Home
Deal of the day

Samsung: ಭಾರೀ ಬೆಲೆ ಕಡಿತದೊಂದಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌! ಭರ್ಜರಿ ಉಳಿತಾಯ

ಸ್ಮಾರ್ಟ್‌ಫೋನ್ (smartphone) ಖರೀದಿ ಮಾಡಲು ಇಚ್ಚಿಸಿದ್ರೆ ಅದರಲ್ಲೂ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋನ್‌ ಖರೀದಿ ಮಾಡಲು ಮುಂದಾಗಿದ್ದರೆ ಇದು ನಿಮಗೆ ಉತ್ತಮ ಸಮಯ. ಯಾಕೆಂದರೆ ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ಇದೀಗ ಈ ಫೋನ್‌ಗೆ ದೊಡ್ಡ ಮಟ್ಟದ ಆಫರ್ ಘೋಷಣೆ ಮಾಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G (Samsung Galaxy M34 5G) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಭರ್ಜರಿ ಆಫರ್‌ನೊಂದಿಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ ಎಕ್ಸಿನೋಸ್‌ 1280 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ ಇದೆ. ಹಾಗಿದ್ರೆ ಈ ಸ್ಮಾರ್ಟ್‌ಫೋನ್ ನ ಆಫರ್ ಬೆಲೆ ಮಾಹಿತಿ ಹಾಗೂ ಇದು ಏನೆಲ್ಲಾ ಆಕರ್ಷಕ ಫೀಚರ್ಸ್‌ ಪಡೆದಿದೆ ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ಭಾರೀ ಬೆಲೆ ಕಡಿತದೊಂದಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌: ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಭಾರತದಲ್ಲಿ ಗಮನಾರ್ಹ ಬೆಲೆ ಕಡಿತವನ್ನು ಪಡೆದುಕೊಂಡಿದೆ ಅಂದರೆ ಅಮೆಜಾನ್‌ನಲ್ಲಿ ( Amazon) 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಫೋನ್‌ ಅನ್ನು ನೀವು 12,999 ರೂ.ಗಳಲ್ಲಿ ಖರೀದಿ ಮಾಡಬಹುದಾಗಿದೆ. ಇದಲ್ಲದೆ, ಈ ಡಿವೈಸ್‌ ಮೇಲೆ ಬ್ಯಾಂಕ್‌ ಆಫರ್ ಸಹ ಇದ್ದು, 1,299 ರೂ.ಗಳ ಹೆಚ್ಚುವರಿ ತ್ವರಿತ ಬ್ಯಾಂಕ್ ರಿಯಾಯಿತಿಯೊಂದಿಗೆ ಪಡೆಯಬಹುದು. ಈ ಮೂಲಕ ಇದನ್ನು ನೀವು 11,700 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದರ ಮೂಲ ಉಡಾವಣಾ ಬೆಲೆ 16,999 ರೂ.ಗಳು.

ಅಂದರೆ ಗ್ಯಾಲಕ್ಸಿ M34 5G ಅನ್ನು 16,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಬಿಡುಗಡೆ ಬೆಲೆಯಿಂದ 4,000 ರೂ.ಗಳ ರಿಯಾಯಿತಿಯಲ್ಲಿ ಇದನ್ನು ಖರೀದಿ ಮಾಡಬಹುದಾಗಿದೆ. ಇದಿಷ್ಟೇ ಅಲ್ಲದೆ ನಿಮಗೆ ಇಷ್ಟು ಹಣ ಹೊಂದಿಸಲು ಸಾಧ್ಯ ಇಲ್ಲ ಎಂದಾದರೆ ಇಎಮ್‌ಐ ಆಯ್ಕೆ ಮೂಲಕವೂ ಖರೀದಿ ಮಾಡಬಹುದು. ತಿಂಗಳಿಗೆ 630 ರೂ.ಗಳನ್ನು ಪಾವತಿ ಮಾಡಿದ್ರೆ ಸಾಕು.

ಭಾರೀ ಬೆಲೆ ಕಡಿತದೊಂದಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಫೀಚರ್ಸ್‌: ಈ ಸ್ಮಾರ್ಟ್‌ಫೋನ್ 6.6 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 120Hz ಹೆಚ್ಚಿನ ರಿಫ್ರೆಶ್ ರೇಟ್‌ ಹಾಗೂ ಫುಲ್‌ಹೆಚ್‌ಡಿ+ ರೆಸಲ್ಯೂಶನ್ ಅನ್ನು ಬೆಂಬಲಿಸುತ್ತದೆ. ಇದರೊಂದಿಗೆ 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲ್ಪಟ್ಟಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಪ್ರೊಸೆಸರ್‌ ಮಾಹಿತಿ: ಇನ್ನು ಈ ಫೋನ್ ಎಕ್ಸಿನೋಸ್ 1280 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿಯೂ ಲಭ್ಯ ಇದೆ. ಅದಾಗ್ಯೂ ವಿಸ್ತರಿಸಬಹುದಾದ RAM ಅನ್ನು ಹೊಂದಿದ್ದು, ಇದನ್ನು 12GB ವರೆಗೆ ವಿಸ್ತರಿಸಬಹುದು. ಹಾಗೆಯೇ ಆಂತರಿಕ 1TB ವರೆಗೆ ಇಂಟರ್‌ ಸ್ಟೋರೇಜ್‌ ಅನ್ನು ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಕ್ಯಾಮೆರಾ ಮಾಹಿತಿ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಅಂದರೆ 50 ಮೆಗಾಪಿಕ್ಸೆಲ್‌ ಮುಖ್ಯ ಓಐಎಸ್ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಸೆಲ್ಫಿ, ವಿಡಿಯೋ ಕಾನ್ಫರೆನ್ಸಿಂಗ್ ಮತ್ತು ಕರೆಗಾಗಿ 13 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿದೆ.

ಭಾರೀ ಬೆಲೆ ಕಡಿತದೊಂದಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 25W ಯುಎಸ್‌ಬಿ ಟೈಪ್-ಸಿ ಫಾಸ್ಟ್ ಚಾರ್ಜಿಂಗ್‌ನಿಂದ ಬೆಂಬಲಿತವಾಗಿದೆ. ಉಳಿದಂತೆ ಈ ಫೋನ್ ವರ್ಧಿತ ಧ್ವನಿಗಾಗಿ ಡಾಲ್ಬಿ ಅಟ್ಮಾಸ್‌ನೊಂದಿಗೆ ಬರುತ್ತದೆ. ಹಾಗೂ 5G ಸಾಮರ್ಥ್ಯ, ವೈ ಫೈ , ಬ್ಲೂಟೂತ್ ಮತ್ತು ಜಿಪಿಎಸ್‌ ಅನ್ನು ಕಾಣಬಹುದಾಗಿದೆ.

Best Mobiles in India

English summary
Samsung Galaxy M34 5G smartphone can be bought in India with a great offer. The phone will be powered by Exynos 1280 processor and will be available in 128GB internal storage option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+