50,000 ಬೆಲೆ ಇಳಿಕೆ! 200MP ಕ್ಯಾಮೆರಾ.. 256GB ಸ್ಟೋರೇಜ್.. ಅದೂ Samsung ಫೋನ್!
ದೀಪಾವಳಿ ಸಂಭ್ರಮಕ್ಕೆ ದಿನಗಣನೆ ಶುರುವಾಗಿದೆ. ದೇಶದ ಜನರು ಬೆಳಕಿನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಜ್ಜಾದ್ದಾರೆ. ಇತ್ತ, ದೈತ್ಯ ಆನ್‌ಲೈನ್ ಶಾಪಿಂಗ್ ಸೈಟ್‌ಗಳು ತನ್ನ ಗ್ರಾಹಕರಿಗೆ ಬಂಪರ್ ಆಫರ್‌ಗಳನ್ನು ನೀಡುತ್ತಿವೆ. ಅಮೆಜಾನ್ ತನ್ನ ಗ್ರಾಹಕರ ಸಂಭ್ರಮವನ್ನು ಹಿಮ್ಮಡಿಗೊಳಿಸಿದೆ. ಹೌದು, ದೈತ್ಯ ಸ್ಯಾಮ್‌ಸಂಗ್ ಫೋನಿನ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ. ಅಮೆಜಾನ್‌ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ (Samsung Galaxy S23 Ultra) ಫೋನನ್ನು ಕೇವಲ 74,999 ರೂ.ಗಳಲ್ಲಿ ಖರೀದಿಸುವ ಸುವರ್ಣಾವಕಾಶ ಕಲ್ಪಿಸಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಖರೀದಿ ಮೇಲೆ ಬರೋಬ್ಬರಿ 50,000 ರೂ.ಗಳನ್ನು ಉಳಿತಾಯ ಮಾಡಬಹುದು. ಕಂಪನಿಯು ಕಳೆದ ವರ್ಷ ಫೆಬ್ರವರಿಯಲ್ಲಿ ಈ ಮೊಬೈಲ್ ಅನ್ನು ಬಿಡುಗಡೆ ಮಾಡಿತ್ತು. ಈ ಮೊಬೈಲ್ 200 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದರೊಂದಿಗೆ ಇದು 6.8 ಇಂಚಿನ ಡಿಸ್ಪ್ಲೇ, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಬೆಲೆ ಮತ್ತು ಆಫರ್‌ಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನಿನಲ್ಲಿ ದೊಡ್ಡ ಮೊತ್ತವನ್ನು ಉಳಿಸುವ ಅವಕಾಶವಿದೆ. ಕಂಪನಿಯು ಈ ದೈತ್ಯ ಫೋನಿನ 12GB + 256GB ಸ್ಟೋರೇಜ್ ರೂಪಾಂತರವನ್ನು 1,24,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಅಮೆಜಾನ್ ಸೇಲ್‌ನಲ್ಲಿ ನೀವು, 74,999 ರೂ.ಗೆ ಖರೀದಿಸಬಹುದು. ಇದರೊಂದಿಗೆ, ತಿಂಗಳಿಗೆ 6,250 ರೂ.ಗಳ ಇಎಂಐ ಸೌಲಭ್ಯ ಲಭ್ಯವಿದೆ. ಈ ಆಫರ್‌ನೊಂದಿಗೆ ನೀವು, ಬರೋಬ್ಬರಿ 50,000 ರೂ.ಗಳನ್ನು ಉಳಿತಾಯ ಮಾಡಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ 6.8 ಇಂಚಿನ ಕ್ವಾಡ್ ಎಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ 2X ಡಿಸ್ಪ್ಲೇಯನ್ನು ಹೊಂದಿದೆ. ಇದು 3088 x 1440 ಪಿಕ್ಸೆಲ್‌ಗಳ ರೆಸಲ್ಯೂಶನ್, 1Hz ಮತ್ತು 120Hz ರಿಫ್ರೆಶ್ ದರ ಮತ್ತು 1750 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಈ ಫೋನ್ ಸ್ಯಾಮ್‌ಸಂಗ್‌ನ OneUI 5.1 ನೊಂದಿಗೆ ಆಂಡ್ರಾಯ್ಡ್ 13 ಓಎಸ್ ರನ್ ಮಾಡುತ್ತದೆ. ಇದನ್ನು 128GB, 256GB ಮತ್ತು 1TB ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಬೆಂಬಲದೊಂದಿಗೆ 200 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿಗಾಗಿ ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನಿನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿ ಲಭ್ಯವಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಈ ಫೋನ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ ಫೈ 6e, ಬ್ಲೂಟೂತ್ 5.3, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








