Home
Deal of the day

1 ಲಕ್ಷದ ಫೋನ್..! 14000 ರಿಯಾಯಿತಿ.. 200MP ಕ್ಯಾಮೆರಾ, 6000mAh ಬ್ಯಾಟರಿ.. ಹೇಗೆ, ಎಲ್ಲಿ ಖರೀದಿಸಬೇಕು?

ವಿವೋ ಪ್ರಿಯರಿಗೆ ನಿಜವಾಗಿಯೂ ಇಷ್ಟವಾಗುವ ಸುದ್ದಿ ಇಲ್ಲಿದೆ. 200MP ಕ್ಯಾಮೆರಾ ಹೊಂದಿರುವ ಈ ವಿವೋ 5G ಮೊಬೈಲ್‌ಗೆ 14,000 ರೂ. ರಿಯಾಯಿತಿ ಲಭ್ಯವಿದೆ. ಹೌದು, ಅಮೆಜಾನ್‌ನಲ್ಲಿ ವಿವೋ X200 ಪ್ರೊ (Vivo X200 Pro) ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಲಾಗಿದೆ. ಬರೋಬ್ಬರಿ 1,01,999 ರೂ.ಗಳ ಈ ದೈತ್ಯ ಸ್ಮಾರ್ಟ್‌ಫೋನ್ 90,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನನ್ನು ಕಡಿಮೆ ದರದಲ್ಲಿ ಹೇಗೆ ಮತ್ತು ಎಲ್ಲಿ ಖರೀದಿಸಬಹುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ನೀವು ವಿವೋ X200 ಪ್ರೊ 5G ಖರೀದಿಸಲು ಬಯಸಿದರೆ, ದೊಡ್ಡ ಉಳಿತಾಯ ಮಾಡಬಹುದು. ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ Vivo X200 ಜೊತೆಗೆ ಬಿಡುಗಡೆಯಾಗಿತ್ತು. ಈ ಮೊಬೈಲ್ Vivo X100 ಸರಣಿಯ ಬಳಿಕ ಬರುತ್ತದೆ. ಈ ಫೋನ್ ಫೋಟೋಗ್ರಫಿ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಉನ್ನತ ದರ್ಜೆಯ ಫೋಟೋಗಳನ್ನು ಕ್ಲಿಕ್ಕಿಸಲು ಇದು ಸೂಕ್ತವಾಗಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಪ್ರಸ್ತುತ, ಈ ಫೋನಿಗೆ 14,000 ರೂ.ಗಳ ರಿಯಾಯಿತಿ ಜೊತೆಗೆ ಹೆಚ್ಚುವರಿಯಾಗಿ ಬ್ಯಾಂಕ್ ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ.

Vivo X200 Pro ಬೆಲೆ ಇಳಿಕೆ! 14,000 ರಿಯಾಯಿತಿ.. ಎಲ್ಲಿ, ಹೇಗೆ ಖರೀದಿಸಬೇಕು?

ವಿವೋ X200 ಪ್ರೊ 5G ಹೊಸ ಬೆಲೆ ಮತ್ತು ಆಫರ್

ವಿವೋ X200 ಪ್ರೊ ಸ್ಮಾರ್ಟ್‌ಫೋನ್ ಕೇವಲ ಒಂದು ಸ್ಟೋರೇಜ್‌ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. 16GB RAM ಮತ್ತು 512GB ಸ್ಟೋರೇಜ್ ಹೊಂದಿರುವ ಫೋನನ್ನು 1,01,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಅಮೆಜಾನ್‌ನಲ್ಲಿ ಪ್ರಸ್ತುತ ಈ ಸ್ಮಾರ್ಟ್‌ಫೋನ್ ಖರೀದಿ ಮೇಲೆ 7,000 ರೂ.ಗಳ ಫ್ಲಾಟ್ ರಿಯಾಯಿತಿ ನೀಡಲಾಗುತ್ತಿದೆ. ಈ ಮೂಲಕ ಇದರ ಬೆಲೆ 94,999 ರೂ.ಗಳಿಗೆ ಇಳಿಕೆಯಾಗಿದೆ.

ಹೆಚ್ಚುವರಿಯಾಗಿ, ಆಯ್ದ ಕ್ರೆಡಿಟ್ ಕಾರ್ಡ್‌ಗಳಲ್ಲಿ 7,000 ರೂ.ಗಳ ತ್ವರಿತ ಬ್ಯಾಂಕ್ ರಿಯಾಯಿತಿ ಸಹ ಲಭ್ಯವಿದೆ. ಒಟ್ಟಾರೆ ಈ ಫೋನನ್ನು 87,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದಲ್ಲದೆ, ನೀವು 68,850 ರೂ.ಗಳ ಎಕ್ಸ್‌ಚೇಂಜ್ ಆಫರ್ ಸಹ ಪಡೆಯಬಹುದು. ಜೊತೆಗೆ ನೋ ಕಾಸ್ಟ್ ಇಎಂಐ ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಫೋನಿಗೆ ಈವರೆಗೆ ನೀಡಲಾದ ಅತ್ಯಂತ ಕಡಿಮೆ ಬೆಲೆ ಇದಾಗಿದೆ.

ವಿವೋ X200 ಪ್ರೊ ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ವಿವೋ X200 ಪ್ರೊ ಮೊಬೈಲ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 4,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಆರ್ಮರ್ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ವಿವೋ X200 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 9400 ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್‌ ಅನ್ನು ಹೊಂದಿರುವ ಭಾರತ ಎರಡನೇ ಮೊಬೈಲ್ ಇದಾಗಿದೆ. ಈ ಫೋನ್ ಆಂಡ್ರಾಯ್ಡ್‌ 15 ಆಧಾರಿತ FunTouch ಓಎಸ್‌ 15 ಜೊತೆಗೆ ಕೆಲಸ ಮಾಡುತ್ತದೆ. ಇದು 16GB RAM ನೊಂದಿಗೆ ಬರುತ್ತದೆ. ಇದಕ್ಕೆ ಪೂರಕವಾಗಿ 512GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

Vivo X200 Pro ಬೆಲೆ ಇಳಿಕೆ! 14,000 ರಿಯಾಯಿತಿ.. ಎಲ್ಲಿ, ಹೇಗೆ ಖರೀದಿಸಬೇಕು?

ಟ್ರಿಪಲ್ ಕ್ಯಾಮೆರಾ ಸೆಟಪ್

ವಿವೋ X200 ಪ್ರೊ ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಲೆನ್ಸ್ ಮತ್ತು 200 ಮೆಗಾಪಿಕ್ಸೆಲ್ Zeiss APO ಟೆಲಿಫೋಟೋ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಬೃಹತ್ ಬ್ಯಾಟರಿ

ವಿವೋ X200 ಪ್ರೊ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ 30W ವೈರ್‌ಲೆಸ್ ಚಾರ್ಜಿಂಗ್‌ ತಂತ್ರಜ್ಞಾನ ಸಹ ಹೊಂದಿದೆ.

ಇತರೆ ವೈಶಿಷ್ಟ್ಯಗಳು

ವಿವೋ X200 ಪ್ರೊ ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP68, IP69 ರೇಟಿಂಗ್ ಪಡೆದಿದೆ. ಇದರೊಂದಿಗೆ ಎನ್‌ಎಫ್‌ಸಿ ಮತ್ತು ಸರ್ಕಲ್ ಟು ಸರ್ಚ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Vivo X200 Pro gets ₹14000 discount on amazon: Here’s How to Get this Deal
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+