ಇದಪ್ಪಾ ಲಾಟರಿ! ಜಸ್ಟ್ 6000ಕ್ಕೆ Samsung ಫೋನ್.. 3700 ರಿಯಾಯಿತಿ.. ಖರೀದಿ ಎಲ್ಲಿ?
ಕಡಿಮೆ ಬೆಲೆಯಲ್ಲಿ ಸ್ಯಾಮ್‌ಸಂಗ್ 5G ಫೋನ್ ಖರೀದಿಸಲು ಸಾಧ್ಯವಿಲ್ಲ ಎಂಬ ಮಾತು ದೂರವಾಗಿದೆ. ಕೇವಲ 6, 500 ರೂ.ಗಿಂತ ಕಡಿಮೆ ಬೆಲೆಗೆ ಈ ಮೊಬೈಲ್ ಲಭ್ಯವಿದೆ. ಹೌದು, ಕಂಪನಿಯು ಶೀಘ್ರದಲ್ಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F06(Samsung Galaxy F06) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದಕ್ಕೂ ಮೊದಲೇ, ತನ್ನ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಮೊಬೈಲ್ ಬೆಲೆಯನ್ನು ಭಾರೀ ಕಡಿತ ಮಾಡಿದೆ. ಬನ್ನಿ, ಈ ಸ್ಯಾಮ್‌ಸಂಗ್ ಫೋನಿನ ಮೂಲ ಬೆಲೆ, ಆಫರ್ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿತ್ತು. ಇದು ಮೀಡಿಯಾಟೆಕ್ ಹೆಲಿಯೊ G85 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಈ ಮೊಬೈಲ್‌ನಲ್ಲಿ 6.7 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 5000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಒಳಗೊಂಡಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್ ವಿಶೇಷ ಸೇಲ್‌ನಲ್ಲಿ ಶೇ.37 ರಷ್ಟು ರಿಯಾಯಿತಿ ಲಭ್ಯವಿದೆ. ಸ್ಯಾಮ್‌ಸಂಗ್ ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಹೊಸ ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಪ್ರಸ್ತುತ, ಎರಡೂ ಮಾದರಿಗಳ ಬೆಲೆ ಮತ್ತಷ್ಟು ಕಡಿಮೆ ಮಾಡಲಾಗಿದೆ. ನೀವು 500 ರೂ. ಕ್ಯಾಶ್‌ಬ್ಯಾಕ್ ಲಾಭ ಪಡೆಯಬಹುದು. ಈ ಮೂಲಕ ಈ ಫೋನಿನ ಬೆಲೆ ಕ್ರಮವಾಗಿ 10,499 ಮತ್ತು 10,999 ರೂ.ಗೆ ಇಳಿಕೆಯಾಗುತ್ತದೆ. ಇದರ ಮೂಲ ಬೆಲೆ 9,999 ರೂ. ಆಗದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಕೇವಲ 6,299 ರೂ.ಗೆ ಖರೀದಿಸಬಹುದು. ಅಂದರೆ, ಈ ಫೋನ್ ಖರೀದಿ ಮೇಲೆ ನೀವು 3,700 ರೂ. ಉಳಿತಾಯ ಮಾಡಬಹುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೀಚರ್ಸ್
ವರ್ಣರಂಜಿತ ಡಿಸ್ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್, 60Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.
ಅದ್ಭುತ ಕಾರ್ಯಕ್ಷಮತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೊ G85 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB RAM ಹೊಂದಿದೆ. ಜೊತೆಗೆ, 64GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಸೂಪರ್ ಕ್ಯಾಮೆರಾಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಬ್ಯಾಕಪ್ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5 ಎಂಎಂ ಆಡಿಯೋ ಜಾಕ್ ಸಹ ಲಭ್ಯವಿದೆ. ಕನೆಕ್ಟವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








