ವಿವೋದ ಈ ಜನಪ್ರಿಯ ಸ್ಮಾರ್ಟ್‌ಫೋನ್ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಬೆಲೆ ಇಳಿಕೆ!
ಪ್ರಮುಖ ಇ ಕಾಮರ್ಸ್ ತಾಣ ಆಗಿರುವ ಫ್ಲಿಪ್‌ಕಾರ್ಟ್ ಆನ್‌ಲೈನ್ ಆಫರ್‌ಗಳ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದೆ. ಇನ್ನು ಫ್ಲಿಪ್‌ಕಾರ್ಟ್ ಸಂಸ್ಥೆಯು ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಅಧಿಕ ರಿಯಾಯಿತಿ ಘೋಷಿಸುವ ಮೂಲಕ ಮೊಬೈಲ್ ಪ್ರಿಯರನ್ನು ತನ್ನತ್ತ ಸೆಳೆಯುತ್ತದೆ. ಇದೀಗ ಫ್ಲಿಪ್‌ಕಾರ್ಟ್ ನಲ್ಲಿ ವಿವೋ ಕಂಪನಿಯ ವಿವೋ T3x 5G (vivo T3x 5G) ಸ್ಮಾರ್ಟ್‌ಫೋನ್ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರಿಗೆ ಸಂತಸ ಎನಿಸಿದೆ. ಇನ್ನು ವಿವೋ ಸಂಸ್ಥೆಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ T3x 5G ಮೊಬೈಲ್ ಶೇ. 21% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಮೊಬೈಲ್ 6 GB RAM + 128GB ವೇರಿಯಂಟ್ 14,999ರೂ. ಗಳ ಆಫರ್ ಪ್ರೈಸ್ ಟ್ಯಾಗ್‌ನಲ್ಲಿ ಲಭ್ಯ ಆಗಲಿದೆ. ಉಳಿದಂತೆ ಗ್ರಾಹಕರಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆ ಮತ್ತು ಕೆಲವು ಆಯ್ದ ಬ್ಯಾಂಕ್‌ಗಳಿಂದ ಬೊಂಬಾಟ್ ರಿಯಾಯಿತಿ ಸಹ ಸಿಗಲಿವೆ.

ಇನ್ನು ಈ ಫೋನ್ 4GB + 128GB ಆಯ್ಕೆ, 6GB + 128GB ಆಯ್ಕೆ ಹಾಗೂ 8GB + 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇದರ ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬಲ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ. ಇನ್ನುಳಿದಂತೆ ವಿವೋ T3x 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ T3x 5G - ಫೀಚರ್ಸ್ ಹೀಗಿವೆ
ವಿವೋ T3x 5G ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಹೊಂದಿದೆ. ಇದು ಫುಲ್ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್ HBM ಬ್ರೈಟ್‌ನೆಸ್ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಪಡೆದಿದೆ.
ವಿವೋ T3x 5G ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ ಬಲದಲ್ಲಿ ಕಾರ್ಯ ಮಾಡಲಿದ್ದು, ಅಡ್ರಿನೋ 710 ಜಿಪಿಯುನ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 14 ಓಎಸ್ ಅನ್ನು ಆಧರಿಸಿದ ಫನ್‌ಟಚ್ ಓಎಸ್ 14 ಅನ್ನು ಕೆಲಸ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್ 4GB + 128GB ಆಯ್ಕೆ, 6GB + 128GB ಆಯ್ಕೆ ಹಾಗೂ 8GB + 128GB ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ವಿವೋ T3x 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಇದು 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ. ಅಲ್ಲದೇ ಈ ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, ಇದರ ಜೊತೆಗೆ 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ.


Click it and Unblock the Notifications



