Home
Deal of the day

ದೊಡ್ಡ ಆಫರ್‌! 15000 ಉಳಿತಾಯ.. ಈ Samsung ಫೋನಿಗೆ ಭಾರೀ ಡಿಸ್ಕೌಂಟ್.. ಮತ್ತೆ ಮತ್ತೆ ಈ ಅವಕಾಶ ಸಿಗಲ್ಲ!

ಸ್ಯಾಮ್‌ಸಂಗ್ ಪ್ರಿಯರಿಗೆ ಇಲ್ಲಿದೆ ದೊಡ್ಡ ಸಿಹಿಸುದ್ದಿ. ಬಹುತೇಕ ಜನರು ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ ಖರೀದಿಸುವ ಆಸೆ ಹೊಂದಿರುತ್ತಾರೆ. ಆದರೆ, ಅಧಿಕ ಬೆಲೆಯಿಂದಾಗಿ, ಹಿಂದೆ ಸರಿಯುತ್ತಾರೆ. ಅಥವರ ಕನಸು ಇದೀಗ ನನಸಾಗಲಿದೆ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ಮಾನ್ಯುಮೆಂಟಲ್ ಸೇಲ್ 2025 (Flipkart Monumental Sale 2025) ನಡೆಯುತ್ತಿದೆ. ಈ ಮಾರಾಟದಲ್ಲಿ ನೀವು ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE (Samsung Galaxy S24 FE) ಫೋನನ್ನು 15,000 ರೂ. ರಿಯಾಯಿತಿಯೊಂದಿಗೆ ಖರೀದಿಸಬಹುದು. ಬನ್ನಿ, ಈ ಫೋನಿನ ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನ್ 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಸ್ಯಾಮ್‌ಸಂಗ್ Exynos 2400e ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 8GB RAM + 256GB ಸ್ಟೋರೇಜ್, 4700mAh ಬ್ಯಾಟರಿ ಮತ್ತು 25W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಈ ಫೋನ್‌ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ ತಿಳಿಯಲು ಮುಂದೆ ಓದಿ.

ದೊಡ್ಡ ಆಫರ್‌! 15000 ಉಳಿತಾಯ.. ಮತ್ತೆ ಮತ್ತೆ ಈ ಅವಕಾಶ ಸಿಗಲ್ಲ.. ಯಾವ ಫೋನ್?

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಬೆಲೆ ಮತ್ತು ಡಿಸ್ಕೌಂಟ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 59,999 ರೂ. ಆಗಿದೆ. 8GB RAM + 256GB ಸ್ಟೋರೇಜ್ ಆಯ್ಕೆಯನ್ನು 65,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 15,000 ರೂ. ರಿಯಾಯಿತಿ ನೀಡಲಾಗುತ್ತಿದೆ. ನೀವು 128GB ಸ್ಟೋರೇಜ್ ರೂಪಾಂತರವನ್ನು 44,999 ರೂ.ಗೆ ಖರೀದಿಸಬಹುದು. 256GB ಸ್ಟೋರೇಜ್ ಆಯ್ಕೆಯನ್ನು 50,999 ರೂ.ಗೆ ಕೊಳ್ಳಬಹುದು.

ನೀವು ಬರೋಬ್ಬರಿ 15,000 ರೂ. ಉಳಿತಾಯ ಮಾಡಬಹುದು. ಎಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್‌ ಪಾವತಿ ಮೇಲೆ ಹೆಚ್ಚುವರಿಯಾಗಿ, ಶೇ.10 ರಿಯಾಯಿತಿ ಪಡೆಯಬಹುದು. ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಪಾವತಿ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಲಭ್ಯವಿದೆ. ಈ ಮೊಬೈಲ್ ಮಿಂಟ್, ಗ್ರ್ಯಾಫೈಟ್ ಮತ್ತು ನೀಲಿ ಬಣ್ಣದಲ್ಲಿ ಮಾರಾಟವಾಗುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್‌ ದರ, 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ಲಸ್ ರಕ್ಷಣೆ ಹೊಂದಿದೆ.

ಪ್ರೊಸೆಸರ್ ಯಾವುದು?

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್ ಸ್ಯಾಮ್‌ಸಂಗ್ Exynos 2400e ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಸ್ಯಾಮ್‌ಸಂಗ್ Xclipse 940 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ಒನ್‌ ಯುಐ 6.1 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 8GB RAM, 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ದೊಡ್ಡ ಆಫರ್‌! 15000 ಉಳಿತಾಯ.. ಮತ್ತೆ ಮತ್ತೆ ಈ ಅವಕಾಶ ಸಿಗಲ್ಲ.. ಯಾವ ಫೋನ್?

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 10 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್ 4700mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ವೈ-ಫೈ 6E, ಬ್ಲೂಟೂತ್ 5.3, ಯುಎಸ್‌ಬಿ ಸಿ ಚಾರ್ಜಿಂಗ್ ಪೋರ್ಟ್‌ಗಳನ್ನು ಹೊಂದಿದೆ.

ಜ.19 ರವರೆಗೆ ಅಮೆಜಾನ್ ಸೇಲ್

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2025 ಜನವರಿ 13 ರಂದು ಪ್ರಾರಂಭವಾಗಿದೆ. ಇದು ಜನವರಿ 19 ರವರೆಗೆ ಸೇಲ್ ನಡೆಯುತ್ತದೆ. ಅಂದರೆ ಸುಮಾರು ಒಂದು ವಾರ ಕಾಲ ಈ ಸೇಲ್ ಇರುತ್ತದೆ. ಈ ಮಾರಾಟದಲ್ಲಿ ಬಂಪರ್ ಆಫರ್‌ಗಳು ಮತ್ತು ರಿಯಾಯಿತಿ ಲಭ್ಯವಿದೆ. ಸ್ಮಾರ್ಟ್‌ಫೋನ್‌ಗಳ ಜೊತೆಗೆ ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್‌ವಾಚ್‌ಗಳು, ಇಯರ್‌ಬಡ್‌ಗಳು, ಪವರ್ ಬ್ಯಾಂಕ್‌ಗಳು, ಸ್ಮಾರ್ಟ್ ಟಿವಿಗಳು, ಟ್ಯಾಬ್ಲೆಟ್‌ಗಳು, ಹೆಡ್‌ಫೋನ್‌ಗಳು, ಸೌಂಡ್‌ಬಾರ್‌ಗಳು ಮತ್ತು ಕ್ಯಾಮೆರಾಗಳು ರಿಯಾಯಿತಿ ದರದಲ್ಲಿ ಲಭ್ಯವಿರುತ್ತವೆ.

Best Mobiles in India

English summary
Samsung Galaxy S24 FE Gets Rs 15000 Price Drop on Flipkart Monumental Sale 2025: know offers, availability, specs and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+