Home
Deal of the day

Tecno: ಕೇವಲ 28,999 ರೂ.! ಭರ್ತಿ 26,000 ಉಳಿತಾಯ.. ಈ ದೈತ್ಯ ಫೋನಿನ ಬೆಲೆ ಭಾರೀ ಇಳಿಕೆ

ಟೆಕ್ನೋ ತನ್ನ ಗ್ರಾಹಕರಿಗೆ ದೊಡ್ಡ ಸಿಹಿಸುದ್ದಿ ನೀಡಿದೆ. ನೀವು, ಕಡಿಮೆ ಬೆಲೆಯಲ್ಲಿ ಫ್ಲಿಪ್ ಮೊಬೈಲ್ ಖರೀದಿಸಲು ಅವಕಾಶ ಮಾಡಿಕೊಟ್ಟಿದೆ. ಹೌದು, ಕಂಪನಿಯು ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G (TECNO Phantom V Flip 5G) ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ಅಮೆಜಾನ್‌ನಲ್ಲಿ ಬರೋಬ್ಬರಿ ಶೇ.60 ರಷ್ಟು ರಿಯಾಯಿತಿ ಲಭ್ಯವಿದೆ. ಕೇವಲ 28,999 ರೂ.ಗೆ ಈ ದೈತ್ಯ ಸ್ಮಾರ್ಟ್‌ಫೋನ್‌ ಮಾರಾಟವಾಗುತ್ತಿದೆ. ಬನ್ನಿ, ಈ ಫೋನಿನ ವಿಶೇಷತೆಗಳನ್ನು ತಿಳಿಯೋಣ.

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಫೋನ್ ಕಳೆದ ವರ್ಷ ಭಾರತದಲ್ಲಿ ಬಿಡುಗಡೆಯಾಗಿತ್ತು. ಈ ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8050 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.9 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 256GB ಸ್ಟೋರೇಜ್, 4000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Tecno: ಕೇವಲ 28,999 ಸಾಕು! ಈ ದೈತ್ಯ ಫೋನಿನ ಬೆಲೆ ಭಾರೀ ಇಳಿಕೆ; 26,000 ಉಳಿತಾಯ

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಹೊಸ ಬೆಲೆ

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಫೋನ್ 8GB RAM + 256GB ಸ್ಟೋರೇಜ್‌ ರೂಪಾಂತರದಲ್ಲಿ ಮಾರಾಟವಾಗುತ್ತಿದೆ. ಪ್ರಸ್ತುತ, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ 26,000 ರೂ. ಕಡಿಮೆ ಬೆಲೆಗೆ ಲಭ್ಯವಿದೆ. ಕಂಪನಿಯು ಈ ಫೋನನ್ನು 54,899 ರೂ.ಗೆ ಬಿಡುಗಡೆ ಮಾಡಿತ್ತು. ಬರೋಬ್ಬರಿ ಶೇ.60 ರಷ್ಟು ರಿಯಾಯಿತಿಯೊಂದಿಗೆ, ಈ ಫೋನನ್ನು ಕೇವಲ 28,999 ರೂ.ಗೆ ಖರೀದಿಸಬಹುದು.

ಕಂಪನಿಯು 27,350 ರೂ.ಗಳ ವರೆಗೆ ಎಕ್ಸ್‌ಚೇಂಜ್‌ ಆಫರ್‌ ಸಹ ನೀಡುತ್ತಿದೆ. ನೀವು ಬ್ಯಾಂಕ್ ಆಫರ್‌ ಮತ್ತು ಎಕ್ಸ್‌ಚೇಂಜ್‌ ಬೋನಸ್‌ಗಳ ಲಾಭ ಪಡೆಯದಿದ್ದರೂ 26,000 ರೂ.ಗಳ ಫ್ಲಾಟ್ ರಿಯಾಯಿತಿಯು ಲಭ್ಯವಿದೆ. ನೀವು, ಈ ಫೋನ್ನು ಐಕಾನಿಕ್ ಬ್ಲ್ಯಾಕ್ ಬಣ್ಣದಲ್ಲಿ ಖರೀದಿಸಬಹುದು. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಸ್ಮಾರ್ಟ್‌ಫೋನ್ 6.9 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಫೋನಿನಲ್ಲಿ 1.32 ಇಂಚಿನ ಅಮೋಲೆಡ್ ದ್ವಿತೀಯ ಡಿಸ್ಪ್ಲೇ ಲಭ್ಯವಿದೆ.

ಪ್ರೊಸೆಸರ್ ಯಾವುದು?

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8050 ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ ಮಾಲಿ G77 ಜಿಪಿಯು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 13 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಫೋನ್ 8GB RAM ಮತ್ತು 256GB ಆಂತರಿಕ ಸ್ಟೋರೇಜ್‌ ಹೊಂದಿದೆ. ಇದು 8GB ವರ್ಚುವಲ್ RAM ಬೆಂಬಲ ಪಡೆದಿದೆ.

Tecno: ಕೇವಲ 28,999 ಸಾಕು! ಈ ದೈತ್ಯ ಫೋನಿನ ಬೆಲೆ ಭಾರೀ ಇಳಿಕೆ; 26,000 ಉಳಿತಾಯ

32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಸ್ಮಾರ್ಟ್‌ಫೋನ್ 64 ಮೆಗಾಪಿಕ್ಸೆಲ್ RGBW ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಜೊತೆಗೆ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಪವರ್‌ ಫುಲ್ ಬ್ಯಾಟರಿ

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಮೊಬೈಲ್ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಟೆಕ್ನೋ ಫ್ಯಾಂಟಮ್ ವಿ ಫ್ಲಿಪ್ 5G ಫೋನ್ ಸ್ಟಿರಿಯೊ ಸ್ಪೀಕರ್, ಅಲ್ಟ್ರಾ ಥಿನ್ ವಿಸಿ ಲಿಕ್ವಿಡ್ ಕೂಲಿಂಗ್, ಎನ್‌ಎಫ್‌ಸಿ, ಡ್ಯುಯಲ್ ಸಿಮ್ 5G, 4G, ವೈಫೈ, ಬ್ಲೂಟೂತ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Tecno Phantom V Flip 5G Received Massive Price Cut on Amazon Sale: know availability, offers, specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+