ಇಂದು vivo V50 ಫಸ್ಟ್ ಸೇಲ್; ಬೊಂಬಾಟ್ ಆಫರ್.. ದೊಡ್ಡ ಉಳಿತಾಯ.. ವಿಶೇಷತೆಗಳೇನು?
ವಿವೋ V50 (Vivo V50) ಮೊಬೈಲ್ ಇತ್ತೀಚೆಗೆ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದನ್ನು ವಿವೋ 'V' ಸರಣಿಯ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹೌದು, ಕಂಪನಿಯು ಈ ವರ್ಷ ಬಿಡುಗಡೆ ಮಾಡಿರುವ ಮೊದಲ ವಿವೋ ಫೋನ್ ಇದಾಗಿದೆ. ಇದು ಪ್ರೀಮಿಯಂ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ. ಅಂದಹಾಗೆ, ಇಂದಿನಿಂದ (ಫೆಬ್ರವರಿ 25) ಈ ಮೊಬೈಲ್ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಇದರ ಸ್ಟೈಲಿಶ್ ಡಿಸೈನ್ ಮತ್ತು ವೈಶಿಷ್ಟ್ಯಗಳು ಈಗಾಗಲೇ ವಿವೋ ಪ್ರಿಯರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಹಾಗಿದ್ರೆ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ ಬನ್ನಿ.
ವಿವೋ V50 ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ ಮೂರು 50 ಮೆಗಾಪಿಕ್ಸೆಲ್ ಕ್ಯಾಮೆರಾಗಳು ಲಭ್ಯವಿದೆ. ಈ ಫೋನ್ 6.77 ಇಂಚಿನ ದೊಡ್ಡ ಡಿಸ್ಪ್ಲೇ ಹೊಂದಿದೆ. ಹಾಗೆಯೇ 12GB RAM + 512GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು Vivo S20 ಫೋನಿನ ಮರುಬ್ರಾಂಡೆಡ್ ಆಗಿದೆ.

ವಿವೋ V50 ಬೆಲೆ ಮತ್ತು ಲಭ್ಯತೆ: ವಿವೋ V50 ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 34,999 ರೂ.ಗೆ ಮಾರಾಟವಾಗಲಿದೆ. ಫೋನಿನ 8GB RAM + 256GB ಸ್ಟೋರೇಜ್ ಆಯ್ಕೆಯು 36,999 ರೂ.ಗೆ ಬಿಡುಗಡೆಯಾಗಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್ ಅನ್ನು 40,999 ರೂ. ಬೆಲೆಗೆ ಖರೀದಿಸಬಹುದು.
ವಿವೋ ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಕೆಲವು ಆಫರ್‌ಗಳನ್ನು ನೀಡುತ್ತಿದೆ. ಎಚ್‌ಡಿಎಫ್‌ಸಿ ಮತ್ತು ಎಸ್‌ಬಿಐ ಬ್ಯಾಂಕ್ ಕಾರ್ಡ್‌ಗಳನ್ನು ಬಳಿಸಿ ಈ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಶೇ.10 ರಿಯಾಯಿತಿ ಲಭ್ಯವಿದೆ. ಇಂದು (ಫೆಬ್ರವರಿ 25) ಮಧ್ಯಾಹ್ನ 12 ಗಂಟೆಯಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ವಿವೋ ಫೋನ್ ರೋಸ್ ರೆಡ್, ಸ್ಟಾರಿ ಬ್ಲೂ ಮತ್ತು ಟೈಟಾನಿಯಂ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ವಿವೋ ಇಂಡಿಯಾದ ಇ-ಸ್ಟೋರ್‌ಗಳ ಮೂಲಕ ಮಾರಾಟವಾಗಲಿದೆ.
ವಿವೋ V50 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ: ವಿವೋ V50 ಫೋನ್ 6.77 ಇಂಚಿನ ಫುಲ್ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 2392 × 1080 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಒಳಗೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ: ಹೊಸ ವಿವೋ V50 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ Funtouch ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 12GB RAM ಹೊಂದಿದೆ. ಇದಕ್ಕೆ ಪೂರಕವಾಗಿ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಕ್ಯಾಮೆರಾ ಸೆಟಪ್: ವಿವೋ V50 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. ಹಾಗೆಯೇ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಸಹ ಒಳಗೊಂಡಿದೆ.
ಬ್ಯಾಟರಿ ಬ್ಯಾಕಪ್ ಹೇಗಿದೆ: ವಿವೋ V50 ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ಫೀಚರ್ಸ್: ನೂತನ ವಿವೋ V50 ಮೊಬೈಲ್ ಧೂಳು ಮತ್ತು ನೀರಿನಿಂದ ರಕ್ಷಣೆಗೆ IP68 + IP69 ರೇಟಿಂಗ್ ಅನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications








