Home
Deal of the day

ಜಸ್ಟ್ 10,368 ರೂ.! 6000mAh ಬ್ಯಾಟರಿ.. 50MP ಕ್ಯಾಮೆರಾ.. ಸಸ್ತಾ ಬೆಲೆಗೆ Samsung 5G ಫೋನ್

ಫ್ಲಿಪ್‌ಕಾರ್ಟ್‌ನಲ್ಲಿ ವಿಶೇಷ ಮಾರಾಟದಲ್ಲಿ ಈ ಸ್ಯಾಮ್‌ಸಂಗ್ ಮೊಬೈಲ್‌ ಅಗ್ಗದ ಬೆಲೆಗೆ ಲಭ್ಯವಿದೆ. ನೀವು ಶೇ.25 ರಷ್ಟು ರಿಯಾಯಿತಿಯ ಲಾಭ ಪಡೆಯಬಹುದು. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G (Samsung Galaxy M15 5G) ಫೋನಿನ ಬೆಲೆ ದಿಢೀರ್ ಕುಸಿತ ಕಂಡಿದೆ. ಈ ಸ್ಮಾರ್ಟ್‌ಫೋನ್ 6000mAh ಬ್ಯಾಟರಿ ಹೊಂದಿದೆ. ಮೀಡಿಯಾಟೆಕ್ ಡೈಮೆನ್ಸಿಟಿ ಪ್ರೊಸೆಸರ್, 50 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ಇತರೆ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಹೊಂದಿದೆ. ಬನ್ನಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಫೋನಿನ ಹೊಸ ಬೆಲೆ, ಆಫರ್‌ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಬಿಡುಗಡೆ ಬೆಲೆಯಿಂತ ಕಡಿಮೆಗೆ ಮಾರಾಟವಾಗುತ್ತಿದೆ. ಇದರ ಬೆಲೆ 11,868 ರೂ. ಆಗಿದೆ. ಕಂಪನಿಯು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ ಹೆಚ್ಚುವರಿ ರಿಯಾಯಿತಿ ನೀಡುತ್ತಿದೆ. ನೀವು ಇಎಂಐ ಮೂಲಕ ಈ ಫೋನ್ ಖರೀದಿಸಿದರೆ 1500 ರೂ. ಡಿಸ್ಕೌಂಟ್ ಲಭ್ಯವಿದೆ. ರಿಯಾಯಿತಿಯೊಂದಿಗೆ ನೀವು ಕೇವಲ 10,368 ರೂ.ಗೆ ಈ ಫೋನನ್ನು ಖರೀದಿಸಬಹುದು.

ಜಸ್ಟ್ 10,368 ರೂ.! 6000mAh ಬ್ಯಾಟರಿ, 50MP ಕ್ಯಾಮೆರಾ.. ಅದೂ Samsung 5G ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್, 90Hz ರಿಫ್ರೆಶ್ ದರ ಮತ್ತು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.

ಮೀಡಿಯಾಟೆಕ್ ಪ್ರೊಸೆಸರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ 6nm ಪ್ರೊಸೆಸರ್ ಹೊಂದಿದೆ. ಈ ಫೋನ್ ಗ್ರಾಫಿಕ್ಸ್‌ಗಾಗಿ, ಆರ್ಮ್ ಮಾಲಿ G57 MC2 ಜಿಪಿಯು (Arm Mali G57 MC2 GPU) ಸಹ ಹೊಂದಿದೆ. ಈ ಫೋನಿನ ಪ್ರೊಸೆಸರ್ ಸುಧಾರಿತ ಕಾರ್ಯಕ್ಷಮತೆಯನ್ನು ನೀಡುತ್ತದೆ.

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಫೋನ್ 4GB RAM ಮತ್ತು 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಜೊತೆಗೆ, ಈ ಫೋನ್ ಮೆಮೊರಿ ವಿಸ್ತರಣೆ ಸಹ ಬೆಂಬಲಿಸುತ್ತದೆ. ಅಂದರೆ, ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್‌ ವಿಸ್ತರಿಸಬಹುದು. ವಿಶೇಷವೆಂದರೆ ಕಂಪನಿಯು ಈ ಫೋನಿನ ಡಿಸೈನ್ ಮತ್ತು ಸಾಫ್ಟ್‌ವೇರ್ ಬಗ್ಗೆ ಹೆಚ್ಚು ಗಮನ ನೀಡಿದೆ.

ಜಸ್ಟ್ 10,368 ರೂ.! 6000mAh ಬ್ಯಾಟರಿ, 50MP ಕ್ಯಾಮೆರಾ.. ಅದೂ Samsung 5G ಫೋನ್

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 5 ಮೆಗಾಪಿಕ್ಸೆಲ್ ದ್ವಿತೀಯ (ಅಲ್ಟ್ರಾ ವೈಡ್ ಆಂಗಲ್) ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ (ಮ್ಯಾಕ್ರೋ ಲೆನ್ಸ್‌) ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ. ಈ ಕ್ಯಾಮೆರಾಗಳು ಆಟೋ ಫೋಕಸ್ ಸಪೋರ್ಟ್‌, 10x ಡಿಜಿಟಲ್ ಜೂಮ್, ಪೂರ್ಣ ಎಚ್‌ಡಿ ವಿಡಿಯೋ ರೆಕಾರ್ಡಿಂಗ್ ಬೆಂಬಲ ಸೇರಿದಂತೆ ಹಲವು ವಿಶೇಷ ವೈಶಿಷ್ಟ್ಯಗಳನ್ನು ಹೊಂದಿವೆ.

ದೊಡ್ಡ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ತ್ವರಿತವಾಗಿ ಚಾರ್ಜ್ ಮಾಡಬಹುದು. ಈ ಸ್ಮಾರ್ಟ್‌ಫೋನ್ ಇಡೀ ದಿನ ಬ್ಯಾಟರಿ ಬ್ಯಾಕಪ್ ನೀಡುತ್ತದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಫೋನ್ ಹಲವು ಕನೆಕ್ಟಿವಿಟಿ ಆಯ್ಕೆಗಳನ್ನು ಹೊಂದಿದೆ. 5G SA/NSA, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, 3.5 ಎಂಎಂ ಆಡಿಯೋ ಜ್ಯಾಕ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy M15 5G available with 25 percent discount on flipkart Sale: check new price, offers, availability, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+