Home
Deal of the day

ಇದಪ್ಪಾ ಅದೃಷ್ಟ! 29,000 ರಿಯಾಯಿತಿ.. ಪಾತಾಳಕ್ಕೆ ಕುಸಿದ Samsung ಫೋನಿನ ಬೆಲೆ.. ಎಲ್ಲಿ ಖರೀದಿ?

ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಆಫರ್‌ಗಳ ಹಬ್ಬದೂಟ! ಸ್ಯಾಮ್‌ಸಂಗ್ ಅಭಿಮಾನಿಗಳಿಗೆ ಇಷ್ಟು ಸಾಕು. ಒಂದೆಡೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 (Samsung Galaxy S25) ಸರಣಿ ಬಿಡುಗಡೆ. ಮತ್ತೊಂದೆಡೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 (Samsung Galaxy S24) ಫೋನಿನ ಬೆಲೆ ಭಾರೀ ಇಳಿಕೆ. ಹೌದು, ಪ್ರಸಿದ್ಧ ಇ-ಕಾಮರ್ಸ್ ಕಂಪನಿ ಅಮೆಜಾನ್ ಅದ್ಭುತ ಆಫರ್‌ ನೀಡುತ್ತಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಫೋನ್‌ ಖರೀದಿ ಮೇಲೆ ದೊಡ್ಡ ರಿಯಾಯಿತಿಯನ್ನು ಘೋಷಿಸಿದೆ. ನೀವು ಬರೋಬ್ಬರಿ 29,000 ರೂ. ಉಳಿತಾಯ ಮಾಡಬಹುದು.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಫೋನ್ ಬಿಡುಗಡೆ ಬೆಲೆಗಿಂತ ಅಗ್ಗವಾಗಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಸ್ಯಾಮ್‌ಸಂಗ್‌ ಎಕ್ಸಿನೋಸ್ 2400 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.2 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 4000mAh ಬ್ಯಾಟರಿ ಮತ್ತು 8GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ ತಿಳಿಯಲು ಮುಂದೆ ಓದಿ.

29,000 ದರ ಕುಸಿತ! ಸಸ್ತಾ ಬೆಲೆಗೆ ದೈತ್ಯ Samsung ಫೋನ್.. ಎಲ್ಲಿ ಖರೀದಿ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ರಿಯಾಯಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಫೋನಿನ 8GB RAM + 128GB ಸ್ಟೋರೇಜ್‌ ರೂಪಾಂತರವನ್ನು 74,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ಅಮೆಜಾನ್‌ನಲ್ಲಿ ಬರೋಬ್ಬರಿ 29,000 ರೂ.ಗಳ ದೊಡ್ಡ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ನೀವು ಕೇವಲ 50,999 ರೂ.ಗೆ ಈ ಮೊಬೈಲ್ ಖರೀದಿಸಬಹುದು. ಇದಲ್ಲದೆ, ಎಕ್ಸ್‌ಚೇಂಜ್ ಆಫರ್‌ ಸಹ ಲಭ್ಯವಿದೆ. ಈ ರಿಯಾಯಿತಿಯ ಲಾಭ ಪಡೆಯಲು ಯಾವುದೇ ಕ್ರೆಡಿಟ್ ಕಾರ್ಡ್ ಅಗತ್ಯವಿಲ್ಲ. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ವೈಶಿಷ್ಟ್ಯಗಳು

ಡಿಸ್ಪ್ಲೇ ಮತ್ತು ಪ್ರೊಸೆಸರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್ 6.2 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2340 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್‌, 120Hz ರಿಫ್ರೆಶ್ ದರ ಮತ್ತು 2600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಸ್ಯಾಮ್‌ಸಂಗ್‌ನ ಎಕ್ಸಿನೋಸ್ 2400 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 14 ಆಧಾರಿತ OneUI 6.1 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ಮಾಡುತ್ತದೆ.

29,000 ದರ ಕುಸಿತ! ಸಸ್ತಾ ಬೆಲೆಗೆ ದೈತ್ಯ Samsung ಫೋನ್.. ಎಲ್ಲಿ ಖರೀದಿ?

ಮೂರು ಸೂಪರ್ ಕ್ಯಾಮೆರಾಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಮೊಬೈಲ್ ತ್ರಿವಳಿ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಫ್ಲ್ಯಾಷ್‌ ಲೈಟ್‌ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 3x ಆಪ್ಟಿಕಲ್ ಜೂಮ್‌ನೊಂದಿಗೆ 10 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಇದು ಎಐ ಫೀಚರ್ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸಹ ಹೊಂದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಇಂದು ಬಿಡುಗಡೆಯಾಗಲಿದೆ. ಹೀಗಾಗಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಫೋನಿನ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇದು ಅತ್ಯಂತ ಶಕ್ತಿಶಾಲಿ ಪ್ರಮುಖ ಫೋನ್ ಆಗಿದೆ. ನೀವು ಪ್ರೀಮಿಯಂ ಕಾರ್ಯಕ್ಷಮತೆ ಬಯಸಿದರೆ ಅಥವಾ ಹೆಚ್ಚು ಹಣ ಖರ್ಚು ಮಾಡಲು ಬಯಸದಿದ್ದರೆ, ಈ ಆಫರ್‌ ನಿಮಗೆ ಉತ್ತಮ ಆಯ್ಕೆಯಾಗಿದೆ.

Best Mobiles in India

English summary
Samsung Galaxy S24 Gets Massive Rs 29000 Discount ahead of Samsung Galaxy S25 launch: check new price, offers, availability specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+