Home
Deal of the day

ಬಂಪರ್ ಸೇಲ್! 9,889 ದರ ಕಡಿತ.. ಶೇ.51 ರಷ್ಟು ರಿಯಾಯಿತಿ.. ಯಾವ ಫೋನ್, ವಿಶೇಷತೆಗಳೇನು?

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G (Samsung Galaxy F55 5G) ಫೋನಿನ ಬೆಲೆ ಭಾರೀ ಇಳಿಕೆಯಾಗಿದೆ. ಸ್ಯಾಮ್‌ಸಂಗ್ ಪ್ರಿಯರು ಮುಗಿಬಿದ್ದು ಈ 5G ಫೋನನ್ನು ಖರೀದಿಸುತ್ತಿದ್ದಾರೆ. ಹೌದು, ಆನ್‌ಲೈನ್ ಶಾಪಿಂಗ್ ಸೈಟ್‌ ಅಮೇಜಾನ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್ ಶೇ.51 ರಷ್ಟು ರಿಯಾಯಿತಿ ಪಡೆದಿದೆ. ಇದರೊಂದಿಗೆ ಬ್ಯಾಂಕ್ ಡಿಸ್ಕೌಂಟ್ ಮತ್ತು ಬೊಂಬಾಟ್ ಎಕ್ಸ್‌ಚೇಂಜ್‌ ಆಫರ್‌ ಸಹ ನೀಡಲಾಗುತ್ತಿದೆ. ಈ ಸ್ಯಾಮ್‌ಸಂಗ್ ಫೋನಿನ ಮೂಲ ಬೆಲೆ, ಆಫರ್‌ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್ ಮೂರು ಸ್ಟೋರೇಜ್‌ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50MP + 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಬಂಪರ್ ಸೇಲ್! 9,889 ದರ ಕಡಿತ.. ಶೇ.51 ರಷ್ಟು ರಿಯಾಯಿತಿ.. ಯಾವ ಫೋನ್?

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಹೊಸ ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್‌ನ 8GB RAM + 128GB ಸ್ಟೋರೇಜ್ ಆಯ್ಕೆಯನ್ನು 26,999 ರೂ.ಗೆ ಪರಿಚಯಿಸಲಾಗುತ್ತದೆ. ಪ್ರಸ್ತುತ, ಅಮೆಜಾನ್‌ನಲ್ಲಿ 9,889 ರೂ. ಬೆಲೆ ಇಳಿಕೆ ಮಾಡಲಾಗಿದೆ. ನೀವು ರಿಯಾಯಿತಿಯೊಂದಿಗೆ ಕೇವಲ 17,110 ರೂ.ಗೆ ಖರೀದಿಸಬಹುದು. ಈ ರಿಯಾಯಿತಿಯೊಂದಿಗೆ 16,250 ರೂ.ಗಳ ಎಕ್ಸ್‌ಚೇಂಜ್ ಆಫರ್ ಸಹ ನೀಡಲಾಗುತ್ತಿದೆ. ಕಡಿಮೆ ಬಜೆಟ್‌ನಲ್ಲಿ ಮಧ್ಯಮ ಪ್ರೀಮಿಯಂ ಸ್ಯಾಮ್‌ಸಂಗ್ 5G ಫೋನ್ ಖರೀದಿಸಲು ಇದು ಉತ್ತಮ ಸಮಯ. ಈ ಸ್ಮಾರ್ಟ್‌ಫೋನ್‌ ಏಪ್ರಿಕಾಟ್ ಕ್ರಷ್ ಮತ್ತು ರೈಸಿನ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.

ಕ್ವಾಲ್ಕಾಮ್ ಪ್ರೊಸೆಸರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಪ್ರಕ್ರಿಯೆಯಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಆಂತರಿಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಬಂಪರ್ ಸೇಲ್! 9,889 ದರ ಕಡಿತ.. ಶೇ.51 ರಷ್ಟು ರಿಯಾಯಿತಿ.. ಯಾವ ಫೋನ್?

50MP ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬೊಂಬಾಟ್ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP67 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಯುಎಸ್‌ಬಿ ಟೈಪ್ ಸಿ ಪೋರ್ಟ್, ವೈ-ಫೈ 6, ಬ್ಲೂಟೂತ್ 5.2, ಎನ್‌ಎಫ್‌ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy F55 5G Available With 51 Percent Discount on Amazon Sale: check price, specifications and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+