ಮತ್ತೆ ಬೆಲೆ ಕುಸಿತ! 50MP ಸೆಲ್ಫಿ ಕ್ಯಾಮೆರಾ.. 256GB ಸ್ಟೋರೇಜ್.. ಈ ಸೊಗಸಾದ Vivo ಫೋನಿಗೆ ಇದೆಂಥಾ ಆಫರ್
ಬಹುನಿರೀಕ್ಷಿತ ವಿವೋ V50 5G (Vivo V50 5G) ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದು 34,999 ರೂ.ಗೆ ಲಭ್ಯವಿದೆ. ಈ ವಿವೋ ಮೊಬೈಲ್ ಇನ್ನೂ ಮಾರಾಟ ಪ್ರಾರಂಭಿಸಿಲ್ಲ. ಇದಕ್ಕೂ ಮೊದಲೇ, ಕಂಪನಿಯು ತನ್ನ ವಿವೋ V40e 5G ( Vivo V40e 5G) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಅನ್ನು 2,500 ರೂ.ಗಳ ರಿಯಾಯಿತಿಯೊಂದಿಗೆ ಮಾರಾಟ ಮಾಡುತ್ತಿದೆ. ಬನ್ನಿ, ಈ ಫೋನಿನ ಮೂಲ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ V40e 5G ಮೊಬೈಲ್ ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ 28,499 ರೂ.ಗಳಿಗೆ ಖರೀದಿಗೆ ಲಭ್ಯವಿದೆ. ಈ ಫೋನಿನಲ್ಲಿ 50MP ಸೆಲ್ಫಿ ಕ್ಯಾಮೆರಾ ಮತ್ತು 50MP ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತಿದೆ. ಈ ಸ್ಮಾರ್ಟ್‌ಫೋನ್ 6.77 ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ವಿವೋ V40e 5G ಹೊಸ ಬೆಲೆ ಮತ್ತು ಆಫರ್
ವಿವೋ V40e 5G ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವನ್ನು 30,999 ರೂ.ಗೆ ಬಿಡುಗಡೆ ಮಾಡಲಾಗಿದೆ. ನೀವು ಪ್ರಸ್ತುತ, ಅಮೆಜಾನ್‌ನಲ್ಲಿ 2,500 ರೂ.ಗಳ ರಿಯಾಯಿತಿಯೊಂದಿಗೆ ಖರೀದಿಸಬಹುದು. ಎಲ್ಲಾ ಗ್ರಾಹಕರಿಗೆ 2,500 ರೂ. ರಿಯಾಯಿತಿ ಸಿಗುತ್ತದೆ. ಈ ಆಫರ್ ಲಾಭ ಪಡೆಯಲು ಯಾವುದೇ ಬ್ಯಾಂಕ್ ಕಾರ್ಡ್ ಅಗತ್ಯವಿಲ್ಲ. ಹೆಚ್‌ಡಿಎಫ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬ್ಯಾಂಕ್ ಆಫರ್ ಬರೋಡಾ, ಫೆಡರಲ್ ಅಥವಾ ಹೆಚ್‌ಎಸ್‌ಬಿಸಿ ಕ್ರೆಡಿಟ್ ಕಾರ್ಡ್ ಬಳಸಿ ಇಎಂಐ ಮಾಡಿದ್ದರೆ, 1000 ರೂ. ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಿದೆ. ನೀವು ಈ ಫೋನನ್ನು ಕೇವಲ 27,499 ರೂ.ಗೆ ನಿಮ್ಮದಾಗಿಸಿಕೊಳ್ಳಬಹುದು.
ವಿವೋ V40e 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ವಿವೋ V40e 5G ಸ್ಮಾರ್ಟ್‌ಫೋನ್ 6.77 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 3D ಕರ್ವ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇ 2,392 × 1,080 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಬೆಂಬಲ ಮತ್ತು 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ವಿವೋ V40e 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ Funtouch OS 14 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ವಿವೋ ಮೊಬೈಲ್ 8GB RAM ಹೊಂದಿದೆ. ಹಾಗೆಯೇ 8GB ವಿಸ್ತೃತ RAM ತಂತ್ರಜ್ಞಾನ ಒಳಗೊಂಡಿದೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ವಿವೋ V40e 5G ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕೆಲಸ ನಿರ್ವಹಿಸುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ವಿವೋ ಮೊಬೈಲ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ದೊಡ್ಡ ಬ್ಯಾಟರಿ
ವಿವೋ V40e 5G ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ನೀವು 42 ನಿಮಿಷಗಳಲ್ಲಿ ಈ ಫೋನನ್ನು ಶೇ.20 ರಿಂದ ಶೇ.100 ವರೆಗೆ ಸಂಪೂರ್ಣ ಚಾರ್ಜ್ ಮಾಡಬಹುದು.


Click it and Unblock the Notifications








