Samsung: ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ ಬೆಲೆ ಇಳಿಕೆ! ಹಾಗಿದ್ರೆ ಆಫರ್ ಬೆಲೆ ಎಷ್ಟು?
ಸ್ಯಾಮ್‌ಸಂಗ್‌ನಿಂದ (Samsung) ಲಾಂಚ್ ಆಗಿರುವ ಬಜೆಟ್ ಬೆಲೆಯ ಫೋನ್‌ಗಳು ಹಾಗೂ ಪ್ರೀಮಿಯಂ ಫೋನ್‌ಗಳು ಒಂದೇ ರೀತಿಯ ಬೇಡಿಕೆ ಪಡೆದಿವೆ. ಯಾಕೆಂದರೆ ಈ ಫೋನ್‌ಗಳು ವಿಶೇಷ ಫೀಚರ್ಸ್ ಆಯ್ಕೆ ಹೊಂದಿದ್ದು, ಬಳಕೆದಾರರಿಗೆ ತೃಪ್ತಿ ಎನಿಸುವ ಪ್ರಯೋಜನಗಳನ್ನು ನೀಡಲಿವೆ. ಈ ನಡುವೆ ಸ್ಯಾಮ್‌ಸಂಗ್‌ನ ಈ ಫೋನ್‌ಗೆ ಇದೀಗ ಬೆಲೆ ಇಳಿಕೆ ಮಾಡಲಾಗಿದೆ.
ಹೌದು, ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ಗೆ (Samsung Galaxy S23 Ultra Smartphone) ಬೆಲೆ ಕಡಿತ ಮಾಡಲಾಗಿದೆ. ಈ ಫೋನ್ ಸರಣಿಯನ್ನು ಮೂರು ಫೋನ್‌ಗಳೊಂದಿಗೆ ಭಾರತದಲ್ಲಿ ಅನಾವರಣ ಮಾಡಲಾಗಿತ್ತು. ಈ ಸ್ಮಾರ್ಟ್‌ಫೋನ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 5000mAh ಬ್ಯಾಟರಿಯೊಂದಿಗೆ ಪ್ಯಾಕ್ ಆಗಿದೆ. ಹಾಗಿದ್ರೆ, ಬನ್ನಿ ಈ ಫೋನ್‌ನ ಆಫರ್ ಬೆಲೆ ವಿವರ ಹಾಗೂ ಇದರ ಫೀಚರ್ಸ್ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಇ-ಕಾಮರ್ಸ್ ದೈತ್ಯ ಅಮೆಜಾನ್‌ನಲ್ಲಿ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಉತ್ತಮ ಸಮಯವಾಗಿದೆ. ಅಂದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಬೆಲೆ ಕಡಿಮೆ ಮಾಡಲಾಗಿದ್ದು, 12 GB RAM ಮತ್ತು 256 GB ಸ್ಟೋರೇಜ್ ವೇರಿಯಂಟ್‌ಗೆ ಶೇಕಡಾ 27 ರಷ್ಟು ರಿಯಾಯಿತಿ ಸಿಗಲಿದೆ. ಈ ಮೂಲಕ ನೀವು 1,09,999ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದರ ಸಾಮಾನ್ಯ ದರ 1,49,999ರೂ.ಗಳಾಗಿದೆ.
ಅದಾಗ್ಯೂ ನೀವು ಕೆಲವು ಬ್ಯಾಂಕ್ ಆಫರ್ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಖರೀದಿ ಮಾಡಬಹುದು. ಅಂದರೆ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ 10,000 ತ್ವರಿತ ರಿಯಾಯಿತಿ ಸಿಗಲಿದೆ. ಇದರೊಂದಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫ್ಯಾಂಟಮ್ ಬ್ಲ್ಯಾಕ್ ಕಲರ್ ಆಯ್ಕೆಯ 256 GB ಸ್ಟೋರೇಜ್ ವೇರಿಯಂಟ್‌ಗೆ 36 % ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಈ ಮೂಲಕ 96,399ರೂ.ಗಳಿಗೆ ಈ ಫೋನ್ ಅನ್ನು ಖರೀದಿ ಮಾಡಬಹುದಾಗಿದೆ. ಇದರ ಸಾಮಾನ್ಯ ದರ 1,49,999 ರೂ.ಗಳಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೀಚರ್ಸ್: ಈ ಸ್ಮಾರ್ಟ್‌ಫೋನ್ 3088 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ 6.8 ಇಂಚಿನ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಅಲ್ಲದೆ ಸ್ಮಾರ್ಟ್‌ಫೋನ್ 240Hz ಟಚ್ ಮಾದರಿ ರೇಟ್ ಬೆಂಬಲ ಇದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನಿಂದ ರಕ್ಷಿಸಲ್ಪಟ್ಟಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಪ್ರೊಸೆಸರ್ ವಿವರ: ಈ ಫೋನ್ ಅಡ್ರಿನೋ 740 ಜಿಪಿಯು ಬಲದೊಂದಿಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜನ್ 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಕ್ಯಾಮೆರಾ ರಚನೆ: ಈ ಫೋನ್ 200 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್‌ನೊಂದಿಗೆ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಅಂದರೆ 3x ಆಪ್ಟಿಕಲ್ ಜೂಮ್‌ನೊಂದಿಗೆ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್, 120 ಡಿಗ್ರಿ ಫೀಲ್ಡ್ ಆಫ್ ವ್ಯೂ (FoV) ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 10x ಆಪ್ಟಿಕಲ್ ಜೂಮ್‌ನೊಂದಿಗೆ ಮತ್ತೊಂದು 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದರ ಜೊತೆಗೆ ಎಲ್ಲಾ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 12 ಮೆಗಾಪಿಕ್ಸೆಲ್ ಸೆನ್ಸರ್ ಆಯ್ಕೆ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ವೇಗದ ಚಾರ್ಜಿಂಗ್ ಮತ್ತು ವೇಗದ ವೈರ್‌ಲೆಸ್ ಚಾರ್ಜಿಂಗ್ 2.0 ಗೆ ಬೆಂಬಲದೊಂದಿಗೆ ಬರುತ್ತದೆ. ಆದಾಗ್ಯೂ, ಬಾಕ್ಸ್‌ನೊಳಗೆ ಯಾವುದೇ ಚಾರ್ಜರ್ ಇಲ್ಲ ಮತ್ತು ವೇಗದ ಚಾರ್ಜಿಂಗ್ ಸೌಲಭ್ಯ ಪಡೆಯಲು ಪ್ರತ್ಯೇಕವಾಗಿ ಚಾರ್ಜರ್ ಖರೀದಿ ಮಾಡಬೇಕು.
ಉಳಿದಂತೆ ಈ ಫೋನ್ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದ್ದು, ವೇಗದ ಡೇಟಾ ವರ್ಗಾವಣೆ ಮತ್ತು ಬಹುಮುಖ ಸಂಪರ್ಕ ಆಯ್ಕೆಗಳನ್ನು ಸಕ್ರಿಯಗೊಳಿಸುತ್ತದೆ. ಇದಲ್ಲದೆ, ಈ ಡಿವೈಸ್ IP68 ಪ್ರಮಾಣೀಕರಿಸಲ್ಪಟ್ಟಿದ್ದು, ನೀರು ಮತ್ತು ಧೂಳಿಗೆ ಹೆದರುವ ಅಗತ್ಯ ಇಲ್ಲ.


Click it and Unblock the Notifications








