ದೊಡ್ಡ ಸಿಹಿಸುದ್ದಿ: 21,999 ಬೆಲೆ ಇಳಿಕೆ! 50MP ಕ್ಯಾಮೆರಾ.. 512GB ಸ್ಟೋರೇಜ್.. ಅದೂ Samsung ಫೋನ್
ಸ್ಯಾಮ್‌ಸಂಗ್ ಪ್ರಿಯರಿಗೆ ಇಲ್ಲಿದೆ ಸಿಹಿಸುದ್ದಿ. ಅಮೆಜಾನ್‌ನಲ್ಲಿ ಈ 5G ಫೋನನ್ನು ಕಡಿಮೆ ಬೆಲೆಗೆ ಖರೀದಿಸಬಹುದು. ಹೌದು, ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ತನ್ನ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G (Samsung Galaxy S24 5G) ಫೋನಿ ಬೆಲೆಯನ್ನು ಕಡಿತಗೊಳಿಸಿದೆ. ಇದರಿಂದ ಈ ಫೋನಿನ ಬೆಲೆ ಬರೋಬ್ಬರಿ 21,999 ರೂ.ಗಳಷ್ಟು ಕಡಿಮೆಯಾಗಿದೆ. ಜೊತೆಗೆ, ಶೇ.10 ರಷ್ಟು ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ಫೋನ್ ಮೂರು ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ. ಈ ಫೋನ್ ಸ್ಯಾಮ್‌ಸಂಗ್ Exynos 2400 ಡೆಕಾ ಕೋರ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 6.2 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದರೊಂದಿಗೆ 512GB ಸ್ಟೋರೇಜ್, 4000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ಕಂಪನಿಯು ಈ ಫೋನ್ ಖರೀದಿ ಮೇಲೆ ಶೇ.27 ರಷ್ಟು ರಿಯಾಯಿತಿ ನೀಡುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ಬೆಲೆ ಮತ್ತು ಆಫರ್‌ಗಳು
8GB RAM + 128GB ಸ್ಟೋರೇಜ್ ಬೆಲೆ = 74,999 ರೂ.
ಆಫರ್ ಬೆಲೆ = 62,999 ರೂ. (12,000 ರೂ. ಡಿಸ್ಕೌಂಟ್)
8GB RAM + 256GB ಸ್ಟೋರೇಜ್ ಬೆಲೆ = 79,999 ರೂ.
ಆಫರ್ ಬೆಲೆ = 58,000 ರೂ. (21,999 ರೂ. ಡಿಸ್ಕೌಂಟ್)
8GB RAM + 512GB ಸ್ಟೋರೇಜ್ ಬೆಲೆ = 89,999 ರೂ.
ಆಫರ್ ಬೆಲೆ = 77,999 ರೂ. (12,000 ರೂ. ಡಿಸ್ಕೌಂಟ್)
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ಫೋನಿನ ಖರೀದಿ ಮೇಲೆ ಶೇ.10 ರಷ್ಟು ತ್ವರಿತ ರಿಯಾಯಿತಿ ನೀಡುತ್ತಿದೆ. ಇದಲ್ಲದೆ 37,600 ರೂ.ಗಳ ಎಕ್ಸ್‌ಚೇಂಜ್ ಆಫರ್ ಲಭ್ಯವಿದೆ. ನೀವು, ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಬೆಲೆಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಆದರೆ, ಆಫ್‌ಲೈನ್‌ನಲ್ಲಿ 13,000 ರೂ.ಗಳ ರಿಯಾಯಿತಿ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ಮೊಬೈಲ್ 6.2 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 2600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ಫೋನ್ ಸ್ಯಾಮ್‌ಸಂಗ್ Exynos 2400 ಡೆಕಾ ಕೋರ್ ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ OneUI 6.1 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದರೊಂದಿಗೆ 7 ವರ್ಷಗಳವರೆಗೆ ಓಎಸ್ ಅಪ್ಡೇಟ್‌ಗಳು ಲಭ್ಯವಿದೆ.

ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಫೋನಿನಲ್ಲಿ ಫ್ಲ್ಯಾಶ್ ಲೈಟ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ, 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 3x ಆಪ್ಟಿಕಲ್ ಜೂಮ್‌ನೊಂದಿಗೆ 10 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ ಎಐ ತಂತ್ರಜ್ಞಾನದೊಂದಿಗೆ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ S24 5G ಫೋನನ್ನು 4000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ.ಈ ಬ್ಯಾಟರಿಯನ್ನು ಚಾರ್ಜ್ ಮಾಡಲು ಫಾಸ್ಟ್ ಚಾರ್ಜಿಂಗ್ ಕೂಡ ಇದೆ.


Click it and Unblock the Notifications








