47% ಡಿಸ್ಕೌಂಟ್.. ಜಸ್ಟ್ 12,999 ರೂ.ಗೆ ಈ ಫೋನ್ ಸಿಗುತ್ತೆ: 11,500 ರೂ. ಸೇವ್!
ಸ್ಯಾಮ್‌ಸಂಗ್ ಪ್ರಿಯರಿಗೆ ಭರ್ಜರಿ ಖುಷಿ ಸುದ್ದಿ. ಈ ಫೋನ್‌ನ ಮೇಲೆ ಬರೋಬ್ಬರಿ 47% ಡಿಸ್ಕೌಂಟ್. ಹೌದು, 24,499 ರೂ.ನ ಮೊಬೈಲ್ ಅನ್ನು ನೀವು 12,999 ರೂ.ಗೆ ಖರೀದಿಸುವ ಸುವರ್ಣಾಕಾಶ. ಸ್ಯಾಮ್‌ಸಂಗ್‌ನ Samsung Galaxy M34 5G ಸ್ಮಾರ್ಟ್‌ಫೋನ್ ಪ್ರಸ್ತುತ ಅಮೆಜಾನ್‌ನಲ್ಲಿ ಬಂಪರ್ ಆಫರ್‌ನೊಂದಿಗೆ ಲಭ್ಯವಿದೆ. ನೀವೇನಾದರೂ ಸ್ಯಾಮ್‌ಸಂಗ್ ಪ್ರಿಯರಾಗಿದ್ದರೆ.. ನಾನು ಸ್ಯಾಮ್‌ಸಂಗ್ ಫೋನ್ ಕೊಳ್ಳಬೇಕು, ಆದ್ರೆ ಜೇಬಿಗೆ ಹೊರೆ ಆಗಬಾರದು ಎಂಬ ಬಯಕೆ ಹೊಂದಿದ್ರೆ.. ನಿಮಗಾಗಿಯೇ ಈ ಫೋನ್ ಮೇಲೆ ಅಮೆಜಾನ್ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. 13,000 ರೂ.ಗಿಂತ ಕಡಿಮೆ ಬೆಲೆಯಲ್ಲಿ 5G ಸ್ಮಾರ್ಟ್‌ಫೋನ್ ಹುಡುಕುತ್ತಿರುವವರಿಗೆ ಇದು ಪರ್ಫೆಕ್ಟ್ ಆಯ್ಕೆ.
ಸಾಕಷ್ಟು ಹೊಸ ಫೀಚರ್ಸ್, ದೀರ್ಘಾವದಿ ಬಾಳಿಕೆಯ ಭರವಸೆಯೊಂದಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಾಯಿತು. ಈ ಫೋನ್ ಬೆಲೆ, ಡಿಸೈನ್ ಹಾಗೂ ಅದ್ಭುತ ಫೀಚರ್ಸ್‌ಗಳಿಂದ ಮೊಬೈಲ್ ಪ್ರಿಯರನ್ನ ಆಕರ್ಷಿಸಿತ್ತು. ಇತ್ತೀಚಿಗೆ ಬಿಡುಗಡೆಯಾದ ಹೊಸ 5G ಸ್ಮಾರ್ಟ್‌ಫೋನ್ ಆಗಿರುವುದರಿಂದ, ಇದು ಕೈಗೆಟುಕುವ ಬೆಲೆಯಲ್ಲಿ ಅತ್ಯಾಕರ್ಷಕ ಫೀಚರ್ಸ್‌ಗಳನ್ನು ಹೊಂದಿದೆ. ಭಾರೀ ರಿಯಾಯಿತಿಯೊಂದಿಗೆ ಲಭ್ಯವಿರುವ ಈ ಫೋನ್ ಖರೀದಿಸಲು ಸ್ಯಾಮ್‌ಸಂಗ್ ಪ್ರಿಯರು ಮುಗಿಬಿದ್ದಿದ್ದಾರೆ.

ಸ್ಯಾಮ್‌ಸಂಗ್‌ನ Samsung Galaxy M34 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ಪಡೆದಿದೆ. Exynos ಚಿಪ್ ಸೆಟ್, ಎರಡು ಸ್ಟೋರೇಜ್ ವೇರಿಯಂಟ್ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಈ ಮೊಬೈಲ್ ಬಂದಿದೆ. ಈ Samsung Galaxy M34 5G ಫೋನ್‌ನ ಆಫರ್‌ಗಳು ಮತ್ತು ವಿಶೇಷ ಫೀಚರ್ಸ್‌ಗಳನ್ನು ತಿಳಿಯೋಣ ಬನ್ನಿ.
Samsung Galaxy M34 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ನ ಡಿಸ್ಲ್ಪೇ ಬಗ್ಗೆ ಹೇಳುವುದಾದರೆ, ಇದು 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD ಪ್ಲಸ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿದ್ದು, ಡಿಸ್‌ಪ್ಲೇಯು ಪಂಚ್ ಹೋಲ್ ಕಟ್‌ಔಟ್ ಮಾದರಿ ಪಡೆದಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.
ಈ ಫೋನ್‌ನ M34 5G ಪ್ರೊಸೆಸರ್ ಏನು?
ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಪ್ರೊಸೆಸರ್ ಬಗ್ಗೆ ನೋಡುವುದಾದರೆ ಈ ಫೋನ್ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್‌ನೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಹೊಂದಿದೆ. ಇನ್ನು ಈ ಫೋನ್ 6GB + 128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ.
ಬೊಂಬಾಟ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5Gನ ಕ್ಯಾಮೆರಾ ಸೆಟಪ್ ಅದ್ಭುತವಾಗಿದೆ. ಇದು ಮೂರು ರಿಯರ್ ಕ್ಯಾಮೆರಾ ರಚನೆ ಹೊಂದಿದೆ. ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಹಾಗೂ ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇನ್ನೂ, ಸೆಲ್ಫಿ ಶೂಟರ್ 13 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.
ಈ ಸುದ್ದಿ ಓದಿದ್ದೀರಾ?: Samsung ಪ್ರಿಯರಿಗೆ ಶುಭ ಸುದ್ದಿ.. ಅಗ್ಗದ Galaxy 5G ಫೋನ್ ಮೇಲೆ ಮಸ್ತ್ ಡಿಸ್ಕೌಂಟ್
ಬ್ಯಾಟರಿ ಬ್ಯಾಕಪ್ ಸೂಪರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿದೆ. ಇದಕ್ಕೆ ಸಪೋರ್ಟ್ ಆಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳನ್ನು ನೋಡುವುದಾದರೆ, ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಸೌಲಭ್ಯಗಳು ಕೂಡಾ ಇವೆ. ಈ ಫೋನ್ ಎಲ್ಲಾ ವಿಶೇಷತೆಗಳೊಂದಿಗೆ ಕಡಿಮೆ ಬೆಲೆಯಲ್ಲಿ ಲಭ್ಯವಿದೆ.
ಎರಡು ಸ್ಟೋರೇಜ್, ಮೂರು ಕಲರ್
ಇನ್ನುಈ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. 6GB RAM + 128GB ಸ್ಟೋರೇಜ್ ವೇರಿಯಂಟ್ ಮತ್ತು 8GB RAM + 128GB ಸ್ಟೋರೇಜ್ ಮಾದರಿ ಹೊಂದಿದೆ. ಇನ್ನು ಈ ಮೊಬೈಲ್ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.
ಒಟ್ನಲ್ಲಿ, ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳಿಗೆ ಇರುವ ಬೇಡಿಕೆ ಇತರೆ ಯಾವ ಫೋನ್‌ಗಳಿಗೂ ಇಲ್ಲ. ಅಷ್ಟರಮಟ್ಟಿಗೆ ಈ ಫೋನ್‌ಗಳಿಗೆ ಭಾರತದಲ್ಲಿ ಬೇಡಿಕೆ ಇದೆ. ಅದರಲ್ಲೂ ಕೆಲವು ಫೋನ್‌ಗಳಂತೂ ಭಾರೀ ಜನಪ್ರಿಯತೆ ಪಡೆದುಕೊಂಡಿವೆ. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿವೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಕೂಡ ಒಂದಾಗಿದೆ.


Click it and Unblock the Notifications








