ಎಂಥಾ ಅವಕಾಶ! ಮೊದಲೇ ಅಗ್ಗದ ಫೋನ್.. ಮತ್ತೆ ಬೆಲೆ ಇಳಿಕೆ.. ಕೇವಲ 7,499 ರೂ.ಗೆ ಸೇಲ್
ವಿವೋ ತನ್ನ ಸೊಗಸಾದ ಫೋನಿನ ಬೆಲೆಯನ್ನು ದಿಢೀರನೆ ಇಳಿಕೆ ಮಾಡಿದೆ. ನೀವು 7,500 ರೂ. ಗಿಂತ ಕಡಿಮೆ ಬೆಲೆಗೆ ಈ ಫೋನನ್ನು ಖರೀದಿಸಬಹುದು. ಹೌದು, ವಿವೋ ತನ್ನ ಅಗ್ಗದ 4G ಫೋನ್ ವಿವೋ Y18i (Vivo Y18i) ಬೆಲೆಯನ್ನು ಇಳಿಕೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಅನ್ನು ಕಳೆದ ವರ್ಷ ಜುಲೈನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದನ್ನು ಅಗ್ಗದ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಪರಿಚಯಿಸಲಾಗಿತ್ತು. ಪ್ರಸ್ತುತ, ಈ ಫೋನಿನ ಖರೀದಿ ಮೇಲೆ ರಿಯಾಯಿತಿ ಘೋಷಿಸಲಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ವಿವೋ ತನ್ನ 'Y' ಸರಣಿಯಲ್ಲಿ ಈ ಫೋನನ್ನು ಪರಿಚಯಿಸಿದೆ. ಅಗ್ಗದ ದರ ಎಂಬ ಕಾರಣಕ್ಕೆ ಕಾರ್ಯಕ್ಷಮತೆ ಮತ್ತು ಅತ್ಯುತ್ತಮ ವೈಶಿಷ್ಟ್ಯಗಳಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಫೋನಿನಲ್ಲಿ 6.56 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಯುನಿಸಾಕ್ ಟೈಗರ್ T612 ಪ್ರೊಸೆಸರ್ ಒಳಗೊಂಡಿದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಮತ್ತು 15W ವೇಗದ ಚಾರ್ಜಿಂಗ್ ಹೊಂದಿದೆ. 64GB ಸ್ಟೋರೇಜ್, ಆಂಡ್ರಾಯ್ಡ್ ಓಎಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಮಾರಾಟ ಬೆಲೆ ತಿಳಿಯಲು ಮುಂದೆ ಓದಿ.

ವಿವೋ Y18i ಹೊಸ ಬೆಲೆ ಮತ್ತು ಆಫರ್
ಕಂಪನಿಯು ವಿವೋ Y18i ಮೊಬೈಲ್ ಅನ್ನು ಕೇವಲ ಒಂದೇ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಆಂತರಿಕ ಸ್ಟೋರೇಜ್ ಆಯ್ಕೆ ಹೊಂದಿದೆ. ಇದನ್ನು 7,999 ರೂ.ಗೆ ಬಿಡುಗಡೆ ಮಾಡಲಾಯಿತು. ಪ್ರಸ್ತುತ, ಕಂಪನಿಯು ಈ ಫೋನಿನ ಬೆಲೆಯನ್ನು 500 ರೂ.ಗಳಷ್ಟು ಕಡಿಮೆ ಮಾಡಿದೆ. ಅಂದರೆ, ಈ ಫೋನ್ ಕೇವಲ 7,499 ರೂ.ಗಳಿಗೆ ಮಾರಾಟವಾಗುತ್ತಿದೆ.
ವಿವೋ Y18i ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ವಿವೋ Y18i ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಡಿಸ್ಪ್ಲೇ ಹೊಂದಿದೆ. ಇದು ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1,612 × 720 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಇದರೊಂದಿಗೆ 90Hz ರಿಫ್ರೆಶ್ ದರ ಮತ್ತು 528 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಶಕ್ತಿಶಾಲಿ ಪ್ರೊಸೆಸರ್
ವಿವೋ Y18i ಮೊಬೈಲ್ ಯುನಿಸಾಕ್ ಟೈಗರ್ T612 ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ ಓಎಸ್ ಮತ್ತು ಫಂಟೌಚ್ ಓಎಸ್ 14.0 ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 4GB RAM ಹೊಂದಿದೆ. ಇದರ ಸಹಾಯದಿಂದ ನೀವು 8GB RAM ಬಳಸಬಹುದು. ಇದರೊಂದಿಗೆ 64GB ಸ್ಟೋರೇಜ್ ಆಯ್ಕೆ ಇದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ಸ್ಟೋರೇಜ್ ವಿಸ್ತರಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್
ವಿವೋ Y18i ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 0.08 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ Y18i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ವಿವೋ ನೀರು ಮತ್ತು ಧೂಳಿನ ನಿರೋಧಕ IP54 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್, ವೈ-ಫೈ, ಬ್ಲೂಟೂತ್, 4G ನೆಟ್‌ವರ್ಕ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








