Home
Deal of the day

Samsung: 18,000 ಡಿಸ್ಕೌಂಟ್ ಗುರು.. 3825 ಬ್ಯಾಂಕ್ ಆಫರ್.. ಯಾವ ಫೋನ್? ಹೊಸ ಬೆಲೆ ಇಷ್ಟೇನಾ!

ಸ್ಯಾಮ್‌ಸಂಗ್ ಪ್ರಿಯರೇ, ಮತ್ತೆ ಮತ್ತೆ ಈ ಅವಕಾಶ ಸಿಗಲ್ಲ! ಫ್ಲಿಪ್‌ಕಾರ್ಟ್‌ ನಿಮಗಾಗಿ ಬಂಪರ್ ಆಫರ್ ತಂದಿದೆ. ಬರೋಬ್ಬರಿ 18,000 ರೂ.ಗಳ ರಿಯಾಯಿತಿಯೊಂದಿಗೆ ಈ ಸೊಗಸಾದ ಸ್ಯಾಮ್‌ಸಂಗ್ ಫೋನನ್ನು ಮಾರಾಟ ಮಾಡುತ್ತಿದೆ. ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE (Samsung Galaxy S24 FE) ಮೊಬೈಲ್‌ನ ಬೆಲೆ ಭಾರೀ ಇಳಿಕೆಯಾಗಿದೆ. ಇನ್ನೇಕೆ ತಡ.. ಈ ಸ್ಯಾಮ್‌ಸಂಗ್ ಫೋನಿನ ಮೂಲ ಬೆಲೆ, ಆಫರ್‌ ಮತ್ತು ವಿಶೇಷತೆಗಳನ್ನು ತಿಳಿಯೋಣ ಬನ್ನಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಮೊಬೈಲ್ ಸ್ಯಾಮ್‌ಸಂಗ್ Exynos 2400e ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಇದರೊಂದಿಗೆ 8GB RAM + 256GB ಸ್ಟೋರೇಜ್, 4700mAh ಬ್ಯಾಟರಿ ಮತ್ತು 25W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Samsung: 18,000 ಡಿಸ್ಕೌಂಟ್ ಗುರು.. 3825 ಬ್ಯಾಂಕ್ ಆಫರ್.. ಯಾವ ಫೋನ್?

ನೀವು ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನನ್ನು ಮಿಂಟ್, ಗ್ರ್ಯಾಫೈಟ್ ಮತ್ತು ನೀಲಿ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಹುದು. ಈ ಫೋನಿನಲ್ಲಿ 8GB RAM, 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಸಹ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನಿನಲ್ಲಿ 5G, 4G LTE, ವೈ-ಫೈ 6E, ಬ್ಲೂಟೂತ್ 5.3, ಯುಎಸ್‌ಬಿ ಸಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಅಳವಡಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಹೊಸ ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಫೋನಿನ 8GB RAM + 128GB ಸ್ಟೋರೇಜ್ 59,999 ರೂ.ಗೆ ಬಿಡುಗಡೆಯಾಗಿತ್ತು. 8GB RAM + 256GB ಸ್ಟೋರೇಜ್ ಬೆಲೆ 65,999 ರೂ. ಆಗಿದೆ. ಪ್ರಸ್ತುತ, ಇದು ಫ್ಲಿಪ್‌ಕಾರ್ಟ್‌ನಲ್ಲಿ 18,000 ರೂ.ಗಳ ಭಾರೀ ರಿಯಾಯಿತಿಯೊಂದಿಗೆ ಲಭ್ಯವಿದೆ. ನೀವು 128GB ರೂಪಾಂತರವನ್ನು ಕೇವಲ 41,999 ರೂ.ಗೆ ಖರೀದಿಸಬಹುದು. ಇನ್ನು, 256GB ರೂಪಾಂತರವನ್ನು ಪ್ರಸ್ತುತ, ಕೇವಲ 47,999 ರೂ.ಗೆ ಪಟ್ಟಿ ಮಾಡಲಾಗಿದೆ. ಇದದರ ಜೊತೆಗೆ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕಾರ್ಡ್ ವಹಿವಾಟುಗಳನ್ನು ಬಳಸಿಕೊಂಡು 3,825 ರೂ.ಗಳವರೆಗೆ ರಿಯಾಯಿತಿಯನ್ನು ಪಡೆಯಬಹುದು. ಇದರೊಂದಿಗೆ ಈ ಫೋನಿನ ಬೆಲೆ 40,000 ರೂ.ಗಿಂತ ಕಡಿಮೆಗೆ ಲಭ್ಯವಾಗುತ್ತದೆ.

Samsung: 18,000 ಡಿಸ್ಕೌಂಟ್ ಗುರು.. 3825 ಬ್ಯಾಂಕ್ ಆಫರ್.. ಯಾವ ಫೋನ್?

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್‌ ದರ, 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ಲಸ್ ರಕ್ಷಣೆ ಹೊಂದಿದೆ. ಈ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್ ಕಂಪನಿಯ Exynos 2400e ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ಒನ್‌ ಯುಐ 6.1 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಸ್ಯಾಮ್‌ಸಂಗ್ Xclipse 940 ಜಿಪಿಯು ಸಹ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 10 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ 4700mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
Samsung Galaxy S24 FE Now Gets Rs 18,000 Discount in India: Check Price, offers, specs and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+