ಸಾರ್ವಕಾಲಿಕ ಕುಸಿತ! ಬರೋಬ್ಬರಿ 20,100 ಡಿಸ್ಕೌಂಟ್.. ಸಸ್ತಾ ಬೆಲೆಗೆ Samsung ಫೋನ್ ಸೇಲ್.. ಈಗಲೇ ಖರೀದಿಸಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE (Samsung Galaxy S24 FE) ಬೆಲೆ ಸಾರ್ವಕಾಲಿಕ ಕುಸಿತ ಕಂಡಿದೆ. ಈ ಮೊಬೈಲ್ ಬಿಡುಗಡೆ ಬೆಲೆಗಿಂತ 15,000 ರೂ. ಕಡಿಮೆಗೆ ಮಾರಾಟವಾಗುತ್ತಿದೆ. ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಪ್ರಸ್ತುತ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್ ದೊಡ್ಡ ಡಿಸ್ಕೌಂಟ್ ಪಡೆದಿದೆ. ಸ್ಯಾಮ್‌ಸಂಗ್ ಪ್ರಿಯರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ನೀವು, ಗ್ಯಾಲಕ್ಸಿ S (Galaxy S) ಸರಣಿಯ ಫೋನ್ ಹುಡುಕುತ್ತಿದ್ದರೆ, ಇದು ಉತ್ತಮ ಡೀಲ್ ಆಗಿದೆ. ಬನ್ನಿ, ಈ ಫೋನಿನ ಮೂಲ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಇದು ಸ್ಯಾಮ್‌ಸಂಗ್ Exynos 2400e ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 4700mAh ಬ್ಯಾಟರಿ ಮತ್ತು 25W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಹೊಸ ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 59,999 ರೂ.ಗೆ ಬಿಡುಗಡೆಯಾಗಿತ್ತು. 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 65,999 ರೂ. ಆಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ 15,000 ರೂ.ಗಳ ಡಿಸ್ಕೌಂಟ್ ಪಡೆದಿದೆ. ನೀವು ಕೇವಲ 38,899 ರೂ. ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.
ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಈ ಫೋನಿನ 128GB ಮೂಲ ಮಾದರಿ ಬೆಲೆಯನ್ನು 44,999 ರೂ. ಕಡಿಮೆ ಮಾಡಲಾಗಿದೆ. ಜೊತೆಗೆ, ಫ್ಲಿಪ್‌ಕಾರ್ಟ್ ಆಕ್ಸಿಸ್ ಕ್ರೆಡಿಟ್ ಕಾರ್ಡ್ ಪವತಿ ಮೇಲೆ 2,100 ರೂ. ಕ್ಯಾಶ್‌ಬ್ಯಾಕ್ ಮತ್ತು 3,000 ರೂ. ಹೆಚ್ಚುವರಿ ಕೂಪನ್ ರಿಯಾಯಿತಿ ಲಭ್ಯವಿದೆ. ಒಟ್ಟಾರೆ 20,100 ರೂ.ಗಳ ದೊಡ್ಡ ರಿಯಾಯಿತಿ ಪಡೆದಿದೆ. ಇದರೊಂದಿಗೆ ಈ ಸ್ಯಾಮ್‌ಸಂಗ್ ಮೊಬೈಲ್‌ನ ಬೆಲೆ 38,899 ರೂ.ಗೆ ಇಳಿಕೆಯಾಗಿದೆ. ಈ ಮೊಬೈಲ್ ಮಿಂಟ್, ಗ್ರ್ಯಾಫೈಟ್ ಮತ್ತು ನೀಲಿ ಬಣ್ಣದಲ್ಲಿ ಮಾರಾಟವಾಗುತ್ತಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೀಚರ್ಸ್
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ಲಸ್ ರಕ್ಷಣೆ ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ Exynos 2400e ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಒನ್ ಯುಐ 6.1 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ, ಸ್ಯಾಮ್‌ಸಂಗ್ Xclipse 940 ಜಿಪಿಯು ಸಹ ಹೊಂದಿದೆ. ಈ ಫೋನ್ 8GB RAM, 128GB ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ತ್ರಿವಳಿ ಕ್ಯಾಮೆರಾಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 10 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನ್ 4700mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನಿನಲ್ಲಿ 25W ವೇಗದ ಚಾರ್ಜಿಂಗ್ ಸೌಲಭ್ಯ ಇದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಹಾಗೆಯೇ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ವೈ-ಫೈ 6E, ಬ್ಲೂಟೂತ್ 5.3, ಯುಎಸ್‌ಬಿ ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








