6,100 ಬೆಲೆ ಇಳಿಕೆ! 2000 ಡಿಸ್ಕೌಂಟ್.. 50MP ಸೆಲ್ಫಿ ಕ್ಯಾಮೆರಾ.. 5000mAh ಬ್ಯಾಟರಿ.. ಅದೂ Samsung ಫೋನ್
ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಈ 5G ಫೋನಿನ ಬೆಲೆಯನ್ನು ಬರೋಬ್ಬರಿ 6,100 ರೂ. ಇಳಿಕೆ ಮಾಡಿದೆ. ಹೌದು, ಕಂಪನಿಯು ತನ್ನ ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G (Samsung Galaxy F55 5G) ಫೋನಿನ ಬೆಲೆಯನ್ನು ಶೇ.28 ರಷ್ಟು ಕಡಿತಗೊಳಿಸಿದೆ. ಜೊತೆಗೆ 2,000 ರೂ. ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ನೀಡಲಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು, 20,000 ರೂ.ಗಳ ಬಜೆಟ್‌ನಲ್ಲಿ ಹೊಸ ಮೊಬೈಲ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.7 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಬೆಲೆ ಮತ್ತು ಆಫರ್‌ಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 26,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ 6,100 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ಸದ್ಯ 20,899 ರೂ.ಗೆ ಈ ಫೋನ್ ಮಾರಾಟವಾಗುತ್ತಿದೆ. ಕಂಪನಿಯ ಅಧಿಕೃತ ಸೈಟ್‌ನಲ್ಲಿ 20,999 ರೂ.ಗೆ ಲಭ್ಯವಿದೆ.
ನೀವು ಬ್ಯಾಂಕ್ ಕಾರ್ಡ್‌ನೊಂದಿಗೆ ಫೋನ್ ಖರೀದಿಸಿದರೆ, ಅಮೆಜಾನ್‌ನಲ್ಲಿ 2,000 ರೂ. ಹೆಚ್ಚುವರಿ ರಿಯಾಯಿತಿ ಲಭ್ಯವಿದೆ. ಜೊತೆಗೆ 17,000 ರೂ. ಎಕ್ಸ್‌ಚೇಂಜ್ ಆಫರ್ ಪಡೆಯಬಹುದು. ಈ ಸ್ಮಾರ್ಟ್‌ಫೋನ್ ಎರಡು ಬಣ್ಣಗಳಲ್ಲಿ ಮಾರಾಟವಾಗುತ್ತಿದೆ. ನೀವು, ಏಪ್ರಿಕಾಟ್ ಕ್ರಷ್ ಮತ್ತು ರೈಸಿನ್ ಬ್ಲ್ಯಾಕ್ ಬಣ್ಣದಲ್ಲಿ ಖರೀದಿಸಬಹುದು. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಎಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 1080 x 2400 ಪಿಕ್ಸೆಲ್ ರೆಸಲ್ಯೂಶನ್ ಮತ್ತು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಪ್ರಕ್ರಿಯೆಯಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಇದರಲ್ಲಿ 4 ವರ್ಷಗಳ ಓಎಸ್ ಅಪ್ಡೇಟ್ ಲಭ್ಯವಿದೆ.
ಸ್ಟೋರೇಜ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಫೋನಿನಲ್ಲಿ 12GB RAM + 256GB ಆಂತರಿಕ ಸ್ಟೋರೇಜ್ ಲಭ್ಯವಿದೆ.
50MP ಸೆಲ್ಫಿ ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಶಕ್ತಿಶಾಲಿ ಬ್ಯಾಟರಿ
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಅನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಟರಿಯ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP67 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಯುಎಸ್‌ಬಿ ಟೈಪ್ ಸಿ ಪೋರ್ಟ್, ವೈ-ಫೈ 6, ಬ್ಲೂಟೂತ್ 5.2, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








