Home
Deal of the day

ಶಿಯೋಮಿ ಈ ದೈತ್ಯ ಫೋನಿಗೆ ಭರ್ಜರಿ ಡಿಸ್ಕೌಂಟ್‌; ಈ ಆಫರ್‌ ಬಿಡಬೇಡಿ!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ (Amazon) ಈಗಾಗಲೇ ಆಕರ್ಷಕ ಕೊಡುಗೆಗಳ ಮೂಲಕ ಶಾಪಿಂಗ್‌ ಪ್ರಿಯರ ಗಮನ ಸೆಳೆದಿದೆ. ಅಮೆಜಾನ್‌ ಹಬ್ಬದ ಹಾಗೂ ವಿಶೇಷ ದಿನಗಳಂದು ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಡಿಸ್ಕೌಂಟ್‌ ಸೇಲ್‌ ಮೇಳಗಳನ್ನು ಆಯೋಜಿಸುತ್ತದೆ. ಸದ್ಯ ಅಮೆಜಾನ್‌ 'ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌' ಅನ್ನು ಘೋಷಿಸಿದ್ದು, ಅದಕ್ಕೂ ಮೊದಲೇ ಅಮೆಜಾನ್ ಕಿಕ್‌ಸ್ಟಾರ್ಟರ್ ಡೀಲ್ಸ್‌ (kickstarter deals) ಪ್ರಾರಂಭ ಮಾಡಿದೆ. ಇದರಲ್ಲಿ ದೈತ್ಯ ಫೋನ್‌ಗಳು ಬೊಂಬಾಟ್‌ ಆಫರ್ ಪಡೆದಿವೆ.

ಹೌದು, ಅಮೆಜಾನ್ ಕಿಕ್‌ಸ್ಟಾರ್ಟರ್ ಡೀಲ್ಸ್‌ (kickstarter deals) ನಲ್ಲಿ ಹೈ ಎಂಡ್ ಮಾದರಿಯ ಕೆಲ ಮೊಬೈಲ್‌ಗಳು ಆಕರ್ಷಕ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಅವುಗಳ ಪೈಕಿ ಶಿಯೋಮಿ ಸಂಸ್ಥೆಯ ಶಿಯೋಮಿ 14 (Xiaomi 14) ಫೋನ್‌ ಶೇ. 25% ರಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ ಇದೆ. ಆರಂಭಿಕ ವೇರಿಯಂಟ್‌ 59,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಬ್ಯಾಂಕ್‌ ಆಫರ್‌ ಸಹ ಸಿಗಲಿವೆ.

ಶಿಯೋಮಿ ಈ ದೈತ್ಯ ಫೋನಿಗೆ ಭರ್ಜರಿ ಡಿಸ್ಕೌಂಟ್‌; ಈ ಆಫರ್‌ ಬಿಡಬೇಡಿ!

ಅಂದಹಾಗೆ ಶಿಯೋಮಿ 14 ಸ್ಮಾರ್ಟ್‌ಫೋನ್‌ 12GB RAM ಮತ್ತು 512GB ಸ್ಟೋರೇಜ್‌ ವೇರಿಯಂಟ್‌ ಮಾದರಿಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಇದು ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಪವರ್‌ ಪಡೆದಿದೆ. ಹಾಗಾದರೆ ಶಿಯೋಮಿ 14 ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 14 - ಫೀಚರ್ಸ್‌ ಮಾಹಿತಿ

ಶಿಯೋಮಿ 14 ಸ್ಮಾರ್ಟ್‌ಫೋನ್‌ 6.3 ಇಂಚಿನ ಕೇಂದ್ರಿತ ಪಂಚ್-ಹೋಲ್ ಫ್ಲಾಟ್ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು 2670 x 1200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಜೊತೆಗೆ ಡಿಸ್‌ಪ್ಲೇಯು 460 PPI ಮತ್ತು 1-120Hz ರಿಫ್ರೆಶ್ ರೇಟ್ (LTPO) ರೆಸಲ್ಯೂಶನ್ ಹೊಂದಿದೆ. ಇದು ಡಾಲ್ಬಿ ವಿಷನ್, ಡಿಸಿ ಡಿಮ್ಮಿಂಗ್, ಮತ್ತು 3000 ನಿಟ್ಸ್ ಲೋಕಲ್‌ ಪೀಕ್ ಬ್ರೈಟ್‌ನೆಸ್ ಲೆವೆಲ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ 14 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಓಎಸ್ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಇದನ್ನು ಲಿಕ್ವಿಡ್ ಕೂಲಿಂಗ್ ಸಿಸ್ಟಮ್‌ನೊಂದಿಗೆ ಜೋಡಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಆಯ್ಕೆಯಲ್ಲಿ ಪಡೆದಿದೆ.

ಶಿಯೋಮಿ 14 ಸ್ಮಾರ್ಟ್‌ಫೋನ್‌ ಲೈಕಾ-ಟ್ಯೂನ್ಡ್ ಕ್ಯಾಮೆರಾಗಳನ್ನು ಹೊಂದಿದೆ. ಇದು ಹಿಂಭಾಗದಲ್ಲಿ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ 3.2x ಫ್ಲೋಟಿಂಗ್ ಟೆಲಿಫೋಟೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಶಿಯೋಮಿ 14 ಸ್ಮಾರ್ಟ್‌ಫೋನ್‌ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 90W ವೈರ್ಡ್, 50W ವಾಯರ್‌ಲೆಸ್ ಮತ್ತು 10W ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಇದಲ್ಲದೆ ಸ್ಮಾರ್ಟ್‌ಫೋನ್‌ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಅಟ್ಮಾಸ್-ಬೆಂಬಲಿತ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಎಕ್ಸ್-ಆಕ್ಸಿಸ್ ಲೀನಿಯರ್ ವೈಬ್ರೇಶನ್ ಮೋಟಾರ್ ನಂತಹ ಆಯ್ಕೆಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ 7, ಬ್ಲೂಟೂತ್ 5.4, GNSS, NFC, ಮತ್ತು USB 3.2 ಅನ್ನು ಬೆಂಬಲಿಸಲಿದೆ. ಅಲ್ಲದೇ ಇದು ಕಪ್ಪು, ಬಿಳಿ ಅಥವಾ ಜೇಡ್ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Xiaomi 14 available at huge price drop on amazon website. check offer and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+