Home
Deal of the day

Samsung: ದೊಡ್ಡ ಡಿಸ್ಕೌಂಟ್.. ಕೇವಲ 25,499 ರೂ.! ಖರೀದಿಗೆ ಪೈಪೋಟಿ

ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಸಿಹಿ ಸುದ್ದಿ ಇದೆ. ಸ್ಯಾಮ್‌ಸಂಗ್‌ನ 'Galaxy S' ಸರಣಿಯ ಫೋನ್ ಇ-ಕಾಮರ್ಸ್ ಸೈಟ್ ಅಮೇಜಾನ್‌ನಲ್ಲಿ ಅರ್ಧದಷ್ಟು ಬೆಲೆಗೆ ಲಭ್ಯವಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G (Samsung Galaxy S21 FE 5G) ಫೋನ್ ಶೇ.66 ರಷ್ಟು ರಿಯಾಯಿತಿಯೊಂದಿಗೆ ಲಭ್ಯವಿದೆ. ಈ ಫೋನ್ ಪ್ರಸ್ತುತ ಅಮೆಜಾನ್‌ನಲ್ಲಿ 30,000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ. ನೀವು ಸ್ಮಾರ್ಟ್‌ಫೋನನ್ನು ಆಲಿವ್, ನೇವಿ, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ವೈಟ್ ಬಣ್ಣದಲ್ಲಿ ಖರೀದಿಸಬಹುದು.

ನೀವು, ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಫೀಚರ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಉತ್ತಮ ಆಯ್ಕೆಯಾಗಿದೆ. ಈ ಫೋನಿನ 8GB RAM ಮತ್ತು 256GB ಸ್ಟೋರೇಜ್ ಮಾಡೆಲ್ ಅನ್ನು 49,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಬಿಡುಗಡೆಯ ಬೆಲೆಯ ಅರ್ಧಕ್ಕಿಂತ ಕಡಿಮೆ ದರದಲ್ಲಿ ಲಭ್ಯವಿದೆ. ಪ್ರಸ್ತುತ ಕೇವಲ 25,499 ರೂ.ಗಳಿಗೆ ಮಾರಾಟವಾಗುತ್ತಿದೆ.

Samsung: ದೊಡ್ಡ ಡಿಸ್ಕೌಂಟ್.. ಕೇವಲ 25,499 ರೂ.! ಖರೀದಿಗೆ ಪೈಪೋಟಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನಿನಲ್ಲಿ ಉತ್ತಮ ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದು 6.4 ಇಂಚಿನ FHD+ ಡೈನಾಮಿಕ್ AMOLED 2X ಡಿಸ್ಪ್ಲೇ ಮತ್ತು 120Hz ರಿಫ್ರೆಶ್ ರೇಟ್ ಹೊಂದಿದೆ. Snapdragon 888 5G ಮತ್ತು Exynos 2100 ಪ್ರೊಸೆಸರ್‌ ಒಳಗೊಂಡಿದೆ. ಇದು 4,500mAh ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ. ಈ ಫೋನಿ ಡಿಸ್ಕೌಂಟ್‌ ವಿವರಗಳನ್ನು ತಿಳಿಯೋಣ ಬನ್ನಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಬೆಲೆ ಮತ್ತು ಆಫರ್

ಅಮೇಜಾನ್‌ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನಿನ ಮೇಲೆ ದೊಡ್ಡ ರಿಯಾಯಿತಿಯನ್ನು ನೀಡುತ್ತಿದೆ. ಈ ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್‌ನಲ್ಲಿ 74,999 ರೂ. ಬೆಲೆಯಲ್ಲಿ ಪಟ್ಟಿ ಮಾಡಲಾಗಿದೆ. ಆದರೆ, ಪ್ರಸ್ತುತ ಇದರ ಮೇಲೆ ಶೇ.66 ರಷ್ಟು ಬಂಪರ್ ಡಿಸ್ಕೌಂಟ್ ನೀಡಲಾಗುತ್ತಿದೆ. ಆಫರ್‌ನೊಂದಿಗೆ ನೀವು ಈ ಫೋನನ್ನು ಕೇವಲ 25,499 ರೂ.ಗಳಲ್ಲಿ ಖರೀದಿಸಬಹುದು. ಈ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಮೇಲೆ ಇಷ್ಟು ದೊಡ್ಡ ರಿಯಾಯಿತಿ ನೀಡುತ್ತಿರುವುದು ಇದೇ ಮೊದಲು.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಖರೀದಿಯ ಮೇಲೆ ಅಮೇಜಾನ್‌ 23,250 ರೂ.ಗಳ ವರೆಗೆ ಎಕ್ಸ್‌ಚೇಂಜ್‌ ಆಫರ್‌ ಸಹ ನೀಡುತ್ತಿದೆ. ಈ ಎಕ್ಸ್‌ಚೇಂಜ್‌ ಆಫರ್‌ ನಿಮ್ಮ ಹಳೆಯ ಫೋನಿನ ಸ್ಥಿತಿಯನ್ನು ಅವಲಂಬಿಸಿರುತ್ತದೆ. ನಿಮ್ಮ ಬಜೆಟ್ ಕಡಿಮೆಯಿದ್ದರೆ ನೀವು ಈ ಸ್ಮಾರ್ಟ್‌ಫೋನ್ ಅನ್ನು ನೋ ಕಾಸ್ಟ್‌ ಇಎಂಐ ಸೌಲಭ್ಯದೊಂದಿಗೆ ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನಿನ ವೈಶಿಷ್ಟ್ಯಗಳು

ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಅನ್ನು 2022 ರಲ್ಲಿ ಬಿಡುಗಡೆ ಮಾಡಿತ್ತು. ಇದು ಅಲ್ಯೂಮಿನಿಯಂ ಪ್ರೇಮ್‌ನೊಂದಿಗೆ ಪ್ಲಾಸ್ಟಿಕ್ ಬ್ಯಾಕ್ ಪ್ಯಾನಲ್ ಅನ್ನು ಹೊಂದಿದೆ. ಕಂಪನಿಯು 6.4 ಇಂಚಿನ ಡಿಸ್ಪ್ಲೇಯೊಂದಿಗೆ ಪರಿಚಯಿಸಿದೆ. ಇದು 120Hz ರಿಫ್ರೆಶ್ ದರದೊಂದಿಗೆ ಡೈನಾಮಿಕ್ AMOLED ಪ್ಯಾನೆಲ್ ಅನ್ನು ಒಳಗೊಂಡಿದೆ. ಈ ಡಿಸ್ಲ್ಪೇಯನ್ನು ರಕ್ಷಿಸಲು, ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಅನ್ನು ಒದಗಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ Android 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅದನ್ನು ನೀವು Android 14 ಗೆ ಅಪ್‌ಗ್ರೇಡ್ ಮಾಡಬಹುದು. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 888 5G ಪ್ರೊಸೆಸರ್‌ ಅನ್ನು ಹೊಂದಿದೆ. ಇದು 8GB RAM ಮತ್ತು 256GB ಸ್ಟೋರೇಜ್‌ ಅನ್ನು ಒಳಗೊಂಡಿದೆ.

12MP ಮುಖ್ಯ ಕ್ಯಾಮೆರಾ, 32MP ಸೆಲ್ಫಿ ಕ್ಯಾಮೆರಾ

ಈ ಫೋನಿನ ಕ್ಯಾಮೆರಾ ಸೆಟಪ್‌ ಬಗ್ಗೆ ಹೇಳುವುದಾದರೆ, ಇದು ಟ್ರಿಪಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದು OIS ಜೊತೆಗೆ 12 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, OIS ಜೊತೆಗೆ 8 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ, 3x ಆಪ್ಟಿಕಲ್ ಜೂಮ್ ಮತ್ತು 12 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಶೂಟರ್ ಅನ್ನು ಒಳಗೊಂಡಿದೆ. ಈ ಫೋನ್ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಜೊತೆಗೆ ಬರುತ್ತದೆ. ಇದು IP68 ರೇಟಿಂಗ್‌ನೊಂದಿಗೆ ಬರುತ್ತದೆ.

Best Mobiles in India

English summary
Samsung Galaxy S21 FE Received huge Price Drop in India: Check availability, offers, specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+