ಅಮೆಜಾನ್ ಆಫರ್! 6000mAh ಬ್ಯಾಟರಿ.. 50MP ಕ್ಯಾಮೆರಾ.. ಈ Vivo 5G ಫೋನಿನ ಬೆಲೆ ಭಾರೀ ಕಡಿತ
ಅಮೆಜಾನ್ ಸ್ಮಾರ್ಟ್‌ಫೋನ್ ಪ್ರಿಯರಿಗೆ ಬೊಂಬಾಟ್ ಆಫರ್ ಘೋಷಿಸಿದೆ. ನೀವು, ಹೊಸ ವಿವೋ 5G ಮೊಬೈಲ್ ಖರೀದಿಸಲು ಬಯಸಿದರೆ, ಈ ಅವಕಾಶ ಕಳೆದುಕೊಳ್ಳಬೇಡಿ. ಹೌದು, ವಿವೋ Y58 5G (Vivo Y58 5G) ಫೋನ್ ಅಮೆಜಾನ್‌ನಲ್ಲಿ ಭಾರೀ ಬೆಲೆ ಇಳಿಕೆ ಕಂಡಿದೆ. ನೀವು ಶೇ.28 ರಷ್ಟು ರಿಯಾಯಿತಿಯೊಂದಿಗೆ ದರದಲ್ಲಿ ಖರೀದಿಗೆ ಲಭ್ಯವಿದೆ. ಬ್ಯಾಂಕ್ ಆಫರ್, ಕ್ಯಾಶ್‌ಬ್ಯಾಕ್ ಮತ್ತು ಎಕ್ಸ್‌ಚೇಂಜ್ ಆಫರ್ ಮೂಲಕ ಮತ್ತಷ್ಟು ಕಡಿಮೆ ಬೆಲೆಗೆ ಈ ಫೋನನ್ನು ಕೊಳ್ಳಬಹುದು. ವಿವೋ Y58 5G ಮೂಲ ಬೆಲೆ, ರಿಯಾಯಿತಿ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ನೀವು 16 ಸಾವಿರ ರೂ.ಗಿಂತ ಕಡಿಮೆ ಬೆಲೆಯಲ್ಲಿ ವಿವೋ 5G ಫೋನ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆ ಎಂದರೆ ತಪ್ಪಾಗಲಾರದು. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನೊಂದಿದೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6000mAh ಬಿಗ್ ಬ್ಯಾಟರಿ ಒಳಗೊಂಡಿದೆ. 128GB ಸ್ಟೋರೇಜ್ ಮತ್ತು 44W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಗ್ರಾಹಕರ ಗಮನ ಸೆಳೆದಿದೆ.

ವಿವೋ Y58 5G ಹೊಸ ಬೆಲೆ
ವಿವೋ Y58 5G ಫೋನ್ 8GB + 128GB ಸ್ಟೋರೇಜ್ ರೂಪಾಂತರದಲ್ಲಿ ಮಾರಾಟವಾಗುತ್ತಿದೆ. ಕಂಪನಿಯು 19,499 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ ಶೇ.28 ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಿದೆ. ನೀವು 17,278 ರೂ. ಬೆಲೆಗೆ ಕೊಳ್ಳಬಹುದು. ಜೊತೆಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, 2000 ರೂ.ಗಳ ರಿಯಾಯಿತಿ ಸಹ ಪಡೆಯಬಹುದು. ಈ ಮೂಲಕ ಕೇವಲ 15,278 ರೂ.ಗೆ ಈ ಫೋನನ್ನು ನಿಮ್ಮದಾಗಿಸಿಕೊಳ್ಳಬಹುದು. ಇದು ಹಿಮಾಲಯನ್ ಬ್ಲೂ ಮತ್ತು ಸುಂದರಬನ್ ಗ್ರೀನ್ ಬಣ್ಣದಲ್ಲಿ ಮರಾಟವಾಗುತ್ತಿದೆ.
ವಿವೋ Y58 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ವಿವೋ Y58 5G ಸ್ಮಾರ್ಟ್‌ಫೋನ್ 6.72 ಇಂಚಿನ ದೊಡ್ಡ ಡಿಸ್ಪ್ಲೇಯನ್ನು ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2408 x 1080 ಪಿಕ್ಸೆಲ್ ರೆಸೆಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1024 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ವಿವೋ Y58 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್ 14 ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 8GB RAM + 128GB ಸ್ಟೋರೇಜ್ ಮತ್ತು 8GB ವಿಸ್ತೃತ RAM ಹೊದಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಡ್ಯುಯಲ್ ಕ್ಯಾಮೆರಾ ಸೆಟಪ್
ವಿವೋ Y58 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ದೊಡ್ಡ ಬ್ಯಾಟರಿ
ವಿವೋ Y58 5G ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ಧೂಳು ಮತ್ತು ನೀರಿನಿಂದ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಡ್ಯುಯಲ್ ಸಿಮ್, 4G, 5G, ಸ್ಟೀರಿಯೋ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








