ದೊಡ್ಡ ಸಿಹಿಸುದ್ದಿ: 51,000 ಉಳಿತಾಯ.. 56% ಡಿಸ್ಕೌಂಟ್.. ಅರ್ಧಕ್ಕಿಂತ ಕಡಿಮೆ ಬೆಲೆಗೆ Samsung ಫೋನ್
ಸ್ಯಾಮ್‌ಸಂಗ್ ಪ್ರಿಯರಿಗೆ ದೊಡ್ಡ ಸಿಹಿಸುದ್ದಿ ಇದೆ. 1 ಲಕ್ಷ ರೂ.ಗೆ ಬಿಡುಗಡೆಯಾಗಿದ್ದ ಫೋನ್ ಕೇವಲ 38,999 ರೂ.ಗೆ ಲಭ್ಯವಿದೆ. ಹೌದು, ಪ್ರಸಿದ್ಧ ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಬ್ಲ್ಯಾಕ್ ಫ್ರೈಡೇ ಸೇಲ್ (Flipkart Black Friday Sale) ಆಯೋಜಿಸಿದೆ. ಈ ವಿಶೇಷ ಮಾರಾಟದಲ್ಲಿ ಪ್ರಸಿದ್ಧ ಕಂಪನಿಯ ಮೊಬೈಲ್‌ಗಳನ್ನು ಭಾರೀ ರಿಯಾಯಿತಿಯೊಂದಿಗೆ ಮಾರಾಟ ಮಾಡುತ್ತಿದೆ. ಅದರಂತೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G (Samsung Galaxy S23 5G) ಫೋನ್ ಬರೋಬ್ಬರಿ ಶೇ.56 ರಷ್ಟು ಡಿಸ್ಕೌಂಟ್‌ನೊಂದಿಗೆ ಲಭ್ಯವಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಮೊಬೈಲ್ ಸ್ಯಾಮ್‌ಸಂಗ್ ಪ್ರಿಯರನ್ನು ಆಕರ್ಷಿಸುತ್ತಿದೆ. ಪ್ರಸ್ತುತ, ಈ ಫೋನನ್ನು ಅರ್ಧಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೇಲೆ ಬ್ಯಾಂಕ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6.1 ಇಂಚಿನ ಡಿಸ್ಪ್ಲೇ, 3,900mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಫೋನಿನ 8GB RAM + 256GB ಸ್ಟೋರೇಜ್ ಆಯ್ಕೆಯ ಮೇಲೆ ಶೇ.56 ರಷ್ಟು ಡಿಸ್ಕೌಂಟ್ ನೀಡುತ್ತಿದೆ. ನೀವು, ಬರೋಬ್ಬರಿ 51,000 ರೂ. ಉಳಿತಾಯ ಮಾಡಬಹುದು. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಲಭ್ಯವಿದೆ. ಜೊತೆಗೆ, ನೋ ಕಾಸ್ಟ್ ಇಎಂಐ ಆಯ್ಕೆಯು ಲಭ್ಯವಿದೆ. ರಿಯಾಯಿತಿಯೊಂದಿಗೆ ಈ ಫೋನನ್ನು 38,999 ರೂ.ಗೆ ಖರೀದಿಸಬಹುದು. ಇದು ಕ್ರೀಮ್, ಗ್ರೀನ್, ವ್ಯಾವೆಂಡರ್ ಹಾಗೂ ಪ್ಯಾಂಟಮ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಮೊಬೈಲ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 1750 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ OneUI 5.1 ಓಎಸ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 512GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಹೊಂದಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಮೊಬೈಲ್ 3900mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ವೈ-ಫೈ 6E, ಬ್ಲೂಟೂತ್ 5.3 ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








