ಮೊಟೊ ಸಂಸ್ಥೆಯ ಈ ಅಗ್ಗದ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ; ಗ್ರಾಹಕರಿಗೆ ಖುಷಿ!
ಆನ್‌ಲೈನ್ ಮಾರುಕಟ್ಟೆಯಲ್ಲಿ ಇ ಕಾಮರ್ಸ್ ದಿಗ್ಗಜ ಎಂದೇ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಎಲ್ಲ ಉತ್ಪನ್ನಗಳಿಗೂ ಕೊಡುಗೆ ಘೋಷಿಸಿರುತ್ತದೆ. ಮುಖ್ಯವಾಗಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೂ ಸಹ ಆಕರ್ಷಕ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಮುನ್ನಡೆದಿದೆ. ಇದೀಗ ಮೊಟೊ G04 ಫೋನ್ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಖರೀದಿದಾರರು ಬೆರಗುಗಣ್ಣಿನಿಂದ ಈ ಫೋನಿನತ್ತ ನೋಡುವಂತಾಗಿದೆ. ಅಂದಹಾಗೆ ಈ ಮೊಬೈಲ್ ಯುನಿಸೊಕ್ T606 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊರೊಲಾ ಸಂಸ್ಥೆಯ ಮೊಟೊ G04 ಫೋನ್ (Motorola G04) ಮೊಬೈಲ್ ಶೇ. 27% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 7,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಪಡೆಯಬಹುದಾಗಿದೆ.

ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಹಾಗೆಯೇ ಇದು ಯುನಿಸೊಕ್ T606 SoC ಪ್ರೊಸೆಸರ್ ಪವರ್ ಪಡೆದುಕೊಂಡಿದೆ. ಇನ್ನು ಈ ಫೋನ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಮೊಟೊ G04 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಮೊಟೊ G04 ಮೊಬೈಲ್ ಫೀಚರ್ಸ್
ಮೊಟೊ ಸಂಸ್ಥೆಯ ಈ ಫೋನ್ 6.5 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, ಹಾಗೆಯೇ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ.
ಮೊಟೊ ಕಂಪನಿಯ ಈ ಮೊಬೈಲ್ ಯುನಿಸೊಕ್ T606 SoC ಪ್ರೊಸೆಸರ್ ಬಲ ಪಡೆದಿದೆ. ಇದು ಮೊಟೊ G034 My UX-ಆಧಾರಿತ ಆಂಡ್ರಾಯ್ಡ್ 14 ನಲ್ಲಿ ಕಾರ್ಯ ಮಾಡಲಿದೆ. ಹಾಗೆಯೇ ಇದು 4GB + 64GB ಹಾಗೂ 8GB RAM ಮತ್ತು 128 GB ಸ್ಟೋರೇಜ್ ಸಾಮರ್ಥ್ಯ ಪಡೆದಿದೆ. ಇನ್ನು 8GB ವರೆಗಿನ ವರ್ಚುವಲ್ RAM ವಿಸ್ತರಿಸುವುದಕ್ಕೆ ಕೂಡ ಅವಕಾಶ ಇದೆ.
ಈ ಮೊಬೈಲ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಪಡೆದಿದ್ದು, ಬ್ಯಾಕ್ ಪ್ಯಾನೆಲ್ LED ಫ್ಲ್ಯಾಷ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್, ಫೋಟೋ, ನೈಟ್ ವಿಷನ್, ಟೈಮರ್, ವಾಟರ್‌ಮಾರ್ಕ್, ವಿಡಿಯೋ ಟೈಮ್‌ಲ್ಯಾಪ್ಸ್, ಸ್ನ್ಯಾಪ್ ಇನ್ ವಿಡಿಯೋ ರೆಕಾರ್ಡಿಂಗ್ ಆಯ್ಕೆಗಳು ಇವೆ.
ಮೊಟೊ G04 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು USB-C ಪೋರ್ಟ್ ಮೂಲಕ 15W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಅಲ್ಲದೇ ಇದು ಡ್ಯುಯಲ್ ಸಿಮ್ ಸ್ಲಾಟ್, 4G VoLTE, Wi-Fi 802.11ac, ಬ್ಲೂಟೂತ್ 5.0, GPS, ಡಾಲ್ಬಿ Atmos ಬೆಂಬಲದೊಂದಿಗೆ ಸಿಂಗಲ್ ಸ್ಪೀಕರ್ ಹೊಂದಿದೆ. ಇದರೊಂದಿಗೆ 3.5mm ಆಡಿಯೊ ಜ್ಯಾಕ್ ಮತ್ತು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನಂತಹ ಇತರೆ ಫೀಚರ್ಸ್ ಕಾಣಬಹುದಾಗಿದೆ.
ಮೊಟೊ G04 ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ಮಾಡೆಲ್ ಹಾಗೂ 8GB + 128GB ಸ್ಟೋರೇಜ್ ಮಾಡೆಲ್ ನಲ್ಲಿ ಲಭ್ಯ. ಈ ಫೋನ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








