Home
Deal of the day

5500 ಅಗ್ಗ! 1750 ಡಿಸ್ಕೌಂಟ್.. ಕಡಿಮೆ ಬೆಲೆಗೆ Vivo 5G ಫೋನ್‌ ಸೇಲ್!

ದೀಪಾವಳಿ ಸಂಭ್ರಮ ಮುಗಿದರೂ, ಆಫರ್‌ಗಳಿಗೆ ಭರಾಟೆ ಕಡಿಮೆ ಆಗಿಲ್ಲ. ವಿವೋ (Vivo) ತನ್ನ ಹೊಸ Vivo ಫೋನಿನ ಮೇಲೆ ಬಂಪರ್ ಡಿಸ್ಕೌಂಟ್ ನೀಡುತ್ತಿದೆ. ಹೌದು, ಕಂಪನಿಯು ಕಳೆದ ತಿಂಗಳು ಭಾರತದಲ್ಲಿ ಹೊಸ ವಿವೋ Y300 ಪ್ಲಸ್ (Vivo Y300 Plus) ಮೊಬೈಲ್ ಅನ್ನು ಬಿಡುಗಡೆ ಮಾಡಿತ್ತು. ಇದನ್ನು 23,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ, ಫೋನಿನ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಜೊತೆಗೆ, 1750 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿವೋ Y300 ಪ್ಲಸ್ ಫೋನನ್ನು ಅಮೆಜಾನ್‌ನಲ್ಲಿ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಇದೆ. ಜೊತೆಗೆ 8GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 44W ಫ್ಲ್ಯಾಷ್ ಚಾರ್ಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕಡಿಮೆ ಬೆಲೆಗೆ Vivo 5G ಫೋನ್‌ ಸೇಲ್; 5500 ಅಗ್ಗ.. 1750 ಡಿಸ್ಕೌಂಟ್!

ವಿವೋ Y300 ಪ್ಲಸ್ ಬೆಲೆ ಮತ್ತು ಆಫರ್‌ಗಳು

ನೀವು, ಅಮೆಜಾನ್‌ನಲ್ಲಿ ವಿವೋ Y300 ಪ್ಲಸ್‌ ಫೋನನ್ನು ಖರೀದಿಸಬಹುದು. ಕಂಪನಿಯು 1000, 1250, 1500 ಮತ್ತು 1750 ರಿಯಾಯಿತಿ ನೀಡುತ್ತಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೇಲೆ 1750 ರೂ.ಗಳ ಡಿಸ್ಕೌಂಟ್ ಲಭ್ಯವಿದೆ. ನೀವು, 12 ಮತ್ತು 18 ತಿಂಗಳವರೆಗೆ ಇಎಂಐ ಮಾಡಿದರೆ, 1500 ರೂ. ತ್ವರಿತ ರಿಯಾಯಿತಿ ಸಿಗುತ್ತದೆ.

6 ಮತ್ತು 9 ತಿಂಗಳ ಇಎಂಐ ಪಾವತಿಗಳ ಮೇಲೆ 1250 ರೂ. ಡಿಸ್ಕೌಂಟ್ ಲಭ್ಯವಿದೆ. ಯೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಂಐ ಮತ್ತು ಪಿಎನ್‌ಬಿ (PNB) ಕ್ರೆಡಿಟ್ ಕಾರ್ಡ್ ಅಲ್ಲದ ಇಎಂಐ ಪಾವತಿ ಮೇಲೆ 1000 ರೂ. ರಿಯಾಯಿತಿ ಪಡೆಯಬಹುದು. ಅಮೆಜಾನ್‌ನಲ್ಲಿ ವಿವೋ Y300 ಪ್ಲಸ್ ಮೊಬೈಲ್ ಖರೀದಿ ಮೇಲೆ 6 ತಿಂಗಳವರೆಗೆ ನೋ ಕಾಸ್ಟ್‌ ಇಎಂಐ ಲಭ್ಯವಿದೆ.

ವಿವೋ Y300 ಪ್ಲಸ್ ವೈಶಿಷ್ಟ್ಯಗಳು

ಡಿಸ್ಪೇ ವಿವರ

ವಿವೋ Y300 ಪ್ಲಸ್ ಮೊಬೈಲ್ 6.78 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 2400 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಲಭ್ಯವಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ವಿವೋ Y300 ಪ್ಲಸ್ ಅನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 695 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಪ್ರೊಸೆಸರ್‌ ಅನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ.

ಸ್ಟೋರೇಜ್ ಆಯ್ಕೆ

ವಿವೋ Y300 ಪ್ಲಸ್ ಸ್ಮಾರ್ಟ್‌ಫೋನ್ 8GB RAM ಹೊಂದಿದೆ. ಈ ಮೊಬೈಲ್ 8GB ವಿಸ್ತರಿತ RAM ತಂತ್ರಜ್ಞಾನವನ್ನು ಹೊಂದಿದೆ. ಈ ಫೋನಿನಲ್ಲಿ 8GB ಭೌತಿಕ RAM ಜೊತೆಗೆ 16GB RAM ಲಭ್ಯವಿದೆ. ಇದು 128GB ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಇದನ್ನು ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್

ವಿವೋ Y300 ಪ್ಲಸ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನ್ ಎಲ್ಇಡಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜರ್

ಕಂಪನಿಯು ವಿವೋ Y300 ಪ್ಲಸ್ ಅನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 44W ಫ್ಲ್ಯಾಷ್ ಚಾರ್ಜ್ ತಂತ್ರಜ್ಞಾನವನ್ನು ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ವಿವೋ Y300 ಪ್ಲಸ್ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP54 ರೇಟಿಂಗ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Vivo Y300 Plus Available With huge discount on amazon sale: check price, specs and more. ವಿವೋ Y300 ಪ್ಲಸ್ ಮೊಬೈಲ್ ಬೆಲೆ ಇಳಿಕೆಯಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+