Home
Deal of the day

ಅಮೆಜಾನ್‌ನಲ್ಲಿ ಎಂಟ್ರಿ ಲೆವೆಲ್‌ ಮೊಬೈಲ್‌ಗಳಿಗೂ ಆಕರ್ಷಕ ಡಿಸ್ಕೌಂಟ್‌ ಲಭ್ಯ!

ಪ್ರಮುಖ ಇ ಕಾಮರ್ಸ್‌ ಅಮೆಜಾನ್ ಪ್ಲಾಟ್‌ಫಾರ್ಮ್ ಆನ್‌ಲೈನ್‌ ಶಾಪಿಂಗ್ ಪ್ರಿಯರನ್ನು ಸೆಳೆಯಲು ಒಂದಿಲ್ಲೊಂದು ಆಕರ್ಷಕ ಸೇಲ್‌ ಆಯೋಜಿಸುತ್ತಲೇ ಸಾಗಿ ಬಂದಿದೆ. ಮುಖ್ಯವಾಗಿ ಹಬ್ಬದ ದಿನಗಳಂದು ಕೊಡುಗೆಗಳ ಸುರಿಮಳೆ ಸುರಿಸುತ್ತದೆ. ಫೋನ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಸ್ಪೆಷಲ್ ರಿಯಾಯಿತಿ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆಯುತ್ತದೆ. ಇನ್ನು ಕೆಲವು ಹಬ್ಬದ ಸೇಲ್‌ ನಲ್ಲಿ ಆಯ್ದ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಅಧಿಕ ಡಿಸ್ಕೌಂಟ್‌ ಗಳನ್ನು ತಿಳಿಸುತ್ತದೆ.

ಅಮೆಜಾನ್‌ನಲ್ಲಿ ಎಂಟ್ರಿ ಲೆವೆಲ್‌ ಮೊಬೈಲ್‌ಗಳಿಗೂ ಆಕರ್ಷಕ ಡಿಸ್ಕೌಂಟ್‌ ಲಭ್ಯ!

ರಿಯಾಯಿತಿ ದರದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಖರೀದಿಗೆ ಅಮೆಜಾನ್ ಇ ಕಾಮರ್ಸ್‌ ಬೆಸ್ಟ್‌ ತಾಣವಾಗಿ ಗುರುತಿಸಿಕೊಂಡಿದೆ. ಈ ಪ್ಲಾಟ್‌ಫಾರ್ಮ್‌ ಪ್ರತಿಷ್ಠಿತ ಬ್ರ್ಯಾಂಡ್‌ನ ಮೊಬೈಲ್ ಫೋನ್‌ಗಳು, ಸ್ಪೀಕರ್‌ ಗಳು, ಸ್ಮಾರ್ಟ್‌ವಾಚ್‌ ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಸ್ಮಾರ್ಟ್‌ ಉತ್ಪನ್ನಗಳಿಗೆ ಸ್ಪೆಷಲ್ ಕೊಡುಗೆ ನೀಡುತ್ತದೆ. ಆಯ್ದ ಕೆಲವು ಎಂಟ್ರಿ ಲೆವೆಲ್‌ ಫೋನ್‌ಗಳು ಆಫರ್‌ನಲ್ಲಿ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್ ಸೇಲ್‌ನಲ್ಲಿ ಕಡಿಮೆ ದರದಲ್ಲಿ ಕಾಣಿಸಿಕೊಂಡಿರುವ ಎಂಟ್ರಿ ಲೆವೆಲ್‌ ಫೋನ್‌ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD + IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.

ರೆಡ್ಮಿ 9A ಸ್ಮಾರ್ಟ್‌ಫೋನ್‌
ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ. ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32 GB ಮತ್ತು 3 GB RAM + 32 GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ರೆಡ್ಮಿ 9A ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತ ವನ್ನು ಒಳಗೊಂಡಿದ್ದು, 401 ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ರೆಡ್ಮಿ 9 ಸ್ಮಾರ್ಟ್‌ಫೋನ್
ರೆಡ್ಮಿ 9 ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM ಸಾಮರ್ಥ್ಯ ವನ್ನು ಪಡೆದಿದ್ದು, 64 GB ಮತ್ತು 128 GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದೆ. 5000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆ ಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲ ವನ್ನು ಒದಗಿಸಲಾಗಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
These Entry Level Mobiles Available at Discount Price on Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+