Home
Deal of the day

ಕೇವಲ 11,999 ರೂ.! 6000mAh ದೊಡ್ಡ ಬ್ಯಾಟರಿ.. 50MP ಕ್ಯಾಮೆರಾ.. ಅದೂ Samsung 5G ಫೋನ್

ಕ್ರಿಸ್ಮಸ್ ಬಂದಿದೆ.. ಸಾಲು ಸಾಲು ಆಫರ್‌ಗಳನ್ನು ತಂದಿದೆ. ಮೊಬೈಲ್ ಪ್ರಿಯರಿಗೆ ಫ್ಲಿಪ್‌ಕಾರ್ಟ್ ಸಿಹಿಸುದ್ದಿ ನೀಡಿದೆ. ಶೇ.25 ರಷ್ಟು ಡಿಸ್ಕೌಂಟ್‌ನೊಂದಿಗೆ ಕಡಿಮೆ ಬೆಲೆಗೆ 5G ಫೋನನ್ನು ಮಾರಾಟ ಮಾಡುತ್ತಿದೆ. ಹೌದು, ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಸೇವಿಂಗ್ ಡೇಸ್ 2024 (Flipkart Big Saving Days 2024) ನಡೆಯುತ್ತಿದೆ. ಈ ವಿಶೇಷ ಮಾರಾಟದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G (Samsung Galaxy F15 5G) ಫೋನಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ 6000mAh ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಜೊತೆಗೆ, 128GB ಸ್ಟೋರೇಜ್‌ ಮತ್ತು 25W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೊಬೈಲ್ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಯಾವೆಲ್ಲಾ ಆಫರ್‌ಗಳು ಲಭ್ಯವಿದೆ ಎಂದು ತಿಳಿಯಲು ಮುಂದೆ ಓದಿ.

ಕೇವಲ 11,999 ರೂ.! 6000mAh ಬ್ಯಾಟರಿ.. 50MP ಕ್ಯಾಮೆರಾ.. ಯಾವ ಫೋನ್?

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್ 6.5 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಫೋನ್ 2340 x 1080 ಪಿಕ್ಸೆಲ್‌ ರೆಸಲ್ಯೂಶನ್ ಮತ್ತು 90Hz ರಿಫ್ರೆಶ್ ದರ ಸೇರಿದಂತೆ ಇನ್ನಿತರ ಭದ್ರತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮೀಡಿಯಾಟೆಕ್ ಪ್ರೊಸೆಸರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿರುವ ಪ್ರೊಸೆಸರ್ ಸುಧಾರಿತ ಕಾರ್ಯಕ್ಷಮತೆಯನ್ನು ನೀಡುತ್ತದೆ. ನೀವು, ಗೇಮಿಂಗ್ ಆಪ್‌ಗಳನ್ನು ಯಾವುದೇ ಅಡಚಣೆ ಇಲ್ಲದೆ ಬಳಸಬಹುದು.

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್‌ ಹೊಂದಿದೆ. ಜೊತೆಗೆ, ಈ ಮೊಬೈಲ್ ಸ್ಟೋರೇಜ್ ವಿಸ್ತರಣೆಯನ್ನು ಹೊಂದಿದೆ. ನೀವು, ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.

ಕೇವಲ 11,999 ರೂ.! 6000mAh ಬ್ಯಾಟರಿ.. 50MP ಕ್ಯಾಮೆರಾ.. ಯಾವ ಫೋನ್?

ಟ್ರಿಪಲ್ ಕ್ಯಾಮೆರಾ ಸೆಟಪ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಈ ಫೋನ್ ಎಲ್ಇಡಿ ಫ್ಲ್ಯಾಷ್ ಮತ್ತು ವಿವಿಧ ಕ್ಯಾಮೆರಾ ವೈಶಿಷ್ಟ್ಯಗಳನ್ನು ಸಹ ಹೊಂದಿದೆ.

6000mAh ದೊಡ್ಡ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ನೀವು, ಬ್ಯಾಟರಿ ಬ್ಯಾಕಪ್‌ ಬಗ್ಗೆ ಚಿಂತಿಸಬೇಕಾಗಿಲ್ಲ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಹೊಂದಿದೆ. ಇದು 13 5G ಬ್ಯಾಂಡ್‌ಗಳ ಬೆಂಬಲದೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoltE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಬೆಲೆ ಮತ್ತು ಆಫರ್‌ಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನಿನ 4GB RAM + 128GB ಸ್ಟೋರೇಜ್‌ ರೂಪಾಂತರದ ಮೇಲೆ ಶೇ.25 ರಷ್ಟು ಡಿಸ್ಕೌಂಟ್ ಲಭ್ಯವಿದೆ. ಈ ಮೊಬೈಲ್ ಖರೀದಿಸಿದರೆ, 4000 ರೂ. ಉಳಿತಾಯ ಮಾಡಬಹುದು. ನೀವು, ರಿಯಾಯಿತಿಯಿಂದಿಗೆ ಕೇವಲ 11,999 ರೂ.ಗೆ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಜೊತೆಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ನೀಡಲಾಗುತ್ತಿದೆ. ನೀವು, ಮತ್ತಷ್ಟು ಅಗ್ಗದ ಬೆಲೆಯಲ್ಲಿ ಈ ಫೋನನ್ನು ಕೊಳ್ಳಬಹುದು.

Best Mobiles in India

English summary
Samsung Galaxy F15 5G Available With 25 percent discount on Flipkart Big Saving Days 2024: Know offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+