Vivo: ವಿವೋ ಪ್ರಿಯರಿಗೆ ಸಿಹಿಸುದ್ದಿ.. ಈ 5G ಫೋನಿಗೆ ಭಾರೀ ರಿಯಾಯಿತಿ.. ಈಗ ಬಿಟ್ಟರೆ ಮತ್ತೆ ಸಿಗಲ್ಲ!
ವಿವೋ ಮೊಬೈಲ್‌ಗಳು ಯುವಕರ ಫೇವರಿಟ್ ಆಗಿವೆ. ವಿವೋ ಕೂಡ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಫೋನ್‌ಗಳನ್ನು ಪರಿಚಯಿಸುತ್ತಿದೆ. ಜೊತೆಗೆ, ತನ್ನ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತದೆ. ಅದರಂತೆ, ಕಂಪನಿಯು ವಿವೋ Y58 5G (Vivo Y58 5G) ಫೋನಿನ ಬೆಲೆಯನ್ನು ಕಡಿತಗೊಳಿಸಿದೆ. ಶೇ.27 ರಷ್ಟು ರಿಯಾಯಿತಿಯೊಂದಿಗೆ ಮಾರಾಟ ಮಾಡುತ್ತಿದೆ. ಜೊತೆಗೆ, 1000 ರೂ. ಕ್ಯಾಶ್‌ಬ್ಯಾಕ್ ನೀಡುತ್ತಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ನೀವು, 18 ಸಾವಿರ ರೂ.ಗಿಂತ ಕಡಿಮೆ ಬೆಲೆಯಲ್ಲಿ ಉತ್ತಮ 5G ಫೋನ್ ಕೊಳ್ಳಲು ಬಯಸಿದರೆ, ವಿವೋ Y58 5G ಸೂಕ್ತ ಆಯ್ಕೆಯಾಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.72 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಹಾಗೆಯೇ 128GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 44W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ವಿವೋ Y58 5G ಬೆಲೆ ಮತ್ತು ಆಫರ್‌ಗಳು
ವಿವೋ Y58 5G ಫೋನ್ 8GB + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಇದನ್ನು 19,499 ರೂ.ಗೆ ಬಿಡುಗಡೆ ಮಾಡಲಾಗಿತ್ತು. ನಿವು, ಹಿಮಾಲಯನ್ ಬ್ಲೂ ಅಥವಾ ಸುಂದರಬನ್ ಗ್ರೀನ್ ಬಣ್ಣದಲ್ಲಿ ಖರೀದಿಸಬಹುದು. ಪ್ರಸ್ತುತ, ಅಮೆಜಾನ್‌ನಲ್ಲಿ ಶೇ.27 ರಷ್ಟು ಡಿಸ್ಕೌಂಟ್ ನಿಡಲಾಗುತ್ತಿದೆ. ರಿಯಾಯಿತಿಯೊಂದಿಗೆ ಈ ಫೋನನ್ನು 17,499 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಜೊತೆಗೆ, 1000 ರೂ. ಕ್ಯಾಶ್‌ಬ್ಯಾಕ್ ಪಡೆಯಬಹುದು. ಇದು ಅಮೆಜಾನ್, ವಿವೋ ಇಂಡಿಯಾ ಇ-ಸ್ಟೋರ್‌ನಲ್ಲಿ ಖರೀದಿಗೆ ಲಭ್ಯವಿದೆ.
ಈ ಸುದ್ದಿ ಓದಿದ್ದೀರಾ?: ಮೋದಿ ಖಡಕ್ ನಿರ್ಧಾರ: 28,000ಕ್ಕೂ ಹೆಚ್ಚು URL ಬ್ಲಾಕ್.. ಈ ರೀತಿ ಪೋಸ್ಟ್ ಮಾಡಿದ್ರೆ ನಿಮಗೂ ಇದೇ ಗತಿ!
ವಿವೋ Y58 5G ವೈಶಿಷ್ಟ್ಯಗಳು
ದೊಡ್ಡ ಡಿಸ್ಪ್ಲೇ
ವಿವೋ Y58 5G ಮೊಬೈಲ್ 6.72 ಇಂಚಿನ ದೊಡ್ಡ ಡಿಸ್ಪ್ಲೇಯನ್ನು ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2,408 x 1,080 ಪಿಕ್ಸೆಲ್ ರೆಸೆಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1,024 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪವರ್ ಫುಲ್ ಪ್ರೊಸೆಸರ್
ವಿವೋ Y58 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು 8GB RAM + 128GB ಸ್ಟೋರೇಜ್ ಮತ್ತು 8GB ವಿಸ್ತೃತ RAM ಹೊದಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್ 14 ನಲ್ಲಿ ಕೆಲಸ ನಿರ್ವಹಿಸುತ್ತದೆ.

ಅದ್ಭುತ ಕ್ಯಾಮೆರಾ
ವಿವೋ Y58 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಶಕ್ತಿಶಾಲಿ ಬ್ಯಾಟರಿ
ವಿವೋ Y58 5G ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ವಿವೋ Y58 5G ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ಧೂಳು ಮತ್ತು ನೀರಿನಿಂದ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ವೈ-ಫೈ, ಬ್ಲೂಟೂತ್, ಡ್ಯುಯಲ್ ಸಿಮ್, 4G, 5G, ಸ್ಟೀರಿಯೋ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳು ಲಭ್ಯವಿದೆ.


Click it and Unblock the Notifications








