ಅಧಿಕ ಡಿಸ್ಕೌಂಟ್‌ನಲ್ಲಿ ಒಪ್ಪೋ ಸ್ಮಾರ್ಟ್‌ಫೋನ್ ಖರೀದಿ ಮಾಡೋಕೆ ಇದು ಸಕಾಲ!
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳು ಗ್ರಾಹಕರನ್ನು ಸೆಳೆಯುವಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಆ ಪೈಕಿ ಅಮೆಜಾನ್ ಪ್ಲಾಟ್‌ಫಾರ್ಮ್ ಇ ಕಾಮರ್ಸ್ ದೈತ್ಯ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ಹಾಗೆಯೇ ಹಬ್ಬದ ಸೇಲ್ ಹೊರತು ಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಕಡಿಮೆ ಬೆಲೆಯ ಫೋನ್‌ಗಳಿಂದ ಆಯ್ಕೆಯಿಂದ, ಹೈ ಎಂಡ್ ಬೆಲೆಯ ಫೋನ್‌ಗಳಿಗೂ ಆಕರ್ಷಕ ಕೊಡುಗೆ ಸಿಗುತ್ತದೆ. ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳು ಸೇರಿದಂತೆ, ಇತ್ತೀಚಿಗೆ ಬಿಡುಗಡೆ ಆಗಿರುವ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೂ ಬೊಂಬಾಟ್ ರಿಯಾಯಿತಿ ಇರುತ್ತದೆ. ಅಮೆಜಾನ್‌ನಲ್ಲಿ ಒಪ್ಪೋ ಕಂಪನಿಯ ಆಯ್ದ ಫೋನ್‌ಗಳಿಗೂ ಆಕರ್ಷಕ ಡಿಸ್ಕೌಂಟ್ ಲಭ್ಯ ಇದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಬೆಸ್ಟ್ ಡಿಸ್ಕೌಂಟ್ ಪಡೆದ ಒಪ್ಪೋ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೊ A31 ಸ್ಮಾರ್ಟ್‌ಫೋನ್
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB +128GB ವೇರಿಯಂಟ್ ಆಯ್ಕೆ ಹೊಂದಿದೆ. ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.
ಒಪ್ಪೋ A74 5G ಸ್ಮಾರ್ಟ್‌ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ಒಪ್ಪೋ A16 ಸ್ಮಾರ್ಟ್‌ಫೋನ್
ಒಪ್ಪೋ A16 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್, 60Hz ಟಚ್ ಸ್ಯಾಂಪ್ಲಿಂಗ್ ರೇಟ್, 269ppi ಪಿಕ್ಸೆಲ್ ಸಾಂದ್ರತೆ ಮತ್ತು 480 ನಿಟ್ಸ್ ಗರಿಷ್ಠ ಹೊಳಪನ್ನು ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. 3GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಹಾಗೆಯೇ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಒಪ್ಪೊ F17 ಸ್ಮಾರ್ಟ್‌ಫೋನ್
ಒಪ್ಪೊ F17 ಸ್ಮಾರ್ಟ್‌ಫೋನ್ 6.44 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ವಾಟರ್‌ಡ್ರಾಪ್ ನಾಚ್ ಸ್ಟೈಲ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 4GB/64GB, 6GB/128GB ಮತ್ತು 8GB/128GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಸಹ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 16ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,000 mAh ಬ್ಯಾಟರಿಯನ್ನು ಪಡೆದಿದ್ದು, 30W VOOC ಚಾರ್ಜ್ 4.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.
ಒಪ್ಪೋ A15s ಸ್ಮಾರ್ಟ್‌ಫೋನ್
ಒಪ್ಪೋ A15s ಸ್ಮಾರ್ಟ್‌ಫೋನ್ 720 x 1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM + 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 4200 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications