Home
Deal of the day

ಈ ಜನಪ್ರಿಯ Redmi ಫೋನಿಗೆ ಸಖತ್ ಡಿಸ್ಕೌಂಟ್‌!..ಇದು ದೀಪಾವಳಿ ಹಬ್ಬದ ಕೊಡುಗೆ!

ಇನ್ನೇನು ದೀಪಾವಳಿ ಹಬ್ಬ ಹತ್ತಿರದಲ್ಲೇ ಇದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದೆ. ಇನ್ನು ದೀಪಾವಳಿ ಹಬ್ಬದ ವೇಳೆ ಖರೀದಿ ಜೋರಾಗಿರುತ್ತದೆ. ಈ ನಿಟ್ಟಿನಲ್ಲಿ ಆನ್‌ಲೈನ್‌ ಶಾಪಿಂಗ್‌ ತಾಣಗಳು ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ನೀಡುತ್ತವೆ. ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ಕೂಡಾ ಆಯ್ದ ಮೊಬೈಲ್‌ಗಳಿಗೆ ಜಬರ್ದಸ್ತ್‌ ಡಿಸ್ಕೌಂಟ್‌ ಘೋಷಿಸಿದ್ದು, ಹೊಸ ಫೋನ್‌ ಖರೀದಿಸುವ ಗ್ರಾಹಕರಿಗೆ ಸಂತಸ ಎನಿಸಿದೆ. ಆ ಪೈಕಿ ರೆಡ್ಮಿ ನೋಟ್ 13 (Redmi Note 13 5G) ಫೋನ್‌ ಗ್ರಾಹಕರು ಹಿಂತಿರುಗಿ ನೋಡುವಂತಹ ಆಫರ್‌ ಪಡೆದಿದೆ.

ಹೌದು, ದಿಗ್ಗಜ ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ನಲ್ಲಿ ರೆಡ್ಮಿ ನೋಟ್‌ 13 5G (Redmi Note 13 5G) ಫೋನ್‌ ಶೇ. 27% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB + 256 GB ವೇರಿಯಂಟ್‌ 16,685ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಖರೀದಿದಾರರು ಇನ್ನಷ್ಟು ರಿಯಾಯಿತಿ ಪಡೆಯಲು ಲಭ್ಯ ಇರುವ ಬ್ಯಾಂಕ್‌ ಆಫರ್‌ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಳ್ಳಬಹುದು.

ಈ ಜನಪ್ರಿಯ Redmi ಫೋನಿಗೆ ಸಖತ್ ಡಿಸ್ಕೌಂಟ್‌!..ಇದು ದೀಪಾವಳಿ ಹಬ್ಬದ ಕೊಡುಗೆ!

ಅಂದಹಾಗೆ ಈ ಮೊಬೈಲ್‌ 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಪಡೆದುಕೊಂಡಿದ್ದು, ಜೊತೆಗೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದಿದೆ. ಇನ್ನು ಅಮೆಜಾನ್‌ನಲ್ಲಿ ರೆಡ್ಮಿ ನೋಟ್‌ 13 5G ಅನ್ನು ಭರ್ಜರಿ ಆಫರ್‌ನಲ್ಲಿ ಖರೀದಿಸಬಹುದು. ಹಾಗಾದರೇ ಈ ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರೆಡ್ಮಿ ನೋಟ್‌ 13 5G - ಫೀಚರ್ಸ್‌

ರೆಡ್ಮಿ ನೋಟ್‌ 13 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 × 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, ಇದು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಸಪೋರ್ಟ್‌ ಇದೆ.

ರೆಡ್ಮಿ ನೋಟ್‌ 13 5G ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಓಎಸ್‌ ಬೆಂಬಲ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಸಪೋರ್ಟ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ರೆಡ್ಮಿ ನೋಟ್‌ 13 5G ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 13 5G ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳು 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ.

Best Mobiles in India

English summary
Significant Price Cut on Redmi Note 13 5G on Amazon Diwali Sale. Check out offer price, specifications and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+