ಈಗಲೇ ಬುಕ್ ಮಾಡಿ! 5000 ರಿಯಾಯಿತಿ.. 50MP + 50MP ಕ್ಯಾಮೆರಾಗಳು.. ಯಾವ ಫೋನ್? ಈಗ ಬೆಲೆ ಎಷ್ಟು?
ವಿವೋ ತನ್ನ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ವಿವೋ T3 ಅಲ್ಟ್ರಾ 5G (Vivo T3 Ultra 5G) ಬೆಲೆಯನ್ನು ಮತ್ತೊಮ್ಮೆ ಇಳಿಕೆ ಮಾಡಿದೆ. ವಿಶೇಷವೆಂದರೆ, ಈ ಫೋನಿನ ಬೆಲೆಯನ್ನು ಕಡಿಮೆ ಮಾಡುತ್ತಿರುವುದು ಇದು ಎರಡನೇ ಬಾರಿ. ಶಕ್ತಿಯುತ ಪ್ರೊಸೆಸರ್, ಅದ್ಭುತ ಡಿಸ್ಪ್ಲೇ ಮತ್ತು ಪವರ್ ಫುಲ್ ಬ್ಯಾಟರಿಯೊಂದಿಗೆ ಬರುವ ಈ ಮೊಬೈಲ್ ಪ್ರಸ್ತುತ, ಮೊದಲಿಗಿಂತ ಹೆಚ್ಚು ಕೈಗೆಟುಕುವಂತಾಗಿದೆ. ನೀವು ಬ್ಯಾಂಕ್ ಡಿಸ್ಕೌಂಟ್ ಮತ್ತು ಇಎಂಐ ಪ್ರಯೋಜನ ಸಹ ಪಡೆಯಬಹುದು. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ವಿವೋ T3 ಅಲ್ಟ್ರಾ 5G ಮೊಬೈಲ್ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಇದು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9200+ ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5,500mAh ಸಾಮರ್ಥ್ಯದ ಬ್ಯಾಟರಿ, 12GB RAM + 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳಿವೆ.

ವಿವೋ T3 ಅಲ್ಟ್ರಾ 5G ಹೊಸ ಬೆಲೆ ಮತ್ತು ಆಫರ್
8GB RAM + 128GB ಸ್ಟೋರೇಜ್ = 31,999 ರೂ.
ಹೊಸ ಬೆಲೆ = 27,999 ರೂ.
8GB RAM + 256GB ಸ್ಟೋರೇಜ್ = 33,999 ರೂ.
ಹೊಸ ಬೆಲೆ = 29,999 ರೂ.
12GB RAM + 256GB ಸ್ಟೋರೇಜ್ = 35,999 ರೂ.
ಹೊಸ ಬೆಲೆ = 31,999 ರೂ.
ಕಂಪನಿಯು ಜನವರಿಯಲ್ಲಿ ಮೊದಲ ಬಾರಿಗೆ ವಿವೋ T3 ಅಲ್ಟ್ರಾ 5G ಫೋನಿನ ಬೆಲೆಯನ್ನು 2,000 ರೂ. ಕಡಿತ ಮಾಡಿತ್ತು. ಇದೀಗ ಮತ್ತೊಮ್ಮೆ 2,000 ರೂ. ರಿಯಾಯಿತಿ ನೀಡಲಾಗಿದೆ. ಫ್ಲಿಪ್‌ಕಾರ್ಟ್ ಪ್ರಸ್ತುತ, ಹೆಚ್ಚುವರಿ ಕ್ಯಾಶ್‌ಬ್ಯಾಕ್ ನೀಡುತ್ತಿದೆ. ನೀವು ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳೊಂದಿಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಹೊಸ ಬೆಲೆ ಇಂದಿನಿಂದ (ಮೇ 1) ಜಾರಿಗೆ ಬಂದಿದೆ. ನೀವು ವಿವೋ ಇಂಡಿಯಾ ಇ-ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ಎಲ್ಲಾ ಪಾಲುದಾರ ಚಿಲ್ಲರೆ ಅಂಗಡಿಗಳಲ್ಲಿ ಈ ಫೋನನ್ನು ಖರೀದಿಸಬಹುದು. ಈ ಫೋನ್ ಲೂನಾರ್ ಗ್ರೇ ಮತ್ತು ಫಾರೆಸ್ಟ್ ಗ್ರೀನ್ ಬಣ್ಣಗಳಲ್ಲಿ ಬರುತ್ತದೆ.

ವಿವೋ T3 ಅಲ್ಟ್ರಾ 5G ವೈಶಿಷ್ಟ್ಯಗಳು
ವಿವೋ T3 ಅಲ್ಟ್ರಾ 5G ಸ್ಮಾರ್ಟ್‌ಫೋನ್ 6.78 ಇಂಚಿನ ಅಮೇಲೆಡ್ ಡಿಸ್ಪ್ಲೇ ಹೊಂದಿದೆ. ಇದು 2800 x 1260 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 4,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ವಿವೋ ಈ ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 9200+ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ Funtouch OS 14 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 12GB RAM ಮತ್ತು 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಜೊತೆಗೆ, 12GB ವಿಸ್ತೃತ RAM ಸಹ ಒಳಗೊಂಡಿದೆ.
ವಿವೋ T3 ಅಲ್ಟ್ರಾ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಅಳವಡಿಸಲಾಗಿದೆ. ಇದು ಹೆಚ್ಚುವರಿ ಲೈಟಿಂಗ್, ಫೆಸ್ಟಿವಲ್ ಪೋರ್ಟ್ರೇಟ್ ಮೋಡ್, ಎಐ ಎರೇಸರ್ ಮತ್ತು 'ಔರಾ ಲೈಟ್' ಹೊಂದಿದೆ.
ವಿವೋ T3 ಅಲ್ಟ್ರಾ 5G ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಪಡೆದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟಿರಿಯೊ ಸ್ಪೀಕರ್ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ 2.0 ಸೇರಿದಂತೆ ಹಲವು ಸೌಲಭ್ಯ ಒಳಗೊಂಡಿದೆ.


Click it and Unblock the Notifications








