನ್ನು ಮತ್ತಷ್ಟು ಹೆಚ್ಚಿಸಲು 1TB ವರೆಗೆ ವಿಸ್ತರಿಸಬಹುದಾದ ಬೆಂಬಲವೂ ಲಭ್ಯವಿದೆ. ಇದು ಇತ್ತೀಚಿನ ಆಂಡ್ರಾಯ್ಡ್ 14 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಕಂಪನಿಯು ಎರಡು ವರ್ಷಗಳ ಓಎಸ್ ನವೀಕರಣಗಳು ಮತ್ತು ನಾಲ್ಕು ವರ್ಷಗಳ ಭದ್ರತಾ ನವೀಕರಣಗಳನ್ನು ನೀಡುತ್ತದೆ.

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ. ಇದರೊಂದಿಗೆ, 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಿಂಗ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಪ್ರಿಯರಿಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಬ್ಯಾಕಪ್

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಅನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ದೊಡ್ಡ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಬ್ರೌಸಿಂಗ್, ಗೇಮಿಂಗ್ ಮತ್ತು ಬಿಂಜ್ ವೀಕ್ಷಣೆಗೆ ಉತ್ತಮ ಆಯ್ಕೆಯಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ ಭದ್ರತೆಗಾಗಿ ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5 ಎಂಎಂ ಆಡಿಯೋ ಜಾಕ್ ಸಹ ಇದೆ. ಜೊತೆಗೆ, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Samsung Galaxy F05 available just Rs 6,499 on Flipkart Big Shopping Utsav 2024 : check price, specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+