ಟೆಕ್ನೋ ಸ್ಪಾರ್ಕ್ 9 ಮೊಬೈಲ್ ಬೆಲೆಯಲ್ಲಿ ಇದೀಗ ಬಿಗ್ ಡಿಸ್ಕೌಂಟ್!
ಮಾರುಕಟ್ಟೆಗೆ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಗುರುತಿಸಿಕೊಂಡಿರುವ ಟೆಕ್ನೋ ಕಂಪನಿಯು ತನ್ನ ಸ್ಪಾರ್ಕ್ ಸರಣಿಯ ಫೋನ್‌ಗಳ ಗ್ರಾಹಕರನ್ನು ಗಮನ ಆಕರ್ಷಿಸಿದೆ. ಆ ಪೈಕಿ ಟೆಕ್ನೋ ಸ್ಪಾರ್ಕ್ 9 ಮೊಬೈಲ್ ಒಂದಾಗಿದ್ದು, ಇದು ಅಗ್ಗದ ಬೆಲೆಯ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಇದೀಗ ಈ ಫೋನ್ ಬೆಲೆಯಲ್ಲಿ ಸಖತ್ ರಿಯಾಯಿತಿ ಪಡೆದಿದ್ದು, ಗ್ರಾಹಕರು ಖುಷ್ ಪಡುವಂತೆ ಆಗಿದೆ.
ಹೌದು, ಅಮೆಜಾನ್ ತಾಣದಲ್ಲಿ ಟೆಕ್ನೋ ಸ್ಪಾರ್ಕ್ 9 ಫೋನ್ 35% ರಷ್ಟು ಡಿಸ್ಕೌಂಟ್ ಹೊಂದಿದೆ. ಈ ಮೊಬೈಲ್ (4GB + 6BGB) ಬೆಲೆ 11,499ರೂ. ಇದ್ದು, ಈಗ 7,499ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಹಾಗೆಯೇ ನೋ ಕಾಸ್ಟ್ ಇಎಮ್‌ಐ ಅವಕಾಶವು ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಖಚಿತ. ಹಾಗಾದರೇ ಟೆಕ್ನೋ ಸ್ಪಾರ್ಕ್ 9 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್ 9 ಡಿಸ್‌ಪ್ಲೇ ವಿನ್ಯಾಸ ಹೇಗೆ: ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 266 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಪಡೆದಿದ್ದು, ವೀಡಿಯೋ ವೀಕ್ಷಣೆಗೆ ಹಾಗೂ ವೀಡಿಯೋ ಕರೆಗಳಿಗೆ ಸೂಕ್ತ ಮಾದರಿಯನ್ನು ಪಡೆದುಕೊಂಡಿದೆ.
ಟೆಕ್ನೋ ಸ್ಪಾರ್ಕ್ 9 ಪ್ರೊಸೆಸರ್ ಪವರ್ ಏನಿದೆ : ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್ ಪವರ್ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 4GB RAM + 64GB, 6GB RAM + 128 GB ಹಾಗೂ 3GB RAM + 64GB ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದರಲ್ಲಿ ನೀವು ವರ್ಚುವಲ್ RAM ಫೀಚರ್ಸ್ ಮೂಲಕ 5GB RAM ವರೆಗೆ RAM ವಿಸ್ತರಿಸಬಹುದು.
ಟೆಕ್ನೋ ಸ್ಪಾರ್ಕ್ 9 ಕ್ಯಾಮೆರಾ ಸೆನ್ಸಾರ್ ಕಮಾಲ್ : ಟೆಕ್ನೋ ಸ್ಪಾರ್ಕ್ 9 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು AI ಕ್ಯಾಮೆರಾವನ್ನು ಒಳಗೊಂಡಿದೆ. ಈ ಕ್ಯಾಮೆರಾ LED ಫ್ಲ್ಯಾಷ್ ಸಹ ಪಡೆದಿದೆ. ಜೊತೆಗೆ ಪೂರಕವಾಗದ ಸೆಲ್ಫಿ ಕ್ಯಾಮೆರಾ ಸಹ ಈ ಫೋನ್ ಪಡೆದಿದೆ.
ಟೆಕ್ನೋ ಸ್ಪಾರ್ಕ್ 9 ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ : ಟೆಕ್ನೋ ಸ್ಪಾರ್ಕ್ 9 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಮತ್ತು ಬ್ಲೂಟೂತ್ 5.0. GPS, GNSS, ಗೆಲಿಲಿಯೋ, ಬೀಡೌ ಮತ್ತು 4G LTE ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ DTS ಬೆಂಬಲಿಸುವ ಸ್ಪೀಕರ್‌ಗಳನ್ನು ಒಳಗೊಂಡಿದೆ. ಜೊತೆಗೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೊಮೀಟರ್ ಅನ್ನು ಸಹ ಇದು ಪಡೆದುಕೊಂಡಿದೆ.
ಟೆಕ್ನೋ ಸ್ಪಾರ್ಕ್ 9 ಸ್ಟೋರೇಜ್ ಮತ್ತು ಕಲರ್ ಆಯ್ಕೆ : ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ವೇರಿಯಂಟ್ ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಫೋನ್ ಅನ್ನು ನೀವು ಇನ್ಫಿನಿಟಿ ಬ್ಲಾಕ್ ಮತ್ತು ಸ್ಕೈ ಮಿರರ್ ಬಣ್ಣಗಳಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ.


Click it and Unblock the Notifications








