Home
Deal of the day

ಸ್ಯಾಮ್‌ಸಂಗ್‌ನ ಈ ಫ್ಲ್ಯಾಗ್‌ಶಿಪ್‌ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಬೆಸ್ಟ್‌ ಕ್ಯಾಮೆರಾ!

ದಕ್ಷಿಣ ಕೊರಿಯಾದ ಟೆಕ್‌ ಬಿಗ್‌ಬಾಸ್‌ ಸ್ಯಾಮ್‌ಸಂಗ್‌ ಕಂಪನಿಯು ಗ್ಯಾಲಕ್ಸಿ ಸರಣಿಯಲ್ಲಿ ಹಲವು ಮೊಬೈಲ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಗ್ಯಾಲಕ್ಸಿ S ಸರಣಿಯ ಸ್ಮಾರ್ಟ್‌ಫೋನ್‌ಗಳು ಫ್ಲ್ಯಾಗ್‌ಶಿಪ್‌ ಮಾದರಿಯಲ್ಲಿ ಕಾಣಿಸಿಕೊಂಡಿವೆ. ಸಂಸ್ಥೆಯ ಇತ್ತೀಚಿನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G (Samsung Galaxy S24 5G) ಮೊಬೈಲ್‌ ಫೀಚರ್ಸ್‌ ಮೂಲಕ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದ್ದು, ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೆಲೆ ಇಳಿಕೆ ಕಂಡಿದ್ದು, ಖರೀದಿದಾರರಿಗೆ ಭರ್ಜರಿ ಖುಷಿ ಎನಿಸಿದೆ.

ಹೌದು, ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G (Samsung Galaxy S24 5G) ಮೊಬೈಲ್‌ ಶೇ. 28% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 8GB RAM + 256GB ವೇರಿಯಂಟ್‌ 57,900ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಗ್ರಾಹಕರು ಮತ್ತಷ್ಟು ಡಿಸ್ಕೌಂಟ್‌ ಪಡೆಯಲು ಅಮೆಜಾನ್‌ನಲ್ಲಿ ಲಭ್ಯ ಇರುವ ಬ್ಯಾಂಕ್‌ ಆಫರ್‌ ಮತ್ತು ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆಯಬಹುದು.

ಸ್ಯಾಮ್‌ಸಂಗ್‌ನ ಈ ಫ್ಲ್ಯಾಗ್‌ಶಿಪ್‌ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G ಮೊಬೈಲ್‌ 8GB RAM + 256GB ವೇರಿಯಂಟ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಮೊಬೈಲ್‌ 4,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಸಹ ಪಡೆದುಕೊಂಡಿದೆ. ಅಮೆಜಾನ್‌ ತಾಣದಲ್ಲಿ Samsung Galaxy S24 5G ಫೋನ್‌ ಅನ್ನು ಭಾರೀ ಡಿಸ್ಕೌಂಟ್‌ನಲ್ಲಿ ಖರೀದಿ ಮಾಡಬಹುದು. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G ಫೋನಿನ ಇತರೆ ಫೀಚರ್ಸ್‌ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G ಮೊಬೈಲ್‌ 6.2 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್, 2600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇಯು ವಿಷನ್ ಬೂಸ್ಟರ್ ಫೀಚರ್ಸ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯದ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G (Samsung Galaxy S24 5G) ಮೊಬೈಲ್‌ ಸ್ನಾಪ್‌ಡ್ರಾಗನ್ 8 Gen 3 (4 nm) ಪ್ರೊಸೆಸರ್‌ ಪವರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಆಧಾರಿತ One UI 6.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಈ ಮೊಬೈಲ್‌ 8GB RAM + 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಲಭ್ಯ.

ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಲೆನ್ಸ್‌ ಅನ್ನು ಹೊಂದಿದೆ. ಇನ್ನು ತೃತೀಯ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಹಾಗೂ ಇತರೆ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G ಮೊಬೈಲ್‌ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 25W ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದು ಓನಿಕ್ಸ್ ಬ್ಲಾಕ್, ಮಾರ್ಬಲ್ ಗ್ರೇ, ಕೋಬಾಲ್ಟ್ ವೈಲೆಟ್, ಅಂಬರ್ ಯೆಲ್ಲೋ, ಜೇಡ್ ಗ್ರೀನ್, ಸ್ಯಾಂಡ್‌ಸ್ಟೋನ್ ಆರೆಂಜ್, ಶಪ್ರೀನ್‌ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Samsung Galaxy S24 5G is now more affordable than ever on Amazon India. Know about mobile discount price, offer price, other specifications and more. ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 5G (Samsung Galaxy S24 5G) ಮೊಬೈಲ್‌ ಶೇ. 28% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 8GB RAM + 256GB ವೇರಿಯಂಟ್‌ 57,900ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಸಿಗಲಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+