ನೂತನ ಮೊಬೈಲ್ ಖರೀದಿ ಮಾಡುವ ಗ್ರಾಹಕರಿಗೆ ಈ ಕೊಡುಗೆ ಸೂಕ್ತ!
ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್ ಏನಾದರೊಂದು ವಿಶೇಷ ಸೇಲ್ ಆಯೋಜಿಸುತ್ತಲೇ ಮುನ್ನಡೆದಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ಬೊಂಬಾಟ್ ರಿಯಾಯಿತಿ ಕೊಡುಗೆ ಅನ್ನು ಆಯೋಜಿಸಿ ಗಮನ ಸೆಳೆಯುತ್ತದೆ. ಇನ್ನು ಹಬ್ಬದ ಹಾಗೂ ಮಂತ್ ಎಂಡ್ ದಿನಗಳಲ್ಲಿ ಅಮೆಜಾನ್ ಆಯ್ದ ಡಿವೈಸ್‌ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸುತ್ತದೆ. ಹಾಗೆಯೇ ಯಾವುದೇ ವಿಶೇಷ ಸೇಲ್ ಇಲ್ಲದ ವೇಳೆಯು ಅತ್ಯುತ್ತಮ ಕೊಡುಗೆ ಲಭ್ಯ ಮಾಡಿದೆ.

ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ಪ್ಲಾಟ್‌ಫಾರ್ಮ್ ಆಗಿದೆ. ಅಮೆಜಾನ್ ಪ್ರಮುಖ ಕಂಪನಿಗಳ ಮೊಬೈಲ್‌ಗಳು ಸೇರಿದಂತೆ ಹೊಸ ಸ್ಮಾರ್ಟ್‌ಫೋನ್‌ಗಳಿಗೆ ಸಹ ದೊಡ್ಡ ಡಿಸ್ಕೌಂಟ್ ಗಳನ್ನು ಲಭ್ಯ ಮಾಡುತ್ತದೆ.ಇದರೊಂದಿಗೆ ಬ್ಯಾಂಕ್‌ಗಳ ಕೊಡುಗೆ, ಎಕ್ಸ್‌ಚೆಂಜ್ ಆಫರ್, ಇಎಮ್‌ಐ ಸೌಲಭ್ಯ ಸಹ ಲಭ್ಯ ಇರುತ್ತವೆ. ಹಾಗಾದರೇ ಪ್ರಸ್ತುತ ಅಮೆಜಾನ್ ತಾಣದಲ್ಲಿ ಅತ್ಯುತ್ತಮ ರಿಯಾಯಿತಿ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.
ರೆಡ್ಮಿ 9A ಸ್ಪೋರ್ಟ್ ಫೋನ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್ ಶಕ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್
ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು AI ಅನ್ನು ಕ್ವಾಡ್ ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು 32 ದಿನಗಳ ಸ್ಟ್ಯಾಂಡ್‌ಬೈ ಮತ್ತು 183 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಅನ್ನು ನೀಡುತ್ತದೆ.


Click it and Unblock the Notifications