Home
Deal of the day

ಅಮೆಜಾನ್ ಸೇಲ್! 12,999 ಸಾಕು.. 6000mAh ಬ್ಯಾಟರಿ.. 50MP ಕ್ಯಾಮೆರಾ; ಈ Samsung ಫೋನಿಗೆ ಬಂಪರ್ ಆಫರ್

ಸ್ಯಾಮ್‌ಸಂಗ್‌ ಕಂಪನಿಯ ಗ್ಯಾಲಕ್ಸಿ ಸರಣಿಯ ಫೋನ್‌ಗಳಿಗೆ ಮಾರುಕಟ್ಟೆಯಯಲ್ಲಿ ಭಾರೀ ಬೇಡಿಕೆಯಿದೆ. ಅದರಲ್ಲಿಯೂ ಬಜೆಟ್‌ ಬೆಲೆಯ ಮೊಬೈಲ್‌ಗಳಂತೂ ಸಖತ್ ಟ್ರೆಂಡ್‌ ಸೆಟ್ ಮಾಡಿವೆ. ಈ ಪೈಕಿ ಸ್ಯಾಮ್‌ಸಂಗ್‌ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ (Samsung Galaxy M15 5G Prime Edition) ಸ್ಮಾರ್ಟ್‌ಫೋನ್‌ ಸಹ ಒಂದಾಗಿದೆ. ಪ್ರಸ್ತುತ, ಈ ಸೊಗಸಾದ ಸ್ಮಾರ್ಟ್‌ಫೋನ್ ಬೊಂಬಾಟ್ ರಿಯಾಯಿತಿ ದರದೊಂದಿಗೆ ಖರೀದಿಸಲು ಲಭ್ಯವಿದೆ. ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳು ಇಲ್ಲಿವೆ ನೋಡಿ.

ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿ ಪಡೆದಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಫೋನ್ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿದೆ. ಇದು, ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. 6.5 ಇಂಚಿನ ಡಿಸ್ಪ್ಲೇ, 25W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ವಿವಿಧ ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಮಾರಾಟವಾಗುತ್ತಿದೆ. ಈ ಫೋನಿಗೆ ಲಭ್ಯವಿರುವ ಆಫರ್ ತಿಳಿಲು ಮುಂದೆ ಓದಿ.

Samsung: 6000mAh ಬ್ಯಾಟರಿ, 50MP ಕ್ಯಾಮೆರಾ.. ಈ Samsung ಫೋನಿಗೆ ಬಂಪರ್ ಆಫರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ಹೊಸ ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ಫೋನನ್ನು ಅಮೆಜಾನ್‌ನಲ್ಲಿ ಶೇ.24 ರಷ್ಟು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರ ಬೆಲೆ 12,999 ರೂ. ಆಗಿದೆ. ಈ ಫೋನ್ 389 ರೂ.ಗಳ ವರೆಗೆ ಕ್ಯಾಶ್‌ಬ್ಯಾಕ್ ಆಫರ್ ಪಡೆದಿದೆ. ನೀವು ಈ ಫೋನನ್ನು ಕಡಿಮೆ ಬೆಲೆಗೆ ಖರೀದಿಸಬಹುದು. ಇದು ಬ್ಲೂ ಟೋಪಾಜ್, ಸೆಲೆಸ್ಟಿಯಲ್ ಬ್ಲೂ ಮತ್ತು ಸ್ಟೋನ್ ಗ್ರೇ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ಮೊಬೈಲ್ 6.5 ಇಂಚಿನ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 × 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರ ಮತ್ತು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ವಾಟರ್‌ ಡ್ರಾಪ್ ಶೈಲಿಯ ನಾಚ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 14 ಓಎಸ್‌ ಬೆಂಬಲದೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಈ ಫೋನ್, ಆರ್ಮ್ ಮಾಲಿ G57 MC2 ಜಿಪಿಯು ಹೊಂದಿದೆ. ಇನ್ನು ಈ ಫೋನ್ 4GB RAM + 128GB ಮತ್ತು 6GB RAM + 128GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಿಸುವ ಆಯ್ಕೆ ಪಡೆದಿದೆ.

Samsung: 6000mAh ಬ್ಯಾಟರಿ, 50MP ಕ್ಯಾಮೆರಾ.. ಈ Samsung ಫೋನಿಗೆ ಬಂಪರ್ ಆಫರ್

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್‌ ಎಡಿಷನ್‌ ಫೋನ್‌ ಟ್ರಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮೊದಲ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5 ಮೆಗಾಪಿಕ್ಸಲ್‌ ಎರಡನೇ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸಲ್‌ ಮೂರನೇ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸಲ್‌ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್‌ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್‌ ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.2, ಎನ್‌ಎಫ್‌ಸಿ ಹಾಗೂ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೇರಿದಂತೆ ಹಲವು ಸೌಲಭ್ಯಗಳನ್ನೂ ಒಳಗೊಂಡಿದೆ.

Best Mobiles in India

English summary
Samsung Galaxy M15 5G Prime Edition with 6GB Ram Receive 24 Percent Discount on Amazon Sale: know offers, features, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+