ಭಾರೀ ಡಿಸ್ಕೌಂಟ್! 6700 ಉಳಿತಾಯ.. 50MP + 50MP ಕ್ಯಾಮೆರಾಗಳು.. ಬಿಗ್ ಬ್ಯಾಟರಿ.. ಯಾವ ಫೋನ್?
ಸ್ಯಾಮ್‌ಸಂಗ್ ಪ್ರಿಯರು ಕಡಿಮೆ ಬೆಲೆಗೆ ಈ ಸೊಗಸಾದ ಸ್ಮಾರ್ಟ್‌ಫೋನ್ ಖರೀದಿಸಬಹುದು. ಇದರೊಂದಿಗೆ ಬರೋಬ್ಬರಿ 6,700 ರೂ. ಉಳಿತಾಯ ಮಾಡಬಹುದು. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G (Samsung Galaxy F55 5G) ಫೋನಿನ ಖರೀದಿ ಮೇಲೆ ಭಾರೀ ರಿಯಾಯಿತಿ ಘೋಷಿಸಲಾಗಿದೆ. ಈ ಆಫರ್‌ನ ಲಾಭ ಪಡೆಯಲು ಯಾವುದೇ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳ ಅಗತ್ಯವಿಲ್ಲ. ನೀವು ವ್ಯಾಲೆಂಟೈನ್ಸ್ ಡೇಗೆ (Valentine's Day) ಪತ್ನಿ ಅಥವಾ ಪ್ರೇಯಸಿಗೆ ಸ್ಮಾರ್ಟ್‌ಫೋನ್ ಗಿಫ್ಟ್ ನೀಡಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಇದು ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಒಳಗೊಂಡಿದೆ. ನೀವು 20,000 ರೂ.ಗಳ ಬಜೆಟ್‌ನಲ್ಲಿ ಈ ಫೋನನ್ನು ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಬೆಲೆ ಮತ್ತು ಆಫರ್‌ಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 26,999 ರೂ. ಆಗಿದೆ. ಪ್ರಸ್ತುತ, ಇದು ಅಮೆಜಾನ್‌ನಲ್ಲಿ 6,700 ರೂ.ಗಳ ಬೆಲೆ ಇಳಿಕೆಯೊಂದಿಗೆ ಮಾರಾಟವಾಗುತ್ತಿದೆ. ನೀವು, ರಿಯಾಯಿತಿಯೊಂದಿಗೆ ಕೇವಲ 20,299 ರೂ.ಗೆ ಖರೀದಿಸಬಹುದು. ಈ ಆಫರ್‌ನ ಪ್ರಯೋಜನ ಪಡೆಯಲು ಯಾವುದೇ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳ ಅಗತ್ಯವಿಲ್ಲ. ಹಾಗಾಗಿ, ನೀವು ಬಜೆಟ್ ಬೆಲೆಯಲ್ಲಿ ಪ್ರೀಮಿಯಂ ವೈಶಿಷ್ಟ್ಯಗಳನ್ನು ಹೊಂದಿರುವ ಸ್ಯಾಮ್‌ಸಂಗ್ ಫೋನನ್ನು ಕೊಳ್ಳಬಹುದು. ಇದು ಏಪ್ರಿಕಾಟ್ ಕ್ರಷ್ ಮತ್ತು ರೈಸಿನ್ ಬ್ಲ್ಯಾಕ್ ಬಣ್ಣದಲ್ಲಿ ಬರುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಎಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 1080 x 2400 ಪಿಕ್ಸೆಲ್ ರೆಸಲ್ಯೂಶನ್ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಪ್ರಕ್ರಿಯೆಯಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ 12GB RAM + 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ.
ಬೊಂಬಾಟ್ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP67 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ವೈ-ಫೈ 6, ಬ್ಲೂಟೂತ್ 5.2, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








