ಆಫರ್ ಬೆಲೆಗೆ 108ಎಂಪಿ ಕ್ಯಾಮೆರಾ ಇರುವ ಫೋನ್ ಖರೀದಿಸಲು ಇದು ಒಳ್ಳೆಯ ಚಾನ್ಸ್!
ಲೀಡಿಂಗ್ ಇ ಕಾಮರ್ಸ್ ತಾಣ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಫೋನ್‌ಗಳಿಗೆ ಏನಾದರೊಂದು ವಿಶೇಷ ರಿಯಾಯಿತಿ ನೀಡುತ್ತ ಸಾಗಿದೆ. ಅದರಲ್ಲಿಯೂ ಯಾವುದಾದರೂ ಹಬ್ಬ ಹಾಗೂ ವಿಶೇಷ ದಿನಗಳು ಬಂದಾಗ ಮತ್ತಷ್ಟು ಕೊಡುಗೆ ಲಭ್ಯ ಮಾಡುತ್ತದೆ. ಸದ್ಯ ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್ 20 ಪ್ರೊ 5G (TECNO Spark 20 PRO 5G) ಮೊಬೈಲ್ ಸಖತ್ ದರ ಕಡಿತದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಟೆಕ್ನೋ ಕಂಪನಿಯ ಟೆಕ್ನೋ ಸ್ಪಾರ್ಕ್ 20 ಪ್ರೊ 5G (TECNO Spark 20 PRO 5G) ಫೋನ್ ಶೇ. 20% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 15,999 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಸಿಗಲಿದೆ.

ಇನ್ನು ಟೆಕ್ನೋ ಸಂಸ್ಥೆಯ ಈ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಹೊಂದಿದ್ದು, ಹಾಗೆಯೇ 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಅದಲ್ಲದೇ 108 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ರಚನೆ ಪಡೆದಿದ್ದು, ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ಪಡೆದಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ 20 ಪ್ರೊ 5G - ಫೀಚರ್ಸ್
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ.
ಹಾಗೆಯೇ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ 8 GB RAM + 128 GB ಹಾಗೂ 8 GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಮೂರು ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಒಳಗೊಂಡಂತೆ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಹೊಂದಿದೆ.


Click it and Unblock the Notifications








